ವೀಡಿಯೊ..| ಹತ್ರಾಸ್‌ ಕಾಲ್ತುಳಿತದ ಘಟನೆ ನಂತರ ಭೋಲೆ ಬಾಬಾ ಬೆಂಗಾವಲು ಜೊತೆ ಗ್ರಾಮ ತೊರೆದ ವೀಡಿಯೊ ವೈರಲ್‌

ಲಕ್ನೋ : ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತದ ದುರ್ಘಟನೆಗೆ ಸಂಬಂಧಿಸಿದಂತೆ ಗುರುವಾರ ಆರು ಜರನ್ನು ಬಂಧಿಸಲಾಗಿದೆ. ಇದರ ಮಧ್ಯೆಯೇ ಸತ್ಸಂಗ ನಡೆಸಿದ ನಾರಾಯಣ ಸಾಕರ್‌ ಹರಿ ಅಲಿಯಾಸ್‌ ಭೋಲೆ ಬಾಬಾ (Bhole Baba) ಘಟನೆ ಬಳಿಕ ತನ್ನ ಬೆಂಬಲಿಗರೊಂದಿಗೆ ಸ್ಥಳದಿಂದ ವಾಹನದಲ್ಲಿ ಪರಾರಿಯಾಗಿರುವ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. ಈ ದೃಶ್ಯ ಪೆಟ್ರೋಲ್‌ … Continued

ಹತ್ರಾಸ್ ಕಾಲ್ತುಳಿತದ ಘಟನೆ : 6 ಮಂದಿ ಬಂಧನ, ಪ್ರಮುಖ ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಲಕ್ನೋ : ಹತ್ರಾಸ್‌ನಲ್ಲಿ ಸತ್ಸಂಗದ ನಂತರ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಅವರೆಲ್ಲರೂ ಸತ್ಸಂಗವನ್ನು ನಡೆಸುವ ಸಂಘಟನಾ ಸಮಿತಿಯ ಸದಸ್ಯರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಹತ್ರಾಸ್‌ನಲ್ಲಿ ನಾರಾಯಣ ಸಾಕರ್ ಹರಿ ಅಥವಾ ‘ಭೋಲೆ ಬಾಬಾ’ ನಡೆಸಿದ ಸತ್ಸಂಗದ ನಂತರ ನಡೆದ ಕಾಲ್ತುಳಿತದಲ್ಲಿ ಒಟ್ಟು … Continued

ಭಾರತದ ಸಾಮಾಜಿಕ ಜಾಲತಾಣದ ಸ್ಟಾರ್ಟ್ ಅಪ್ ʼ ಕೂʼ ಶೀಘ್ರವೇ ಸ್ಥಗಿತ…! Xನ ಪ್ರತಿಸ್ಪರ್ಧಿ ಎನ್ನಲಾಗಿದ್ದ ಕೂ ಏಕೆ ಸ್ಥಗಿತಗೊಳ್ಳುತ್ತಿದೆ..?

ನವದೆಹಲಿ: ಒಮ್ಮೆ X ಗೆ (ಹಿಂದೆ Twitter) ಪ್ರಬಲ ಪ್ರತಿಸ್ಪರ್ಧಿಯಾಗಿ ಕಂಡುಬಂದಿದ್ದ ಭಾರತದ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಕೂ (Koo) ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುತ್ತಿದೆ. ಕೂ (Koo) ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್‌ಇನ್ ಪೋಸ್ಟ್‌ನಲ್ಲಿ ಇದನ್ನು ಪ್ರಕಟಿಸಿದ್ದಾರೆ. ಡೈಲಿಹಂಟ್ ಸೇರಿದಂತೆ ಅನೇಕ ಕಂಪನಿಗಳೊಂದಿಗೆ ಸಂಭಾವ್ಯ ಮಾರಾಟ ಅಥವಾ ವಿಲೀನಕ್ಕಾಗಿ ಹಲವಾರು ಸುತ್ತಿನ ಮಾತುಕತೆಗಳು ವಿಫಲವಾದ … Continued

ಅತಿಯಾದ ʼನಿದ್ದೆʼಯ ಕಾರಣದಿಂದ ಭಾರತದ ವಿರುದ್ಧದ T20 ವಿಶ್ವಕಪ್ ಪಂದ್ಯ ತಪ್ಪಿಸಿಕೊಂಡ ಬಾಂಗ್ಲಾದೇಶದ ವೇಗದ ಬೌಲರ್‌…!

ಬಾಂಗ್ಲಾದೇಶ ಕ್ರಿಕೆಟ್ ತಂಡದ ವೇಗದ ಬೌಲರ್ ತಸ್ಕಿನ್ ಅಹ್ಮದ್ ಅವರು ‘ಅತಿ ನಿದ್ದೆ’ಯಿಂದಾಗಿ ಭಾರತ ವಿರುದ್ಧದ ಟಿ20 ವಿಶ್ವಕಪ್ 2024 ಪಂದ್ಯದಲ್ಲಿ ಆಡುವುದನ್ನು ತಪ್ಪಿಸಿಕೊಂಡರು ಎಂದು ವರದಿಯೊಂದು ಹೇಳಿದೆ. ತಸ್ಕಿನ್ ತನ್ನ ಕೋಣೆಯಲ್ಲಿ ಮಲಗಿದ್ದ ಕಾರಣ ತಂಡದ ಮ್ಯಾನೇಜ್‌ಮೆಂಟಿಗೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಮತ್ತು ಇದರ ಪರಿಣಾಮವಾಗಿ, ಪಂದ್ಯದ ವೇಳೆ ಅವರು ತಂಡದ ಬಸ್ ತಪ್ಪಿಸಿಕೊಂಡರು … Continued

