ಸಿಎಂ ಸ್ಟಾಲಿನ್ ಅವರೊಂದಿಗೆ ಮಾತಿನ ಚಕಮಕಿಯ ನಂತರ ವಿಧಾನಸಭೆಯಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ| ವೀಕ್ಷಿಸಿ

ಚೆನ್ನೈ: ಸದನದ ಚಳಿಗಾಲದ ಅಧಿವೇಶನದ ಮೊದಲ ದಿನದಂದು ಸರ್ಕಾರದ ಸಾಂಪ್ರದಾಯಿಕ ಭಾಷಣ ಮಾತ್ರ ದಾಖಲಾಗಬೇಕು ಎಂಬ ನಿರ್ಣಯವನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಡಿಸಿದ ನಂತರ ತಮಿಳುನಾಡು ರಾಜ್ಯಪಾಲ ಆರ್‌.ಎನ್. ರವಿ ಸೋಮವಾರ ಬೆಳಿಗ್ಗೆ ವಿಧಾನಸಭೆಯಿಂದ ಹೊರನಡೆದರು. ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ಮತ್ತು ರಾಜ್ಯಪಾಲ ಆರ್.ಎನ್.ರವಿ ನಡುವಿನ ವಾಗ್ವಾದ ಸೋಮವಾರ ವಿಧಾನಸಭೆಯೊಳಗೆ ಉಲ್ಬಣಗೊಂಡಿತು, ನಂತರ … Continued

ಗ್ಯಾಸ್ ಹೀಟರ್‌ ಹಾಕಿ ಮಲಗಿದ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವು

ಜಜ್ಜರ್: ರಾತ್ರಿಯಿಡೀ ತಮ್ಮ ಕೊಠಡಿಯೊಳಗೆ ಗ್ಯಾಸ್ ಹೀಟರ್ ಹಾಕಿದ್ದರಿಂದ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ನಿದ್ರಾವಸ್ಥೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ ಝಜ್ಜರ್ ಪ್ರದೇಶದಲ್ಲಿ ಹಾಲಿನ ವ್ಯಾಪಾರಿಯೊಬ್ಬರು ಕುಟುಂಬದ ಮನೆಯ ಬಾಗಿಲು ತಟ್ಟಿದರೂ ಯಾರೂ ಉತ್ತರಿಸದ ಕಾರಣ ವಿಷಯ ಬೆಳಕಿಗೆ ಬಂದಿದೆ. ಸ್ಥಳೀಯ ಮದರಸಾದಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದ ಆಸಿಫ್ (35), … Continued

ನೀವು ನನಗೆ ವಿಷ ಹಾಕಿದರೆ..’: ಪೊಲೀಸ್ ಪ್ರಧಾನ ಕಚೇರಿಯಲ್ಲಿ ಚಹಾ ಕುಡಿಯಲು ನಿರಾಕರಿಸಿದ ಮಾಜಿ ಸಿಎಂ ಅಖಿಲೇಶ ಯಾದವ್ : ವೀಕ್ಷಿಸಿ

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ ಅವರು ಭಾನುವಾರ ಲಕ್ನೋದಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಚಹಾವನ್ನು ಕುಡಿಯಲು ನಿರಾಕರಿಸಿದರು. ತಾವು ಉತ್ತರ ಪ್ರದೇಶ ಪೊಲೀಸರನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ, ಅಖಿಲೇಶ ಯಾದವ ತಮ್ಮ ಸಿಬ್ಬಂದಿಗೆ ಹೊರಗಿನಿಂದ ಚಹಾ ತರುವಂತೆ ಆಜ್ಞಾಪಿಸುತ್ತಿದ್ದು, ಅಲ್ಲಿ … Continued

ಪಾಕಿಸ್ತಾನದಲ್ಲಿ ತೀವ್ರಗೊಂಡ ಆರ್ಥಿಕ ಬಿಕ್ಕಟ್ಟು : 10000 ರೂ.ಗಳಿಗೆ ಏರಿದ ಎಲ್‌ಪಿಜಿ ಸಿಲಿಂಡರ್ ಬೆಲೆ, ಪ್ಲಾಸ್ಟಿಕ್ ಬಲೂನ್‌ಗಳಲ್ಲಿ ಅಡುಗೆ ಅನಿಲ ಪೂರೈಕೆ…!

