ತಮಿಳುನಾಡು ಕರಾವಳಿ ಪ್ರವೇಶಿಸಿದ ಮಾಂಡೌಸ್ ಚಂಡಮಾರುತ

ಚೆನ್ನೈ: ಮಾಂಡೌಸ್ ಚಂಡಮಾರುತವು ಗಂಟೆಗೆ ಸುಮಾರು 85 ಕಿಮೀ ವೇಗದ ಗಾಳಿಯ ಜೊತೆಗೆ ಭಾರೀ ಮಳೆಗೆ ಕಾರಣವಾಗುತ್ತದೆ ಎಂಬ ಮುನ್ಸೂಚನೆ ಇದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಚಂಡಮಾರುತವು ಮಧ್ಯರಾತ್ರಿ ತಮಿಳುನಾಡಿನ ಮಾಮಲ್ಲಪುರಂ (ಮಹಾಬಲಿಪುರಂ) ಬಳಿ, ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ಗಂಟೆಗೆ 70 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಭಾರೀ ಮಳೆಯ ಮುನ್ಸೂಚನೆ ಇದೆ … Continued

5 ವರ್ಷದಲ್ಲಿ ಮೋದಿ ವಿದೇಶಿ ಪ್ರವಾಸಕ್ಕಾದ ಖರ್ಚೆಷ್ಟು? ರಾಜ್ಯಸಭೆಗೆ ಮಾಹಿತಿ ನೀಡಿದ ಸರ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಭೇಟಿಗಳು ಭಾರತಕ್ಕೆ ಪಾಲುದಾರ ರಾಷ್ಟ್ರಗಳೊಂದಿಗೆ ಸಂಬಂಧವನ್ನು ಬಲಪಡಿಸಲು, ಭಾರತದ ದೃಷ್ಟಿಕೋನವನ್ನು ಮುಂದಿಡಲು ಮತ್ತು ಜಾಗತಿಕ ವಿಷಯಗಳ ಕುರಿತು ಜಾಗತಿಕ ಕಾರ್ಯಸೂಚಿಯನ್ನು ರೂಪಿಸಲು ಭಾರತಕ್ಕೆ ಅನುವು ಮಾಡಿಕೊಟ್ಟಿದೆ ಎಂದು ಸರ್ಕಾರ ಗುರುವಾರ ರಾಜ್ಯಸಭೆಗೆ ತಿಳಿಸಿದೆ. ರಾಜ್ಯಸಭೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು, “ಪ್ರಧಾನಿಗಳ … Continued

ಖಾಸಗಿ ಸದಸ್ಯರ ವಿಧೇಯಕವಾಗಿ ಏಕರೂಪ ನಾಗರಿಕ ಸಂಹಿತೆ -2020 ಮಸೂದೆ ರಾಜ್ಯಸಭೆಯಲ್ಲಿ ಮಂಡನೆ

ನವದೆಹಲಿ: ಪ್ರತಿಪಕ್ಷಗಳ ವಿರೋಧದ ನಡುವೆ ಬಿಜೆಪಿಯ ರಾಜಸ್ಥಾನದ ಸಂಸದ ಕಿರೋಡಿ ಲಾಲ್ ಮೀನಾ ಅವರು ಖಾಸಗಿ ಸದಸ್ಯ ವಿಧೇಯಕವಾಗಿ ಏಕರೂಪ ನಾಗರಿಕ ಸಂಹಿತೆ -2020 ಮಸೂದೆಯನ್ನು ಇಂದು ಶುಕ್ರವಾರ ರಾಜ್ಯಸಭೆಯಲ್ಲಿ ಮಂಡಿಸಿದರು. ಇದು ಧರ್ಮ ಆಧಾರಿತ ವೈಯಕ್ತಿಕ ಕಾನೂನುಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಚರ್ಚಿಸಲು ಬಿಜೆಪಿ ಸಂಸದ ಹರನಾಥ್ ಸಿಂಗ್ … Continued

