ಟಿಆರ್​​ಎಫ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಪಾಕಿಸ್ತಾನ ಮೂಲದ ಟಿಆರ್​​ಎಫ್ (The Resistance Front) ಸಂಘಟನೆಯನ್ನು ಉಗ್ರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಮಾತ್ರವಲ್ಲದೆ, ಈ ಸಂಘಟನೆಯ ಕಮಾಂಡರ್ ಶೇಖ್ ಸಜ್ಜದ್ ಗುಲ್‌ನನ್ನು ಭಯೋತ್ಪಾದಕನೆಂದು ಕೇಂದ್ರ ಗೃಹ ಇಲಾಖೆ ಘೋಷಿಸಿದೆ. ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ನೆರಳು ಸಂಘಟನೆ(shadow organisation)ಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಕಾಶ್ಮೀರದಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಿದ ಮೂರು … Continued

ಅಲಾಸ್ಕಾದಿಂದ ಆಸ್ಟ್ರೇಲಿಯಾಕ್ಕೆ ನಿಲ್ಲದೆ ಹಾರಾಟ..: ಎಲ್ಲಿಯೂ ನಿಲ್ಲದೆ 8,435 ಮೈಲುಗಳ ದೂರ ಹಾರುವ ಮೂಲಕ ನೂತನ ವಿಶ್ವ ದಾಖಲೆ ಸ್ಥಾಪಿಸಿದ ಈ ಪಕ್ಷಿ…!

ಬಾರ್-ಟೈಲ್ಡ್ ಗಾಡ್‌ವಿಟ್ ಅಲಾಸ್ಕಾದಿಂದ ಆಸ್ಟ್ರೇಲಿಯಾದ ಟ್ಯಾಸ್ಮೆನಿಯಾಕ್ಕೆ 8,435 ಮೈಲುಗಳ ದೂರವನ್ನು ತಡೆರಹಿತವಾಗಿ ವಿಶ್ರಾಂತಿಯಿಲ್ಲದೆ ಹಾರಿದ್ದು, ಇದು ಹಕ್ಕಿಯು ದೀರ್ಘಾವಧಿಯ ತಡೆರಹಿತ ವಲಸೆ ಹಾರಾಟದ ಹಿಂದಿನ ದಾಖಲೆಯನ್ನು ಮುರಿದಿದೆ. ವಿಶ್ರಾಂತಿ ಇಲ್ಲದೆ ಅಥವಾ ಆಹಾರವಿಲ್ಲದೆ 11 ದಿನಗಳ ಪ್ರಯಾಣವನ್ನು ಮಾಡಿದ ವಲಸೆ ಹಕ್ಕಿಯ ಹಾರಾಟವನ್ನು ಉಪಗ್ರಹ ಟ್ಯಾಗ್ ಮೂಲಕ ಟ್ರ್ಯಾಕ್ ಮಾಡಲಾಗಿದೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಪ್ರಕಾರ, … Continued

ಇಂದಿನಿಂದ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿ: ಹಾವೇರಿಯಲ್ಲಿ ಆರಂಭವಾಗಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶುಕ್ರವಾರ(ಜನವರಿ ೬)ದಿಂದ ಮೂರು ದಿನಗಳ ಕಾಲ ನಡೆಯಲಿರುವ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಹಿರಿಯ ಕವಿ ಡಾ.ದೊಡ್ಡರಂಗೇಗೌಡ ಅವರ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದ್ದು, ಹಾವೇರಿ-ಹುಬ್ಬಳ್ಳಿ ರಸ್ತೆಯ ಶ್ರೀ ಅಜ್ಜಯ್ಯ ದೇವಸ್ಥಾನದ ಎದುರು ವೇದಿಕೆ ಸಿದ್ಧವಾಗಿದ್ದು, ಅಕ್ಷರ ಜಾತ್ರೆಗೆ ಲಕ್ಷಾಂತರ ಜನ … Continued

ಭೀಕರ ಅಪಘಾತ: ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳುತ್ತಿದ್ದ ಆರು ಭಕ್ತರ ದುರ್ಮರಣ

ಬೆಳಗಾವಿ : ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ವಾಹನ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಭಕ್ತರು ಮೃತ ಪಟ್ಟಿದ್ದಾರೆ. ಚಿಂಚನೂರು ವಿಠ್ಠಲ ದೇವಸ್ಥಾನದ ಹತ್ತಿರ ಈ ಅಪಘಾತ ಸಂಭವಿಸಿದೆ. ಮಹೀಂದ್ರಾ ವಾಹನ ಆಲದ ಮರಕ್ಕೆ ಗದಿದ್ದ ರಭಸಕ್ಕೆ ಇವರು ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಹುಲಕುಂದ ನಿವಾಸಿಗಳು ಮೃತಪಟ್ಟಿದ್ದು ಮಧ್ಯರಾತ್ರಿ ಸವದತ್ತಿಯ … Continued

ಸರ್ಕಾರದ ವಿರುದ್ಧ 10,000 ಕೋಟಿ ರೂ. ನಷ್ಟ ಪರಿಹಾರದ ದಾವೆ ಹೂಡಿದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಂಡ ವ್ಯಕ್ತಿ

