ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚುವರಿ 5 ಸಾವಿರ ಕೋಟಿ ರೂ.: ಸಿಎಂ ಬೊಮ್ಮಾಯಿ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಮುಂದಿನ ಬಜೆಟ್‌ನಲ್ಲಿ ಕೆಕೆಆರ್‌ಡಿಬಿಗೆ ನೀಡಲಿರುವ ₹ 3 ಸಾವಿರ ಕೋಟಿ ಹೊರತುಪಡಿಸಿ ಹೆಚ್ಚುವರಿಯಾಗಿ ₹ 5 ಸಾವಿರ ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಸಂದರ್ಭದಲ್ಲಿ ಶನಿವಾರ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಸ್ಥಳೀಯ ಶಾಸಕ, ಕೆಕೆಆರ್‌ಡಿಬಿ ಅಧ್ಯಕ್ಷ … Continued

ಹಾರುವ ಬೈಕ್‌ ಬಂದೇ ಬಿಡ್ತು…ಬೆಲೆ ಮಾತ್ರ 6.19 ಕೋಟಿ ರೂ….! ಇದು ಹಾರುವುದು ಹೇಗೆ-ವೀಕ್ಷಿಸಿ

ಜಪಾನಿನ ಸ್ಟಾರ್ಟ್ಅಪ್ ಕಂಪನಿಯೊಂದು ಗಾಳಿಯಲ್ಲಿ ಹಾರುವ ಬೈಕ್‌ ಒಂದನ್ನು ಅಭಿವೃದ್ಧಿ ಪಡಿಸಿದೆ…! ಜಪಾನಿನ AERWINS ಟೆಕ್ನಾಲಜೀಸ್ ಫ್ಲೈಯಿಂಗ್ ಬೈಕ್ Xturismo ಗುರುವಾರ ಅಮೆರಿಕದಲ್ಲಿ ಡೆಟ್ರಾಯಿಟ್ ಆಟೋ ಶೋದಲ್ಲಿ ಇದನ್ನು ಪ್ರದರ್ಶಿಸಿದೆ. ಹಾರುವ ಕಾರಿನ ಪರಿಕಲ್ಪನೆಯನ್ನು ನೋಡಿ ಆಶ್ಚರ್ಯಚಕಿತರಾದ ನಂತರ, ಆನ್‌ಲೈನ್‌ನಲ್ಲಿ ವಾಹನ ಉತ್ಸಾಹಿಗಳು ಹಾರುವ ಬೈಕ್ ನೋಡಿದ ನಂತರ ಇದು ರಿಯಾಲಿಟಿ ಎಂದು ನಂಬಲು ಸಾಧ್ಯವಾಗುತ್ತಿಲ್ಲ … Continued

ಕೇಂದ್ರ ಬ್ಯಾಂಕ್‌ಗಳು ಹಣದುಬ್ಬರ ನಿಭಾಯಿಸಲು ಬಡ್ಡಿದರ ಹೆಚ್ಚಿಸುವುದರಿಂದ ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತದ ಬಗ್ಗೆ ಎಚ್ಚರಿಸಿದ ವಿಶ್ವ ಬ್ಯಾಂಕ್

ಹಣದುಬ್ಬರಕ್ಕೆ ಪ್ರತಿಕ್ರಿಯೆಯಾಗಿ ವಿಶ್ವದಾದ್ಯಂತ ಹಲವಾರು ಕೇಂದ್ರೀಯ ಬ್ಯಾಂಕ್‌ಗಳು ಏಕಕಾಲದಲ್ಲಿ ಬಡ್ಡಿದರಗಳನ್ನು ಹೆಚ್ಚಿಸುತ್ತಿರುವುದರಿಂದ ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತದ ಬಗ್ಗೆ ವಿಶ್ವಬ್ಯಾಂಕ್ ಶುಕ್ರವಾರ ಎಚ್ಚರಿಸಿದೆ. ಬೆಳವಣಿಗೆ ಹೊಂದುತ್ತಿರುವ ಮಾರುಕಟ್ಟೆಗಳು ಮತ್ತು ಅಭಿವೃದ್ಧಿಶೀಲ ಆರ್ಥಿಕತೆಗಳಲ್ಲಿನ ಹಣಕಾಸಿನ ಬಿಕ್ಕಟ್ಟುಗಳ ಸರಣಿಯು ಶಾಶ್ವತ ಹಾನಿಯನ್ನುಂಟುಮಾಡುತ್ತದೆ ಎಂದು ವಿಶ್ವ ಬ್ಯಾಂಕ್‌ ಹೇಳಿದೆ. ವಿಶ್ವಬ್ಯಾಂಕ್ ವರದಿಯೊಂದರಲ್ಲಿ ವಿಶ್ವದಾದ್ಯಂತದ ಕೇಂದ್ರೀಯ ಬ್ಯಾಂಕ್‌ಗಳು ಕಳೆದ ಐದು … Continued