ಗಡಿ ವಿವಾದ: ಡಿ.14ರಂದು ಕರ್ನಾಟಕ, ಮಹಾರಾಷ್ಟ್ರ ಸಿಎಂಗಳನ್ನು ಭೇಟಿ ಮಾಡಲಿರುವ ಅಮಿತ್ ಶಾ; ಎನ್‌ಸಿಪಿ ನಾಯಕ

ನವದೆಹಲಿ: ಎರಡು ರಾಜ್ಯಗಳ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಂದು ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ ಎಂದು ಎನ್‌ಸಿಪಿ ನಾಯಕ ಅಮೋಲ್ ಕೋಲ್ಹೆ ಶುಕ್ರವಾರ ಹೇಳಿದ್ದಾರೆ. ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸಂಸದರ ನಿಯೋಗದೊಂದಿಗೆ ಕೇಂದ್ರ ಗೃಹ ಸಚಿವ ಶಾ ಅವರನ್ನು ಭೇಟಿ ಮಾಡಿದ … Continued

ವಿಶ್ವದ ಪ್ರಮುಖ ಪತ್ರಿಕೆಗಳಲ್ಲಿ ಹೆಡ್‌ಲೈನ್ಸ್‌ ಪಡೆದ ಪ್ರಧಾನಿ ಮೋದಿ ತವರು ಗುಜರಾತ್‌ನಲ್ಲಿನ ಬಿಜೆಪಿ ಅಭೂತಪೂರ್ವ ಗೆಲುವು…! ಜಾಗತಿಕ ಮಾಧ್ಯಮಗಳ ಪ್ರತಿಕ್ರಿಯೆ ಇಲ್ಲಿದೆ

ನವದೆಹಲಿ : ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಯ ಅಭೂತಪೂರ್ವ ಗೆಲುವು ಭಾರತೀಯ ರಾಜಕೀಯ ವಲಯದಲ್ಲಿ ಸಂಚಲನವನ್ನು ಸೃಷ್ಟಿಸಿದ್ದು ಮಾತ್ರವಲ್ಲದೆ ವಿಶ್ವದ ಪತ್ರೆಕೆಗಳಲ್ಲಿಯೂ ಹೆಡ್‌ಲೈನ್ಸ್‌ ಪಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತವರು ನೆಲವಾದ ಗುಜರಾತಿನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭರ್ಜರಿ ಜಯಗಳಿಸಿದೆ ಎಂದು ಜಾಗತಿಕ ಸುದ್ದಿವಾಹಿನಿಗಳು ವ್ಯಾಪಕವಾಗಿ … Continued

ಬಿಎಸ್‌ಎನ್‌ಎಲ್‌ 5 ರಿಂದ 7 ತಿಂಗಳಲ್ಲಿ 5Gಗೆ ಅಪ್‌ಗ್ರೇಡ್ ; 1.35 ಲಕ್ಷ ಟವರ್‌ಗಳಿಗೆ ಇದು ವಿಸ್ತರಣೆ : ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ (BSNL)ನ 4G ತಂತ್ರಜ್ಞಾನವನ್ನು 5-7 ತಿಂಗಳುಗಳಲ್ಲಿ 5Gಗೆ ಅಪ್‌ಗ್ರೇಡ್ ಮಾಡಲಾಗುವುದು ಮತ್ತು ಕಂಪನಿಯು ದೇಶದಲ್ಲಿ ಹೊಂದಿರುವ 1.35 ಲಕ್ಷ ಟೆಲಿಕಾಂ ಟವರ್‌ಗಳಲ್ಲಿ ಹೊರತರಲಾಗುವುದು ಎಂದು ಕೇಂದ್ರ ದೂರಸಂಪರ್ಕ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ. ಸಿಐಐ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಸ್ಥಳೀಯ ಆವಿಷ್ಕಾರಗಳನ್ನು ಉತ್ತೇಜಿಸಲು ಟೆಲಿಕಾಂ ತಂತ್ರಜ್ಞಾನ … Continued

ಗುಜರಾತಿನಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ-ಕಾಂಗ್ರೆಸ್‌ ಹೀನಾಯ ಸೋಲಿಗೆ ಕಾರಣವಾದ ಅಂಶಗಳು..