ಇಂದೋರ್‌: ಗ್ಯಾಂಗ್ ರೇಪ್ ಪ್ರಕರಣದಲ್ಲಿ 2022ರ ಅಕ್ಟೋಬರ್‌ನಲ್ಲಿ ಖುಲಾಸೆಗೊಂಡಿದ್ದ ಮಧ್ಯಪ್ರದೇಶದ ರಾಟ್ಲಂನ ಬುಡಕಟ್ಟು ಸಮುದಾಯದ ವ್ಯಕ್ತಿಯೊಬ್ಬ, ಮಧ್ಯಪ್ರದೇಶ ಸರ್ಕಾರದ ವಿರುದ್ಧ ದಾವೆ ಹೂಡಿದ್ದಾನೆ. ‘ಸುಳ್ಳು ಆರೋಪ’ಗಳನ್ನು ಹೊರಿಸಿ 666 ದಿನಗಳ ಕಾಲ ಕಂಬಿ ಹಿಂದೆ ಕೂರುವಂತೆ ಮಾಡಿದ್ದಕ್ಕಾಗಿ ಸರ್ಕಾರ ತನಗೆ 10,006 ಕೋಟಿ ರೂ ಪರಿಹಾರ ನೀಡಬೇಕು ಎಂದು ಆತ ಒತ್ತಾಯಿಸಿದ್ದಾನೆ. ತನ್ನ ಸೆರೆವಾಸವು ತನ್ನ … Continued

ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್‌ಗೆ ₹19,744 ಕೋಟಿ ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅನುಷ್ಠಾನಕ್ಕೆ ₹19,744 ಕೋಟಿ ವೆಚ್ಚಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಬುಧವಾರ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅನ್ನು ಅನುಮೋದಿಸಿದೆ” ಎಂದು … Continued

ಯೋಗಿ ಸರ್ಕಾರಕ್ಕೆ ದೊಡ್ಡ ರಿಲೀಫ್: ಒಬಿಸಿ ಮೀಸಲು ಇಲ್ಲದೆ ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಗೆ ಅವಕಾಶ ನೀಡಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ

ನವದೆಹಲಿ: ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಇಲ್ಲದೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರದ ಮನವಿಯ ಮೇಲೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತು ಮತ್ತು ಪ್ರತಿಕ್ರಿಯೆ ಸಲ್ಲಿಸಲು … Continued

ಸಿಸಿಐ ವಿಧಿಸಿದ್ದ ₹1,337 ಕೋಟಿ ದಂಡದಲ್ಲಿ ಶೇ.10ರಷ್ಟು ಠೇವಣಿ ಇರಿಸಲು ಗೂಗಲ್‌ಗೆ ಸೂಚಿಸಿದ ಎನ್‌ಸಿಎಲ್‌ಎಟಿ

ನವದೆಹಲಿ: ಭಾರತೀಯ ಸ್ಪರ್ಧಾ ಆಯೋಗವು ತನ್ನ ಮೇಲೆ ವಿಧಿಸಿದ್ದ ₹ 1,337 ಕೋಟಿ ದಂಡದ ಆದೇಶದ ವಿರುದ್ಧ ಗೂಗಲ್‌ ಸಲ್ಲಿಸಿರುವ ಮನವಿ ಆಲಿಸುವ ಮುನ್ನ ದಂಡದ ಮೊತ್ತದ ಶೇ.10ರಷ್ಟು ಹಣ ಠೇವಣಿ ಇರಿಸುವಂತೆ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯು ಗೂಗಲ್‌ಗೆ ಬುಧವಾರ ಆದೇಶಿಸಿದೆ. ಆಂಡ್ರಾಯ್ಡ್‌ ಮೊಬೈಲ್‌ ಮಾರುಕಟ್ಟೆಯಲ್ಲಿ ತನ್ನ ಪ್ರಭಾವಿ ಸ್ಥಾನವನ್ನು ದುರುಪಯೋಗಪಡಿಸಿಕೊಂಡ ಕಾರಣಕ್ಕಾಗಿ … Continued

ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ

ಬೆಂಗಳೂರು ; ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್. ಎಂ. ಕೃಷ್ಣ ರಾಜಕೀಯ ನಿವೃತ್ತಿಯಾಗುವುದಾಗಿ ಹೇಳಿದ್ದಾರೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಅವರು ರಾಜಕೀಯ ನಿವೃತ್ತಿಯಾಗುವ ಮಾತನ್ನಾಡಿದ್ದಾರೆ. ಬುಧವಾರ ಎಸ್. ಎಂ. ಕೃಷ್ಣ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಅದರ ಜೊತೆಗೆ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುವ ಇಂಗಿತವವನ್ನೂ ವ್ಯಕ್ತಪಡಿಸಿದ್ದಾರೆ. ನಮ್ಮ ವಯಸ್ಸಿನ … Continued

ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ…!

ನವದೆಹಲಿ: ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಘಟನೆ ನವೆಂಬರ್ 26 ರಂದು ನಡೆದಿದೆ. ಏರ್ ಇಂಡಿಯಾ ಈ ಕುರಿತು ಪೊಲೀಸ್ ದೂರು ದಾಖಲಿಸಿದೆ ಮತ್ತು ಪುರುಷ ಪ್ರಯಾಣಿಕರನ್ನು ‘ನೊ ಫ್ಲೈ’ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಲು ಆಂತರಿಕ ಸಮಿತಿಯನ್ನು ರಚಿಸಿದೆ … Continued