ಈ ಯುಗವು ಯುದ್ಧದ್ದಲ್ಲ’: ಉಕ್ರೇನ್ ಯುದ್ಧ ಕೊನೆಗೊಳಿಸುವಂತೆ ಮೋದಿ ಪುತಿನ್ ಅವರನ್ನು ಸಾರ್ವಜನಿಕವಾಗಿ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಅಭಿವೃದ್ಧಿಶೀಲ ರಾಷ್ಟ್ರಗಳು ಎದುರಿಸುತ್ತಿರುವ ಆಹಾರ ಮತ್ತು ಇಂಧನ ಭದ್ರತೆಯ ಸಮಸ್ಯೆಗಳನ್ನು ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರನ್ನು ಕೋರಿದ್ದು, ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸಿ ಮಾತುಕತೆಯ ಹಾದಿಗೆ ಮರಳುವಂತೆ ಒತ್ತಾಯಿಸಿದರು. ಉಜ್ಬೇಕಿಸ್ತಾನ್‌ನ ಐತಿಹಾಸಿಕ ನಗರವಾದ ಸಮರ್‌ಕಂಡ್‌ನಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಶೃಂಗಸಭೆಯ ಅಂಚಿನಲ್ಲಿ … Continued

ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳದ ದಾಳಿ ನಂತರ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಬಂಧನ

ನವದೆಹಲಿ: ದೆಹಲಿಯ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿ ಪೊಲೀಸ್ ಘಟಕದ ಭ್ರಷ್ಟಾಚಾರ ನಿಗ್ರಹ ದಳ ಶುಕ್ರವಾರ ಬಂಧಿಸಿದೆ. ಇಂದು, ಶುಕ್ರವಾರ ನಡೆಸಲಾದ ಶೋಧ ಕಾರ್ಯಾಚರಣೆಯಲ್ಲಿ “ಅವರ ವಿರುದ್ಧ ದೋಷಾರೋಪಣೆಯ ವಸ್ತುಗಳು ಮತ್ತು ಸಾಕ್ಷ್ಯಗಳನ್ನು” ವಶಪಡಿಸಿಕೊಂಡ ನಂತರ ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲಾಯಿತು. ಅಮಾನತುಲ್ಲಾ ಖಾನ್ ಅಧ್ಯಕ್ಷರಾಗಿರುವ ದೆಹಲಿ ವಕ್ಫ್ ಬೋರ್ಡ್‌ನಲ್ಲಿ ನಡೆದ ನೇಮಕಾತಿಯಲ್ಲಿನ … Continued

2016ರ ಪ್ರಕರಣದಲ್ಲಿ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿಗೆ 6 ತಿಂಗಳು ಜೈಲು ಶಿಕ್ಷೆ

ಗಾಂಧಿನಗರ: 2016 ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ನ್ಯಾಯಾಲಯವು ಶುಕ್ರವಾರ, ಸೆಪ್ಟೆಂಬರ್ 16ರಂದು ಗುಜರಾತ್ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ 18 ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಗುಜರಾತ್ ವಿಶ್ವವಿದ್ಯಾನಿಲಯದ ಕಾನೂನು ವಿಭಾಗದ ಕಟ್ಟಡಕ್ಕೆ ಬಿಆರ್ ಅಂಬೇಡ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡುವಂತೆ ಒತ್ತಾಯಿಸಿ … Continued

ಹೃದಯ ವಿದ್ರಾವಕ : ಸತ್ತ ಮಾಲೀಕನಿಗೆ ವಿದಾಯ ಹೇಳಲು ಸ್ಮಶಾನಕ್ಕೆ ಓಡಿಬಂದ ಆಕಳ ಕರು-ಮೃತದೇಹದ ಮುಂದೆ ಗೋಳಿಟ್ಟ ಗೋವು, ಅಲ್ಲಿದ್ದವರಿಗೆ ಕಣ್ಣೀರು | ವೀಕ್ಷಿಸಿ

