ಬಿಜೆಪಿ ನಾಯಕ ತಜೀಂದರ್ ಬಗ್ಗಾ ಬಂಧನಕ್ಕೆ ತಡೆಯಾಜ್ಞೆ ನೀಡಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್

ಮೊಹಾಲಿ: ಮಧ್ಯರಾತ್ರಿಯ ಬೆಳವಣಿಗೆಯಲ್ಲಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬಿಜೆಪಿ ನಾಯಕ ತಜೀಂದರ್ ಪಾಲ್ ಸಿಂಗ್ ಬಗ್ಗಾ ಬಂಧನವನ್ನು ಮೇ 10 ರವರೆಗೆ ತಡೆಹಿಡಿದಿದೆ ಎಂದು ಲೈವ್‌ ಲಾ ವರದಿ ಮಾಡಿದೆ. ಮೊಹಾಲಿ ನ್ಯಾಯಾಲಯವು ಶನಿವಾರ ಮುಂಜಾನೆ ತನ್ನ ವಿರುದ್ಧ ಹೊರಡಿಸಿದ ಬಂಧನ ವಾರಂಟ್ ಅನ್ನು ಪ್ರಶ್ನಿಸಿ ಬಿಜೆಪಿ ನಾಯಕ ತಜೀಂದರ್ ಬಗ್ಗಾ ಅವರು ಪಂಜಾಬ್ … Continued

ವಿಘ್ನೇಶ್ ಕಸ್ಟಡಿ ಸಾವು: ಕೊಲೆ ಆರೋಪದ ಮೇಲೆ 6 ಪೊಲೀಸರ ಬಂಧನ

ಚೆನ್ನೈ: ವಿಘ್ನೇಶ ಕಸ್ಟಡಿ ಸಾವಿಗೆ ಸಂಬಂಧಿಸಿದಂತೆ ಚೆನ್ನೈ ಪೊಲೀಸ್ ಅಪರಾಧ ವಿಭಾಗ-ಅಪರಾಧ ತನಿಖಾ ವಿಭಾಗ(ಸಿಬಿ-ಸಿಐಡಿ)ವು ಕೊಲೆ ಆರೋಪದ ಮೇಲೆ ಆರು ಪೊಲೀಸ್ ಸಿಬ್ಬಂದಿಯನ್ನು ಬಂಧಿಸಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯ ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 25 ವರ್ಷದ ಮೃತ ವ್ಯಕ್ತಿಯ ಮರಣೋತ್ತರ … Continued

40 ಕೋಟಿ ರೂ. ಬ್ಯಾಂಕ್‌ ವಂಚನೆ ಪ್ರಕರಣ: ಪಂಜಾಬ್‌ನ ಎಎಪಿ ಶಾಸಕನ ಸಂಸ್ಥೆಗಳ ಮೇಲೆ ಸಿಬಿಐ ದಾಳಿ

ಚಂಡಿಗಡ: 40 ಕೋಟಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಎಎಪಿ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಶೋಧ ನಡೆಸುತ್ತಿದೆ. ಅಮರಗಢ ಶಾಸಕನ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಗ್ರೂರ್ ಜಿಲ್ಲೆಯ ಮಲೇರ್ ಕೋಟ್ಲಾ ಪ್ರದೇಶದಲ್ಲಿ ಶೋಧ ನಡೆಸಲಾಗುತ್ತಿದೆ. ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ … Continued

ಮಾಜಿ ಸಚಿವ ಪ್ರಮೋದ ಮಧ್ವರಾಜ, ವರ್ತೂರ್‌ ಪ್ರಕಾಶ ಸೇರಿ ಹಲವರು ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಪ್ರಭಾವಿ ನಾಯಕ ಪ್ರಮೋದ ಮಧ್ವರಾಜ ಮತ್ತು ವರ್ತೂರ್‌ ಪ್ರಕಾಶ್‌ ಬಿಜೆಪಿ ಸೇರಿದ್ದಾರೆ. ಪ್ರಮೋದ್ ಮಧ್ವರಾಜ ಶನಿವಾರ ಮಧ್ಯಾಹ್ನ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.ಶನಿವಾರ ಸಂಜೆ ಪರಾಗ್ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ … Continued