ಪಾಕಿಸ್ತಾನದ ಆರ್ಥಿಕ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ವಾಷಿಂಗ್ಟನ್‌ನಲ್ಲಿರುವ ತನ್ನ ರಾಯಭಾರಿ ಕಚೇರಿಯ ಆಸ್ತಿಯನ್ನು ಮಾರಾಟ ಮಾಡಲು ಪಾಕಿಸ್ತಾನ ಸರ್ಕಾರ ಬಿಡ್‌ಗಳನ್ನು ಆಹ್ವಾನಿಸಿದೆ ಎಂಬ ಅಂಶದಿಂದ ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ಎಷ್ಟು ಆಳವಾಗಿದೆ ಎಂಬುದನ್ನು ತೋರಿಸುತ್ತದೆ. ಅಲ್ಲದೆ, ಇಂಧನ ಉಳಿತಾಯಕ್ಕಾಗಿ ಶಾಪಿಂಗ್ ಮಾಲ್‌ಗಳು, ಮದುವೆ ಮಂದಿರಗಳು, ರೆಸ್ಟೋರೆಂಟ್‌ಗಳು ಮತ್ತು ಮಾರುಕಟ್ಟೆಗಳನ್ನು ಮೊದಲೇ ಮುಚ್ಚುವಂತೆ ಸೂಚಿಸಲಾಗಿದೆ. ಕಚ್ಚಾ … Continued

8ನೇ ತರಗತಿ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದ 47 ವರ್ಷದ ಶಿಕ್ಷಕ…!

ಕಾನ್ಪುರ : ಉತ್ತರ ಪ್ರದೇಶದ ಬಲ್ಲಾರ್ಪುರದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ, ಎಂಟನೇ ತರಗತಿ ಬಾಲಕಿಗೆ ಪ್ರೇಮ ಪತ್ರ ಬರೆದು ಈಗ ಅಮಾನತಾಗಿದ್ದಾನೆ ಹಾಗೂ ಆತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 13 ವರ್ಷದ ಬಾಲಕಿಯ ತಂದೆ ಶುಕ್ರವಾರ ನೀಡಿದ ದೂರಿನ ಅನ್ವಯ ಶಿಕ್ಷಕ ಹರಿ ಓಂ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಕುನ್ವಾರ್ ಎಸ್‌ಪಿ ಅನುಪಮ್ … Continued

ಕನ್ನಡಕ್ಕೆ ಸ್ಪಂದಿಸದ ಬ್ಯಾಂಕ್‍ಗಳನ್ನು, ಸಂಘ-ಸಂಸ್ಥೆಗಳನ್ನು ಧಿಕ್ಕರಿಸಿ : ಹಾವೇರಿ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ

ಹಾವೇರಿ: ಕನ್ನಡ ಭಾಷೆಯಲ್ಲಿ ಕಾರ್ಯನಿರ್ವಹಿಸದ ಬ್ಯಾಂಕುಗಳು, ಸರ್ಕಾರಿ ಉದ್ಯಮಗಳು, ಖಾಸಗಿ ಸಂಸ್ಥೆಗಳನ್ನು ಧಿಕ್ಕರಿಸಬೇಕು. ಹಾಗಿದ್ದರೆ ಮಾತ್ರ ಮಾತೃಭಾಷೆ ಉಳಿಯಲು ಸಾಧ್ಯ ಎಂದು 86ನೇ ಅಖಿಲ ಭಾರತ ಸಮ್ಮೇಳನದ ಅಧ್ಯಕ್ಷರಾದ ಸಾಹಿತಿ ಡಾ. ದೊಡ್ಡರಂಗೇಗೌಡ ಕರೆ ನೀಡಿದ್ದಾರೆ. ಕನಕದಾಸ- ಶ ರೀಫ- ಸರ್ವಜ್ಞ ವೇದಿಕೆಯಲ್ಲಿ ಶುಕ್ರವಾರ ಆರಂಭವಾದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕದೆಲ್ಲೆಡೆ … Continued

ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸರು

ನವದೆಹಲಿ: ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಶಂಕರ್ ಮಿಶ್ರಾ ಎಂಬಾತನನ್ನು ದೆಹಲಿ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮಿಶ್ರಾನನ್ನುದೆಹಲಿಗೆ ಕರೆತರಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ. ನವೆಂಬರ್ 26 ರಂದು, ಅಮೆರಿಕದ ಜೆಎಫ್‌ಕೆಯಿಂದ ದೆಹಲಿಗೆ ಏರ್ ಇಂಡಿಯಾ … Continued

ಜೋಶಿಮಠದ 500 ಕ್ಕೂ ಹೆಚ್ಚು ಮನೆ-ಕಟ್ಟಡಗಳಲ್ಲಿ ಬಿರುಕು: ದೇವಸ್ಥಾನ ಕುಸಿತ | ವೀಕ್ಷಿಸಿ

ಜೋಶಿಮಠ (ಉತ್ತರಾಖಂಡ): ಉತ್ತರಾಖಂಡದ ಹಿಮಾಲಯದ ಜೋಶಿಮಠದಲ್ಲಿ ಶುಕ್ರವಾರ ಸಂಜೆ ದೇವಾಲಯವೊಂದು ಕುಸಿದಿದ್ದು, 500 ಕ್ಕೂ ಹೆಚ್ಚು ಮನೆಗಳು ಮತ್ತು ಇತರ ಕಟ್ಟಡಗಳು ಬಿರುಕು ಬಿಟ್ಟಿರುವುದರಿಂದ ತೀವ್ರ ಚಳಿಯಲ್ಲಿ ಬೀಡುಬಿಟ್ಟಿರುವ ನಿವಾಸಿಗಳಲ್ಲಿ ಆತಂಕ ಹೆಚ್ಚಿಸಿದೆ. ಗುರುವಾರದಿಂದ ತೆರವು ಕಾರ್ಯ ಆರಂಭಗೊಂಡಿದ್ದು, ಭೂಮಿ ಕುಸಿದು ಕೆಲವು ದಿನಗಳ ನಂತರ ಮನೆಗಳು ಮತ್ತು ದೇವಾಲಯಗಳ ಗೋಡೆಗಳು ಬಿರುಕು ಬಿಟ್ಟಿವೆ. ಮನೆ-ಮನೆ … Continued

ಹಾವೇರಿ : 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಹಾವೇರಿ: ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ ಧ್ವಜ, ನಾಡ ಧ್ವಜ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಾಯಿತು. ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣದ ಜಾಗದಲ್ಲಿ ನಿರ್ಮಿಸಲಾಗಿರುವ ಕನಕ-ಶರೀಫ-ಸರ್ವಜ್ಞ ಪ್ರಧಾನ … Continued

ಟಿಆರ್​​ಎಫ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಪಾಕಿಸ್ತಾನ ಮೂಲದ ಟಿಆರ್​​ಎಫ್ (The Resistance Front) ಸಂಘಟನೆಯನ್ನು ಉಗ್ರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಮಾತ್ರವಲ್ಲದೆ, ಈ ಸಂಘಟನೆಯ ಕಮಾಂಡರ್ ಶೇಖ್ ಸಜ್ಜದ್ ಗುಲ್‌ನನ್ನು ಭಯೋತ್ಪಾದಕನೆಂದು ಕೇಂದ್ರ ಗೃಹ ಇಲಾಖೆ ಘೋಷಿಸಿದೆ. ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ನೆರಳು ಸಂಘಟನೆ(shadow organisation)ಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಕಾಶ್ಮೀರದಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಿದ ಮೂರು … Continued