ಕಾಂಗ್ರೆಸ್‌ಗೆ ಆಘಾತದ ಮೇಲೆ ಆಘಾತ: ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೇರ್ಗಿಲ್ ರಾಜೀನಾಮೆ

ನವದೆಹಲಿ: ಕಾಂಗ್ರೆಸ್‌ಗೆ ಮತ್ತೊಂದು ಆಘಾತದಲ್ಲಿ ಜೈವೀರ್ ಸೇರ್ಗಿಲ್ ಅವರು ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ನಾನು ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇನೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಹಂಗಾಮಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೀಡಿದ ರಾಜೀನಾಮೆ ಪತ್ರದಲ್ಲಿ ಶೇರ್ಗಿಲ್ ಅವರು, “ನಾನು ಪಕ್ಷದ ರಾಷ್ಟ್ರೀಯ ವಕ್ತಾರ … Continued

ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ನಿಗದಿ ಮಾಡಿದೆ. . ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ 10 ಮಹಾನಗರ ಪಾಲಿಕೆಗಳ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ನಿಗದಿ ಮಾಡಿ ರಾಜ್ಯ ಸರ್ಕಾರ ಇಂದು, … Continued

ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಆಪ್ತ ಸಹಾಯಕನ ಮನೆ ಮೇಲೆ ಇಡಿ ದಾಳಿ ವೇಳೆ ಎರಡು ಎಕೆ 47 ಪತ್ತೆ…!

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಆಪ್ತ ಪ್ರೇಮ್ ಪ್ರಕಾಶ್ ಅವರ ಮನೆಯಿಂದ ಜಾರಿ ನಿರ್ದೇಶನಾಲಯ (ಇಡಿ) ಎರಡು ಎಕೆ -47 ರೈಫಲ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಆಪ್ತ ಪ್ರೇಮ್ ಪ್ರಕಾಶ್ ಅವರ ಜಾರ್ಖಂಡ್ ನಿವಾಸದಲ್ಲಿ ಇಡಿ ಶೋಧ ಕಾರ್ಯಾಚರಣೆ ವೇಳೆ, … Continued

ಭಾರತದ ಮೊದಲ ಮೇಡ್-ಇನ್-ಇಂಡಿಯಾ ವಿಮಾನ ವಾಹಕ ನೌಕೆ ವಿಕ್ರಾಂತ್ ಸೆಪ್ಟೆಂಬರ್2 ರಂದು ನೌಕಾಪಡೆಗೆ ಅಧಿಕೃತ ಸೇರ್ಪಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2ರಂದು ಕೊಚ್ಚಿಯಲ್ಲಿ ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ‘ವಿಕ್ರಾಂತ್’ ಅನ್ನು ಸೇನೆಗೆ ನಿಯೋಜಿಸಲಿದ್ದಾರೆ. ಸರ್ಕಾರಿ ಅಧಿಕಾರಿಗಳ ಪ್ರಕಾರ, ವಿಮಾನ ವಾಹಕ ನೌಕೆಯ ಸಾಮರ್ಥ್ಯಗಳ ಬಗ್ಗೆ ಪ್ರಧಾನಿಗೆ ವಿವರಿಸಲಾಗಿದೆ. ವಿಕ್ರಾಂತ್ ಭಾರತದಲ್ಲಿ ನಿರ್ಮಿಸಲಾದ ಅತಿದೊಡ್ಡ ಯುದ್ಧನೌಕೆಯಾಗಿದೆ ಮತ್ತು ಇದು ನೌಕಾಪಡೆ ಮತ್ತು ದೇಶಕ್ಕೆ ಒಂದು ಹೆಗ್ಗುರುತಾಗಿದೆ … Continued

ಎಸಿಬಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಎಸಿಬಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು, ಮಂಗಳವಾರ ಹಿಟಾಚಿ ಎನರ್ಜಿ ಇಂಡಿಯಾ ಆಯೋಜಿಸಿದ್ದ ಪವರ್ ಕ್ವಾಲಿಟಿ ಫ್ಯಾಕ್ಟರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಸಿಬಿ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಮೇಲ್ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ … Continued

ಬಾಲಿವುಡ್‌ನ ಈಗಿನ ಸ್ಥಿತಿಯನ್ನು ರಾಹುಲ್‌ ಗಾಂಧಿಗೆ ಹೋಲಿಸಿದ ನಟಿ ಸ್ವರಾ ಭಾಸ್ಕರ್

ಮುಂಬೈ: ಹಿಂದಿ ಸಿನೆಮಾಗಳು ಒಂದರ ಹಿಂದೆ ಒಂದು ಸೋಲು ಅನುಭವಿಸುತ್ತಿರುವ ಕುರಿತು ನಟಿ ಸ್ವರಾ ಭಾಸ್ಕರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಬಾಲಿವುಡ್ ಕುಸಿತದ ಬಗ್ಗೆ ಮಾತನಾಡುವಾಗ ಬಾಲಿವುಡ್‌ನ  ಸದ್ಯದ ಸ್ಥಿತಿಯನ್ನು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಗೆ ಹೋಲಿಸಿದ್ದಾರೆ. ಇಂಡಿಯಾ ಟುಡೇ ಜೊತೆಗಿನ ವಿಶೇಷ ಚಾಟ್‌ನಲ್ಲಿ ಮಾತನಾಡಿದ ಸ್ವರಾ ಭಾಸ್ಕರ್‌ ಅವರು, ಬಾಲಿವುಡ್ ಚಿತ್ರಗಳು … Continued