ಗುಜರಾತಿನ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ 156 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸಾರ್ವಕಾಲಿಕವಾಗಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷ ಎಂಬ ಹೆಗ್ಗಳಿಕೆಗೆ ಬಿಜೆಪಿ ಪಾತ್ರವಾಗಿದೆ. ಕಾಂಗ್ರೆಸ್‌ ಕೇವಲ 16 ಸ್ಥಾನಗಳಿಗೆ ಕುಸಿಯುವ ಮೂಲಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವೂ ಸಿಗದ ಪರಿಸ್ಥಿತಿ ಎದುರಾಗಿದೆ. ಪ್ರಧಾನಿ ಮೋದಿಯವರ ಜನಪ್ರಿಯತೆಯು ಮತ್ತೊಮ್ಮೆ ಬಿಜೆಪಿ ಪರವಾಗಿ ಕೆಲಸ … Continued

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯುವ 9ನೇ ರಾಜಕೀಯ ಪಕ್ಷ ಆಗಲಿರುವ ಎಎಪಿ : ಹಾಗಾದ್ರೆ ಏನೆಲ್ಲ ಬದಲಾಗುತ್ತದೆ..?

ನವದೆಹಲಿ: ಅರವಿಂದ್ ಕೇಜ್ರಿವಾಲ್ 2012 ರಲ್ಲಿ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಪ್ರಾರಂಭಿಸಿದಾಗ, ಅನೇಕರು ಇದು ಎಷ್ಟು ವರ್ಷ ಎಂದು ಹೇಳಿದ್ದರು. ಆದರೆ ಈಗ ಅದು ಗುಜರಾತ್‌ ಚುನಾವಣೆ ಫಲಿತಾಂಶದ ನಂತರ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಇತ್ತೀಚೆಗೆ ಮುಕ್ತಾಯಗೊಂಡ ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ  … Continued

ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯಿಂದ ಅಧಿಕಾರ ಕಸಿದುಕೊಂಡ ಕಾಂಗ್ರೆಸ್: ಬಂಡಾಯ ಅಭ್ಯರ್ಥಿಗಳು ಬಿಜೆಪಿಗೆ ಮುಳುವಾದರು

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಿ ಅಧಿಕಾರಕ್ಕೆ ಮರಳುವ ಹಾದಿಯಲ್ಲಿ ಕಾಂಗ್ರೆಸ್ ಮುನ್ನಡೆಯುತ್ತಿದೆ. ಇದೇವೇಳೆ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಬಿಜೆಪಿಯ ಸೋಲನ್ನು ಒಪ್ಪಿಕೊಂಡಿದ್ದಾರೆ, ಜನರು ನೀಡಿದ ತೀರ್ಪನ್ನು ಗೌರವಿಸುತ್ತೇವೆ ಹಾಗೂ . ರಾಜೀನಾಮೆ ಸಲ್ಲಿಸಲು ಶೀಘ್ರವೇ ರಾಜ್ಯಪಾಲರ ಕಚೇರಿಗೆ ತೆರಳುವುದಾಗಿ ತಿಳಿಸಿದ್ದಾರೆ ಏತನ್ಮಧ್ಯೆ, ಕಾಂಗ್ರೆಸ್ ತನ್ನ ವಿಜೇತ ಶಾಸಕರನ್ನು ಚಂಡೀಗಢಕ್ಕೆ ಅಥವಾ ಚತ್ತೀಸ್‌ಗಡಕ್ಕೆ ಸ್ಥಳಾಂತರಿಸಲು ಪ್ರಾರಂಭಿಸಿದೆ, … Continued

ಮಂಡೌಸ್ ಚಂಡಮಾರುತ : ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಕಂಡುಬಂದ ‘ಮಂಡೌಸ್’ ಚಂಡಮಾರುತದ ಪರಿಣಾಮಗಳು ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದಲ್ಲೂ ಕಂಡುಬರುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಹೇಳಿದೆ. ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳನ್ನು ಒಳಗೊಂಡು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿಸೆಂಬರ್ 9ರಿಂದ ಡಿಸೆಂಬರ್‌ 12ರ ವರೆಗೆ ಗುಡುಗು ಮತ್ತು ಬಿರುಗಾಳಿಯೊಂದಿಗೆ … Continued