ಮೃತಪಟ್ಟ ತನ್ನ ಮಾಲೀಕನಿಗೆ ಅಂತಿಮ ವಿದಾಯ ಹೇಳಲು ಆಕಳು ಕರು (ದೊಡ್ಡದು) ಓಡೋಡಿ ಬಂದ ಹೃದಯವಿದ್ರಾವಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ ಇದು ಸುದ್ದಿಯಾಗಿತ್ತು. ಆದರೆ ಈಗ ಆಕಳ ಕರು ತನ್ನ ಮಾಲೀಕನ ಶವದ ಮುಂದೆ ಗೋಳಿಡುವ ವೀಡಿಯೊ ವೈರಲ್‌ ಆಗಿದೆ. ಇದು ಎಂಥವನ ಕಣ್ಣಂಚಿನಲ್ಲಿಯೂ ನೀರು ತರಿಸುವಂತಿದೆ. ಜಾರ್ಖಂಡ್‌ನ ಹಜಾರಿಬಾಗ್‌ನ … Continued

ಬಿಬಿಎಂಪಿ ಚುನಾವಣೆ: ವಾರ್ಡ್‌ಗಳ ಪುನರ್‌ ವಿಂಗಡಣೆ ಪ್ರಶ್ನಿಸಿದ್ದ ಅರ್ಜಿಗಳನ್ನು ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ವಿವಿಧ ವಿಧಾನಸಭಾ ಕ್ಷೇತ್ರಗಳ ವಾರ್ಡ್‌ಗಳ ಪುನರ್‌ ವಿಂಗಡಣೆ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಶಾಸಕರಾದ ಸೌಮ್ಯ ರೆಡ್ಡಿ, ಜಮೀರ್ ಅಹ್ಮದ್ ಖಾನ್, ಎಂ. ಸತೀಶ್‌ ರೆಡ್ಡಿ ಸೇರಿದಂತೆ ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಶುಕ್ರವಾರ ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ. ಬಿಬಿಎಂಪಿಯ 243 ವಾರ್ಡ್‌ಗಳಿಗೆ ಹಾಲಿ ಮೀಸಲಾತಿ ನಿಗದಿ … Continued

ಉದ್ಧವ್ ಠಾಕ್ರೆಗೆ ಭಾರೀ ಹಿನ್ನಡೆ : 15 ರಾಜ್ಯಗಳ ಮುಖ್ಯಸ್ಥರಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಪಾಳಯ ಸೇರಿದ 12 ರಾಜ್ಯಗಳ ಮುಖ್ಯಸ್ಥರು…!

ಮುಂಬೈ : ಶಿವಸೇನೆಯ ಬಣ ರಾಜಕೀಯದಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಬಂ ಮೇಲುಗೈ ಸಾಧಿಸಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ಭಾರೀ ಹಿನ್ನಡೆಯಾಗಿದೆ. ಶಿವಸೇನೆಯ ವಿವಿಧ ರಾಜ್ಯ ಘಟಕದ 15 ಮುಖ್ಯಸ್ಥರಲ್ಲಿ 12 ರಾಜ್ಯಗಳ ಮುಖ್ಯಸ್ಥರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣಕ್ಕೆ ಬೆಂಬಲ ಘೋಷಿಸಿದ್ದಾರೆ. ಸೆಪ್ಟೆಂಬರ್‌ 15ರಂದು ಗುರುವಾರ ನಡೆದ ಸಭೆಯಲ್ಲಿ ಶಿವಸೇನಯ … Continued

ಅಮೆಜಾನ್‌ನ ಜೆಫ್ ಬೆಜೋಸ್ ಹಿಂದಿಕ್ಕಿ ಈಗ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿಯಾದ ಭಾರತದ ಉದ್ಯಮಿ ಗೌತಮ್ ಅದಾನಿ…!

ನವದೆಹಲಿ: ಅದಾನಿ ಗ್ರೂಪ್‌ನ ಅಧ್ಯಕ್ಷ ಮತ್ತು ಭಾರತೀಯ ಬಿಲಿಯನೇರ್ ಗೌತಮ್ ಅದಾನಿ ಅಮೆಜಾನ್‌ನ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಈಗ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಫೋರ್ಬ್ಸ್‌ನ ರಿಯಲ್‌ ಟೈಮ್‌ ಮಾಹಿತಿಯ ಪ್ರಕಾರ, ಅವರು ಈಗ ಟೆಸ್ಲಾ ಸಿಇಒ ಎಲೋನ್ ಮಸ್ಕ್‌ಗಿಂತ ಹಿಂದೆ ಇದ್ದಾರೆ, ಎಲೋನ್‌ ಮಸ್ಕ್‌ ಅವರು $ 273.5 ಶತಕೋಟಿ ನಿವ್ವಳ ಮೌಲ್ಯದೊಂದಿಗೆ … Continued