ಉತ್ತರ ಪ್ರದೇಶದ ಸತ್ಸಂಗದಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ನಡೆದ ‘ಸತ್ಸಂಗ’ (ಧಾರ್ಮಿಕ ಕಾರ್ಯಕ್ರಮ)ದಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 116ಕ್ಕೆ ಏರಿದೆ. ರಾಜ್ಯ ಸರ್ಕಾರ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ ಮತ್ತು ಮೂವರು ಸಚಿವರನ್ನು ಪರಿಹಾರ ಕಾರ್ಯಗಳ ಮೇಲ್ವಿಚಾರಣೆಗಾಗಿ ಸ್ಥಳಕ್ಕೆ ಕಳುಹಿಸಿದೆ. ಈವರೆಗೆ 116 ಮಂದಿ ಸಾವಿಗೀಡಾಗಿದ್ದಾರೆ ಎಂದು ಇನ್ಸ್‌ಪೆಕ್ಟರ್ ಜನರಲ್ … Continued

ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ; ಮಕ್ಕಳು ಸೇರಿದಂತೆ 87 ಮಂದಿ ಸಾವು

ಲಕ್ನೋ:   ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತ್ರಾಸ್‌ನ ಸಿಕಂದರಾ ರಾವ್ ಪೊಲೀಸ್ ಠಾಣಾ ವ್ಯಾಪ್ತಿಯ ಫುಲ್ರೈ ಗ್ರಾಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಸಾವಿರಾರು ಮಂದಿ ಸೇರಿದ್ದ ‘ಸತ್ಸಂಗ’ದ ವೇಳೆ ಕಾಲ್ತುಳಿತ ಸಂಭವಿಸಿದೆ. ಸಮುದಾಯ ಆರೋಗ್ಯ … Continued

ಇಂಟರ್ನೆಟ್‌ ನಲ್ಲಿ ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟರ್‌ ಶೋಯೆಬ್ ಅಖ್ತರ್ ಹಂಚಿಕೊಂಡ ಭಗವದ್ಗೀತೆ ಶ್ಲೋಕದ ಪೋಸ್ಟ್…!

ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ವೇಗದ ಬೌಲರ್‌ ಶೋಯೆಬ್ ಅಖ್ತರ್ ಸೋಮವಾರ ಅಂತರ್ಜಾಲದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಮ್ಮ ದಿಟ್ಟ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ಶೋಯೆಬ್ ಅಖ್ತರ್‌ ಅವರು ಭಗವದ್ಗೀತೆಯ ಉಲ್ಲೇಖವನ್ನು ತಮ್ಮ ಇನ್ಸ್ಟಾಗ್ರಾಂ (Instagram)ನಲ್ಲಿ ಹಂಚಿಕೊಂಡಿದ್ದಾರೆ, “ಅನಿಯಂತ್ರಿತ ಮನಸ್ಸಿಗಿಂತ ದೊಡ್ಡ ಶತ್ರು ಇಲ್ಲ (There’s no greater enemy than an uncontrolled mind) … Continued

ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ನವದೆಹಲಿ: ಈಶಾನ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದಲ್ಲಿ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ತಿಳಿಸಿದೆ. ವರ್ಚುವಲ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ ಐಎಂಡಿ (IMD) ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ ಅವರು, ಒಟ್ಟಾರೆಯಾಗಿ ದೇಶದಾದ್ಯಂತ ಜುಲೈ ಸರಾಸರಿ ಮಳೆಯು ಸಾಮಾನ್ಯಕ್ಕಿಂತ ಹೆಚ್ಚಾಗಿ ಇರುತ್ತದೆ. … Continued

ಹಾಸನ ಎಸ್ಪಿ ಕಚೇರಿ ಆವರಣದಲ್ಲೇ ಭೀಕರ ಕೊಲೆ : ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಇರಿದು ಕೊಂದ ಕಾನ್‌ಸ್ಟೆಬಲ್‌…!

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ವಿರುದ್ಧ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನೇ ಪೊಲೀಸ್ ಕಾನ್‌ಸ್ಟೆಬಲ್‌ ಓರ್ವ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲೇ ನಡೆದಿದೆ ಎಂದು ವರದಿಯಾಗಿದೆ. ಹಾಸನದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಹಾಸನ ನಗರ … Continued

ಬ್ರಿಟಿಷರ ಕಾಲದ ಐಪಿಸಿ ಬದಲಿಗೆ ಹೊಸ ಕ್ರಿಮಿನಲ್ ಕಾನೂನುಗಳು ಇಂದಿನಿಂದ ಜಾರಿಗೆ

ನವದೆಹಲಿ : ಭಾರತೀಯ ದಂಡ ಸಂಹಿತೆ ಸೇರಿದಂತೆ ಬ್ರಿಟಿಷರ ಕಾಲದ ಕಾನೂನುಗಳ ಸಂಪೂರ್ಣ ಬದಲಾಗಿ ಮೂರು ಹೊಸ ಕ್ರಿಮಿನಲ್ ಕೋಡ್‌ಗಳೊಂದಿಗೆ ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಇಂದಿನಿಂದ ಜಾರಿಗೆ ಬರಲಿದೆ. ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಅಧಿನಿಯಮ ಇವು ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ … Continued