ಗೋವು ಕಳ್ಳಸಾಗಣೆ ಪ್ರಕರಣ : ಟಿಎಂಸಿಯ ಅನುಬ್ರತ ಮೊಂಡಲ್‌ಗೆ ಜಾಮೀನು ನೀಡಿ, ಇಲ್ಲದಿದ್ದರೆ…’-ನ್ಯಾಯಾಧೀಶರಿಗೆ ಬಂತು ಬೆದರಿಕೆ ಪತ್ರ

ಅಸನ್ಸೋಲ್‌ (ಪಶ್ಚಿಮ ಬಂಗಾಳ) : ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಸಿಬಿಐ ವಶದಲ್ಲಿರುವ ಟಿಎಂಸಿ ನಾಯಕ ಅನುಬ್ರತ ಮೊಂಡಲ್ ಅವರನ್ನು ಬಿಡುಗಡೆ ಮಾಡದಿದ್ದರೆ ನ್ಯಾಯಾಧೀಶರ ಕುಟುಂಬ ಸದಸ್ಯರ ವಿರುದ್ಧ ಸುಳ್ಳು ಡ್ರಗ್ಸ್‌ ಪ್ರಕರಣ ದಾಖಲಿಸಿ ಸಿಲುಕಿಸಲಾಗುವುದು ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರಿಗೆ ಬೆದರಿಕೆ ಹಾಕಲಾಗಿದೆ. ಮೊಂಡಲ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡದಿದ್ದರೆ, ತಮ್ಮ ಕುಟುಂಬವನ್ನು … Continued

ವಿವಾದಕ್ಕೆ ಕಾರಣವಾಯ್ತು ಗಯಾದ ವಿಷ್ಣುಪಾದ ದೇವಸ್ಥಾನಕ್ಕೆ ಸಿಎಂ ನಿತೀಶ್ ಜೊತೆ ಹಿಂದೂಯೇತರ ಸಚಿವರ ಪ್ರವೇಶ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಿಂದೂಯೇತರ ಸಚಿವರೊಂದಿಗೆ ವಿಷ್ಣುಪಾದ ದೇವಸ್ಥಾನಕ್ಕೆ ಪ್ರವೇಶಿಸಿರುವುದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಗಯಾದ ವಿಷ್ಣುಪಾದ ದೇವಸ್ಥಾನದಲ್ಲಿ ಹಿಂದೂಯೇತರ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ ಮತ್ತು ಕಳೆದ 100 ವರ್ಷಗಳಿಂದ ಈ ನಿಯಮ ಜಾರಿಯಲ್ಲಿದೆ. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಹಿಂದೂಯೇತರರಿಗೆ ಪ್ರವೇಶ ನಿಷಿದ್ಧ ಎಂಬ ಸಂದೇಶದ ಫಲಕಗಳನ್ನು ಅಳವಡಿಸಲಾಗಿದೆ. ಆದಾಗ್ಯೂ, … Continued

ವಿವಿಗಳಲ್ಲಿ ಪ್ರಾಧ್ಯಾಪಕರಾಗಿ ವಿವಿಧ ಕ್ಷೇತ್ರಗಳ ತಜ್ಞರ ನೇಮಕದ ಪ್ರಸ್ತಾಪಕ್ಕೆ ಯುಜಿಸಿ ಅನುಮೋದನೆ: ಇವರಿಗೆ ವಿದ್ಯಾರ್ಹತೆ ಕಡ್ಡಾಯವಲ್ಲ

ನವದೆಹಲಿ: ವಿಶ್ವವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಔಪಚಾರಿಕ ಶೈಕ್ಷಣಿಕ ಅರ್ಹತೆ ಮತ್ತು ಪ್ರಕಟಣೆಯ ಅಗತ್ಯತೆಗಳು ಕಡ್ಡಾಯವಾಗಿರದ ಹೊಸ ವರ್ಗದ ಅಡಿಯಲ್ಲಿ ಬೋಧಕವರ್ಗದ ಸದಸ್ಯರಾಗಿ ಪ್ರಸಿದ್ಧ ತಜ್ಞರನ್ನು ನೇಮಿಸಿಕೊಳ್ಳುವುದು ಶೀಘ್ರದಲ್ಲೇ ಸಾಧ್ಯವಾಗಲಿದೆ. ಕಳೆದ ವಾರ ನಡೆದ 560ನೇ ಸಭೆಯಲ್ಲಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (UGC) ಈ ನಿರ್ಧಾರವನ್ನು ತೆಗೆದುಕೊಂಡಿದೆ ಮತ್ತು “ಪ್ರೊಫೆಸರ್ಸ್ ಆಫ್ ಪ್ರಾಕ್ಟೀಸ್” ಎಂಬ … Continued

ಕುಮಟಾ: ಮಿರ್ಜಾನ್‌ ಬಳಿ ಅಪರೂಪದ ಬಿಳಿ ಹೆಬ್ಬಾವು ಪತ್ತೆ….!

ಕುಮಟಾ: ಉತ್ತರ ಕನ್ನಡಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ ಗ್ರಾಮದಲ್ಲಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಬಿಳಿ ಹೆಬ್ಬಾವು ಸಿಕ್ಕಿದೆ. ಈ ಅಪರೂಪದ ಬಿಳಿ ಹೆಬ್ಬಾವು ಕಂಡು ಜನರಿಗೆ ಗಾಬರಿ ಹಾಗೂ ಅಚ್ಚರಿ ಎರಡೂ ಆಗಿದೆ. ಬಳಿಕ ಉರಗ ತಜ್ಞ ಪವನ್ ನಾಯ್ಕ‌ ಅವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪವನ್ ನಾಯ್ಕ ಬಿಳಿ … Continued