ಚೆಕ್‌ ಬೌನ್ಸ್‌ ಪ್ರಕರಣ: ಮಾಜಿ ಸಚಿವ ನಾಗೇಂದ್ರಗೆ ₹1.25 ಕೋಟಿ ಪಾವತಿಸಲು ಕೋರ್ಟ್‌ ಆದೇಶ

ಬೆಂಗಳೂರು : ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಬಿ ನಾಗೇಂದ್ರ ಅವರನ್ನು ದೋಷಿ ಎಂದು ಬುಧವಾರ ತೀರ್ಮಾನಿಸಿರುವ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ದೂರುದಾರರಿಗೆ ₹1.25 ಕೋಟಿ ಪಾವತಿಸಬೇಕು. ತಪ್ಪಿದ್ದಲ್ಲಿ ಒಂದು ವರ್ಷ ಸಾಮಾನ್ಯ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದೆ. ವಿಎಸ್‌ಎಲ್‌ ಸ್ಟೀಲ್ಸ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ … Continued

ಮಾಜಿ ಸಚಿವ ಮನೋಹರ ತಹಶೀಲ್ದಾರ ನಿಧನ

ಬೆಂಗಳೂರು: ಮಾಜಿ ಸಚಿವ ಮನೋಹರ ತಹಶೀಲ್ದಾರ (78) ಇಂದು, ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಆಸ್ಪತ್ರೆಯಲ್ಲಿಅವರು ನಿಧನರಾಗಿದ್ದಾರೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ ತಹಶೀಲ್ದಾರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು … Continued

ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ ನಿಧನ

ಬೆಂಗಳೂರು : ಮಾಜಿ ಸಚಿವ, ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸ ಕೆ.ಎಚ್‌. ಶ್ರೀನಿವಾಸ (86) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ ಅವರು ಮೊದಲು ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಆನಂತರದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ನಲ್ಲಿಯೂ ಇದ್ದರು.. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ … Continued