ಕ್ರೂಸ್‌ ಹಡಗು ಡ್ರಗ್ಸ್ ಪ್ರಕರಣ: ಇನ್ನೂ ನಾಲ್ವರನ್ನು ಎನ್‌ಸಿಬಿ ವಶಕ್ಕೆ ನೀಡಿದ ಮುಂಬೈ ಕೋರ್ಟ್‌

ಮುಂಬೈ: ಕ್ರೂಸ್‌ ಹಡಗು ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಇನ್ನೂ ನಾಲ್ವರನ್ನು ಮುಂಬೈನ ನ್ಯಾಯಾಲಯವೊಂದು ಅಕ್ಟೋಬರ್ 14ರ ವರೆಗೆ ಎನ್‌ಸಿಬಿ ವಶಕ್ಕೆ ಒಪ್ಪಿಸಿದೆ. ಆ ಮೂಲಕ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ ಒಟ್ಟು 16 ಮಂದಿಯನ್ನು ಎನ್‌ಸಿಬಿ ವಶಕ್ಕೆ ನೀಡಲಾಗಿದೆ. ಗೋಪಾಲ್ ಆನಂದ್, ಸಮೀರ್ ಸೈಗಲ್, ಮಾನವ್ ಸಿಂಘಾಲ್ ಮತ್ತು … Continued