ದಶಕದ ಹಿಂದಿನ ಗೋಮಾಂಸ ಹೇಳಿಕೆಗೆ ಪ್ರತಿಭಟನೆ ಭುಗಿಲೆದ್ದ ನಂತರ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ದರ್ಶನಕ್ಕೆ ಬಂದು ವಾಪಸ್‌ ಹೋದ ರಣಬೀರ್ ಕಪೂರ್ -ಆಲಿಯಾ ಭಟ್ ದಂಪತಿ

ನವದೆಹಲಿ: ತಮ್ಮ ಮುಂಬರುವ ಚಿತ್ರ ಬ್ರಹ್ಮಾಸ್ತ್ರದ ವಿರುದ್ಧ ಹಿಂದೂ ಸಂಘಟನೆಗಳು ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಹೊರಗೆ ಪ್ರತಿಭಟನೆ ನಡೆಸಿದ ನಂತರ ಬಾಲಿವುಡ್‌ ನಟರಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅವರಿಗೆ ಸಂಧ್ಯಾ ಆರತಿಗಾಗಿ ಮಹಾಕಾಳೇಶ್ವರ ದೇವಸ್ಥಾನವನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ. ಆದಾಗ್ಯೂ, ನಿರ್ದೇಶಕ ಅಯನ್ ಮುಖರ್ಜಿ ದೇವಾಲಯದ ಒಳಗಿನ ಗರ್ಭಗುಡಿಯನ್ನು ಪ್ರವೇಶಿಸಿದರು; ಬ್ರಹ್ಮಾಸ್ತ್ರ ಫ್ಯಾಂಟಸಿ ಚಲನಚಿತ್ರವು … Continued

ಹೀರೋ ತಾಯಿ..: ಹುಲಿಯೊಂದಿಗೆ ಹೋರಾಡಿ ಅಂಬೆಗಾಲಿಡುವ ತನ್ನ ಮಗನನ್ನು ಅದರ ದವಡೆಯಿಂದ ರಕ್ಷಿಸಿದ ಧೈರ್ಯಶಾಲಿ ಮಹಿಳೆ…!

ಜಬಲ್‌ಪುರ: ಮಧ್ಯಪ್ರದೇಶದ ಹಳ್ಳಿಯೊಂದರ 25 ವರ್ಷದ ಮಹಿಳೆಯೊಬ್ಬರು ಅಪರೂಪದ ಧೈರ್ಯ ಸಾಹಸ ಪ್ರದರ್ಶಿಸಿ ಹುಲಿಯ ದವಡೆಯಿಂದ ತನ್ನ 15 ತಿಂಗಳ ಮಗನನ್ನು ರಕ್ಷಿಸಿದ್ದಾರೆ. ಮಧ್ಯಪ್ರದೇಶದ ಜಬಲ್‌ಪುರದ ಬಾಂಧವ್‌ಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಹುಲಿಯ ವಿರುದ್ಧ ಹೋರಾಡಿ ತನ್ನ ಮಗನನ್ನು ಹುಲಿಯ ಬಾಯಯಿಂದ ಕಾಪಾಡಿದ್ದಾರೆ. ಈ ವಾರದ ಆರಂಭದಲ್ಲಿ ರೊಹನಿಯಾ ಗ್ರಾಮದಲ್ಲಿ … Continued

ಸಚಿವ ಉಮೇಶ ಕತ್ತಿ ನಿಧನ: ಇಂದು ಬೆಳಗಾವಿ ಜಿಲ್ಲೆ ಶಾಲಾ -ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ, ಸಂಜೆ 5 ಗಂಟೆಗೆ ಅಂತ್ಯಸಂಸ್ಕಾರ

ಬೆಂಗಳೂರು :ಸಚಿವ ಉಮೇಶ ಕತ್ತಿ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ- ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ರಜೆ ಘೋಷಣೆ ಮಾಡಿದ್ದಾರೆ. ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕತ್ತಿ ಉಮೇಶ್ ಕತ್ತಿ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಮೇಶ ಕತ್ತಿ ಅವರ … Continued

ಸಚಿವ ಉಮೇಶ ಕತ್ತಿ ಇನ್ನಿಲ್ಲ : ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನ

ಬೆಂಗಳೂರು: ಸಚಿವ ಉಮೇಶ  ಕತ್ತಿ (62) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು. ಮಂಗಳವಾರ ರಾತ್ರಿ ನಗರದ ಡಾಲರ್ಸ್‌ ಕಾಲೋನಿಯ ನಿವಾಸದಲ್ಲಿ ಉಮೇಶ್‌ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಉಮೇಶ್‌ ಕತ್ತಿ ಮೃತಪಟ್ಟಿದ್ದಾರೆ. ಉಮೇಶ್‌ ಕತ್ತಿ ಅವರ ಅಗಲಿಕೆಯ ಸುದ್ದಿ ಕೇಳಿ ಅವರ ಕುಟುಂಬಸ್ಥರು … Continued

ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತವರು ಸೀಟ್ ಬೆಲ್ಟ್ ಹಾಕದಿದ್ದರೆ ದಂಡ: ಸೈರಸ್ ಮಿಸ್ತ್ರಿ ಅಪಘಾತದ ನಂತರ ನಿತಿನ್ ಗಡ್ಕರಿ ಹೇಳಿಕೆ

ನವದೆಹಲಿ: ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತು ಸೀಟ್ ಬೆಲ್ಟ್ ಧರಿಸದವರಿಗೆ ಶೀಘ್ರದಲ್ಲೇ ದಂಡ ವಿಧಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದಾರೆ. ಮಂಗಳವಾರ ಮುಂಬೈ ಬಳಿ ಕಾರು ಅಪಘಾತದಲ್ಲಿ ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮೃತಪಟ್ಟ ಎರಡು ದಿನಗಳ ನಂತರ ಈ ಹೇಳಿಕೆ ಬಂದಿದೆ. ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ … Continued

ಮಿಮ್ಸ್‌ ಸಿಬ್ಬಂದಿ ಎಡವಟ್ಟು: ಗ್ಯಾಂಗ್ರೀನ್ ಶಸ್ತ್ರಚಿಕಿತ್ಸೆಯಲ್ಲಿ ಕತ್ತರಿಸಿದ ಕಾಲು ತಂದು ರೋಗಿಯ ಪತ್ನಿಯ ಕೈಗಿತ್ತರು ..!

ಮಂಡ್ಯ: ಗ್ಯಾಂಗ್ರೀನ್ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಕತ್ತರಿಸಿದ್ದ ರೋಗಿಯ ಕಾಲನ್ನು ಮಣ್ಣು ಮಾಡುವಂತೆ ಪತ್ನಿ ಕೈಗೆ ಕೊಟ್ಟ ಘಟನೆ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ತಾಲೂಕಿನ ಕೀಲಾರ ಗ್ರಾಮದ ಭಾಗ್ಯಮ್ಮ ಎಂಬವರ ಪತಿ ಪ್ರಕಾಶ ಅವರ ಕಾಲಿಗೆ ಗ್ಯಾಂಗ್ರೀನ್ ಆಗಿದ್ದ ಕಾರಣ ಅವರನ್ನು ಮಂಗಳವಾರ ಮಿಮ್ಸ್‌ನಲ್ಲಿ‌ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆತನ … Continued

ಪಿಎಸ್‌ಐ ನೇಮಕಾತಿ ಹಗರಣ: ಆಡಿಯೋ ಕ್ಲಿಪ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಬಿಜೆಪಿ ಶಾಸಕ

ಬೆಂಗಳೂರು: ಪಿಎಸ್‌ಐ (ಪೊಲೀಸ್ ಸಬ್‌ಇನ್ಸ್‌ಪೆಕ್ಟರ್) ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಏಜೆನ್ಸಿಗಳು ಬಿಜೆಪಿ ಶಾಸಕರೊಬ್ಬರು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಆಕಾಂಕ್ಷಿಯೊಬ್ಬರಿಗೆ ಸಹಾಯ ಮಾಡಲು 15 ಲಕ್ಷ ರೂಪಾಯಿ ಪಡೆದಿರುವ ಆಡಿಯೊ ಕ್ಲಿಪ್‌ಗಳ ಬಗ್ಗೆಯೂ ತನಿಖೆ ನಡೆಸಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ. ಆಡಿಯೋ ಸಂವಾದದಲ್ಲಿ, ಪಿಎಸ್ಐ ಅಭ್ಯರ್ಥಿಯ ತಂದೆ ಎಂದು ಹೇಳಿಕೊಳ್ಳುವ ಪರಸಪ್ಪ … Continued