ದಾಖಲೆಯ ವರಮಾನ ಕಂಡ ರಿಲಯನ್ಸ್ ಇಂಡಸ್ಟ್ರೀಸ್: ಆದಾಯ 47% ಹೆಚ್ಚಳ, ನಿವ್ವಳ ಲಾಭ 26% ಜಾಸ್ತಿ

ಮುಂಬೈ: ಮಾರ್ಚ್‌ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್‌) ಕಂಪನಿಯು ಒಟ್ಟು ₹ 7.92 ಲಕ್ಷ ಕೋಟಿ (104.6 ಬಿಲಿಯನ್ ಅಮೆರಿಕನ್ ಡಾಲರ್) ವರಮಾನ ಗಳಿಸಿದೆ. ಭಾರತದ ಕಂಪನಿಯೊಂದು 100 ಬಿಲಿಯನ್ ಡಾಲರ್‌ಗಿಂತ ಹೆಚ್ಚಿನ ವಾರ್ಷಿಕ ವರಮಾನ ಗಳಿಸಿರುವುದು ಇದೇ ಮೊದಲು. 2021–22ನೇ ಹಣಕಾಸು ವರ್ಷದಲ್ಲಿ ಕಂಪನಿಯ ವರಮಾನವು ಹಿಂದಿನ ಆರ್ಥಿಕ … Continued

ಹಣ ಪಡೆದು ಸಿಎಂ ಮಾಡುವ ಸಂಸ್ಕೃತಿ ಬಿಜೆಪಿಯಲ್ಲಿಲ್ಲ, ನಾನು ಹಾಗೆ ಎಲ್ಲಿಯೂ ಹೇಳಿಲ್ಲ: ಯತ್ನಾಳ ಸ್ಪಷ್ಟನೆ

ವಿಜಯಪುರ: ಮುಖ್ಯಮಂತ್ರಿಯಾಗಲು ಹೈಕಮಾಂಡಿಗೆ ಹಣ ನೀಡಬೇಕಾಗುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ನಾನು ಹೇಳಿದ ಅರ್ಥ ಬೇರೆ ಇದೆ. ಮುಖ್ಯಮಂತ್ರಿ ಮಾಡ್ತೇವೆ ಎಂದು ಕೆಲವರು ವಾಟ್ಸಪ್ ಕಾಲ್ ಮಾಡುತ್ತಾರೆ. ನಮಗೆ ಮೋದಿ ಗೊತ್ತು, ಸೋನಿಯಾ ಗಾಂಧಿ ಗೊತ್ತು, ದೇವೇಗೌಡ್ರು ಗೊತ್ತು ಎಂದು ಹೇಳುತ್ತಾರೆ, ಅಂಥವರನ್ನು ನಂಬಬೇಡಿ ಎಂದು ಹೇಳಿದ್ದೇನೆಯೇ ಹೊರತು ಮುಖ್ಯಮಂತ್ರಿಯಾಗಲು ಹೈಕಮಾಂಡಿಗೆ ಹಣ ನೀಡಬೇಕಾಗುತ್ತದೆ … Continued

ಕಾಂಗ್ರೆಸ್‌ಗೆ ಆಘಾತ: ಮಾಜಿ ಸಚಿವ ಪ್ರಮೋದ್ ಮಧ್ವರಾಜ ಕಾಂಗ್ರೆಸ್‌ಗೆ ರಾಜೀನಾಮೆ

ಉಡುಪಿ : ಮಾಜಿ ಸಚಿವ,  ಹಾಗೂ ಪ್ರಭಾವಿ ರಾಜಕಾರಣಿ ಪ್ರಮೋದ್ ಮಧ್ವರಾಜ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಪಕ್ಷ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ  ಅವರು ರಾಜೀನಾಮೆ ನೀಡಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರಿಗೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಸದಸ್ಯತ್ವಕ್ಕೂ … Continued