ಸಮೋಸಾ ಅಂಗಡಿಯಲ್ಲಿ ಬೌಲ್-ಸ್ಪೂನ್ ಕೊಡ್ತಾ ಇಲ್ಲ : ಸಿಎಂ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ ಈ ಮಹಾಶಯ..!

ವಿಲಕ್ಷಣ ಘಟನೆಯೊಂದರಲ್ಲಿ ಛತ್ತರ್‌ಪುರ ಬಸ್ ನಿಲ್ದಾಣದ ರಾಕೇಶ್ ಸಮೋಸಾ ಹೆಸರಿನ ಅಂಗಡಿಯ ವಿರುದ್ಧ ವ್ಯಕ್ತಿಯೊಬ್ಬರು ದೂರು ದಾಖಲಿಸಲು ವ್ಯಕ್ತಿಯೊಬ್ಬರು ಮಧ್ಯಪ್ರದೇಶ ಮುಖ್ಯಮಂತ್ರಿಯ ಸಹಾಯವಾಣಿ ಸಂಖ್ಯೆಗೆ ಫೋನ್ ಮಾಡಿದ್ದಾರೆ. ಸುದ್ದಿ ಪ್ರಕಾರ, ಉಪಾಹಾರ ಗೃಹದಲ್ಲಿನ ಕಳಪೆ ಸೇವೆಗಳ ಬಗ್ಗೆ ಮತ್ತು ‘ಸಮೋಸ’ಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯ ಸಹಾಯವಾಣಿಗೆ ಕರೆ ಮಾಡಿದ್ದಾರೆ…! ಮುಖ್ಯಮಂತ್ರಿಗಳ ಸಹಾಯವಾಣಿ ಸಂಖ್ಯೆಯನ್ನು … Continued

ಕೋವಿಡ್‌ ವಿರುದ್ಧ ಭಾರತದ ಮತ್ತೊಂದು ಸಾಧನೆ: ಭಾರತ್ ಬಯೋಟೆಕ್‌ನ ಮೂಗಿನ ಮೂಲಕ ಬಿಡುವ ಕೋವಿಡ್-19 ಲಸಿಕೆ ಬಳಕೆಗೆ ಅನುಮೋದನೆ

ನವದೆಹಲಿ: ಹೈದರಾಬಾದ್ ಮೂಲದ ಜೈವಿಕ ತಂತ್ರಜ್ಞಾನ ಸಂಸ್ಥೆ ಭಾರತ್ ಬಯೋಟೆಕ್‌ನ ಇಂಟ್ರಾನಾಸಲ್ (ಮೂಗಿನ ಮೂಲಕ ಬಿಡುವ) ಸೂಜಿ ಮುಕ್ತ ಕೋವಿಡ್ -19 ಲಸಿಕೆಯನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದಿಂದ (ಡಿಸಿಜಿಐ) ತುರ್ತು ಬಳಕೆಯ ಅನುಮತಿ ನೀಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಪ್ರಕಟಿಸಿದ್ದಾರೆ. ಸೆಂಟ್ರಲ್ ಡ್ರಗ್ಸ್ … Continued

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ : ಅಕ್ಟೋಬರ್‌ನಲ್ಲಿ ಏಳನೇ ವೇತನ ಆಯೋಗ ರಚನೆ ; ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಅಕ್ಟೋಬರ್ ನಲ್ಲಿ ಏಳನೇ ವೇತನ ಆಯೋಗ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ವಿಧಾನಸೌಧ ಬ್ಯಾಂಕ್ವೆಟ್ ಹಾಲ್​ನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ದಿನ ಉದ್ಘಾಟಿಸಿ ರ್ವೋತ್ತಮ ಸೇವಾ‌ ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ಅಕ್ಟೋಬರ್ … Continued