ಬಗೆಹರಿಯದ ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಣೆ

ಕೊಲಂಬೊ: ಹೆಚ್ಚುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳನ್ನು ಎದುರಿಸಲು ಐದು ವಾರಗಳಲ್ಲಿ ಎರಡನೇ ಬಾರಿಗೆ ಭದ್ರತಾ ಪಡೆಗಳಿಗೆ ವ್ಯಾಪಕ ಅಧಿಕಾರ ನೀಡಲು ಶ್ರೀಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಮತ್ತೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಹದಗೆಡುತ್ತಿರುವ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಶುಕ್ರವಾರ ರಾಷ್ಟ್ರವ್ಯಾಪಿ ಮುಷ್ಕರವನ್ನು ನಡೆಸಿದ ನಂತರ ಅವರು “ಸಾರ್ವಜನಿಕ ಸುವ್ಯವಸ್ಥೆ … Continued

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಅಧ್ಯಕ್ಷರ ವಿರುದ್ಧ ‘ಒಳ ಉಡುಪು ಪ್ರತಿಭಟನೆ’ ಆರಂಭ…ವೀಕ್ಷಿಸಿ

ಕೋಲಂಬೊ: ದಶಕಗಳಲ್ಲಿ ದ್ವೀಪದ ಭೀಕರ ಆರ್ಥಿಕ ಬಿಕ್ಕಟ್ಟನ್ನು ಸರ್ಕಾರ ನಿಭಾಯಿಸುತ್ತಿರುವುದನ್ನು ಖಂಡಿಸಿ ಸಾರ್ವಜನಿಕ ಮತ್ತು ಖಾಸಗಿ ವಲಯದ ಕಾರ್ಮಿಕರು ಪ್ರತಿಭಟಿಸಿದ್ದರಿಂದ ಶುಕ್ರವಾರ ಶ್ರೀಲಂಕಾದಲ್ಲಿ ಸಾವಿರಾರು ಅಂಗಡಿಗಳು, ಶಾಲೆಗಳು ಮತ್ತು ಕಂಪನಿಗಳನ್ನು ಮುಚ್ಚಲಾಗಿತ್ತು. ಕೋವಿಡ್‌ ಸಾಂಕ್ರಾಮಿಕ ರೋಗ, ಏರುತ್ತಿರುವ ತೈಲ ಬೆಲೆಗಳು ಮತ್ತು ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಸರ್ಕಾರದಿಂದ ತೆರಿಗೆ ಕಡಿತದ ಪರಿಣಾಮವಾಗಿ ಶ್ರೀಲಂಕಾವು $ … Continued

ಜಾರ್ಖಂಡ್‌ನಲ್ಲಿ ಐಎಎಸ್ ಅಧಿಕಾರಿಯ ಸಹಾಯಕರಿಂದ 19 ಕೋಟಿ ರೂಪಾಯಿ ನಗದು ವಶ….!

ರಾಂಚಿ: ಜಾರಿ ನಿರ್ದೇಶನಾಲಯ(ಇಡಿ)ವು ಜಾರ್ಖಂಡ್ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರ ಇಬ್ಬರು ಆಪ್ತ ಸಹಾಯಕರಿಂದ 19 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದೆ. ಎಂಜಿಎನ್‌ಆರ್‌ಇಜಿಎ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ) ಯೋಜನೆಯ ಭ್ರಷ್ಟಾಚಾರ ಮತ್ತು ದುರುಪಯೋಗಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನಡೆಸಿದ ಶೋಧನೆಯಲ್ಲಿ ಈ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು … Continued