ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಶಾಸಕ ಜಮೀರ್ ಅಹಮ್ಮದ್

ಬೆಂಗಳೂರು: ಹೆಣ್ಣು ಮಕ್ಕಳು ಬುರ್ಖಾ ಹಾಗೂ ಪರ್ದಾ ಧರಿಸದೇ ಇರುವುದರಿಂದ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿಕೆ ನೀಡಿದ್ದ ಶಾಸಕ ಜಮೀರ್‌ ಅಹ್ಮದ್‌ ಈಗ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶ ನನಗಿಲ್ಲ, ನನ್ನ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಅವರು ತಮ್ಮ … Continued

ಕನ್ನಡ ಚಿತ್ರ ರಂಗದ ಹಿರಿಯ ನಟಿ, ರಂಗ ಕಲಾವಿದೆ ಭಾರ್ಗವಿ ನಾರಾಯಣ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ರಂಗ ಕಲಾವಿದೆ ಭಾರ್ಗವಿ ನಾರಾಯಣ ಸೋಮವಾರ (ಫೆ.14) ರಾತ್ರಿ 7:30ಕ್ಕೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು ಹಾಗೂ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ಸಾವಿನ ಕುರಿತು ಅವರ ಮೊಮ್ಮಗಳು, ನಟಿ ಸಂಯುಕ್ತಾ ಹೊರನಾಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಭಾರ್ಗವಿ ನಾರಾಯಣ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ … Continued

ಷೇರುಪೇಟೆ ಭಾರೀ ಕುಸಿತ: ಕೇವಲ 2 ಟ್ರೇಡಿಂಗ್‌ ಅವಧಿಯಲ್ಲಿ 10 ಲಕ್ಷ ಕೋಟಿ ರೂ. ಕಳೆದುಕೊಂಡ ಹೂಡಿಕೆದಾರರು..!

ಮುಂಬೈ: ಈಕ್ವಿಟಿ ಹೂಡಿಕೆದಾರರು ದಲಾಲ್ ಸ್ಟ್ರೀಟ್‌ನಲ್ಲಿ ಎರಡು ದಿನಗಳ ಮಾರಾಟದಲ್ಲಿ 10 ಲಕ್ಷ ಕೋಟಿ ರೂಪಾಯಿಗಳನ್ನು ಕಳೆದುಕೊಂಡರು. ಇದು ಬೆಂಚ್‌ಮಾರ್ಕ್ ಬಿಎಸ್‌ಇ ಸೆನ್ಸೆಕ್ಸ್ ಸೋಮವಾರ 2,520 ಪಾಯಿಂಟ್‌ಗಳನ್ನು ಕುಸಿದು 56,500 ಪಾಯಿಂಟ್ಸ್‌ಗೆ ಬಂದು ನಿಂತಿತು.. ಸೂಚ್ಯಂಕವು ಫೆಬ್ರವರಿ 10 ರಂದು 58,926.03 ರಷ್ಟು ಇದ್ದಿದ್ದು ಫೆಬ್ರವರಿ 14 ರಂದು 56,405.84 ಕ್ಕೆ ಕೊನೆಗೊಂಡಿತು. ರಷ್ಯಾದಿಂದ ಉಕ್ರೇನ್​ … Continued

ಮೋಡಿಮಾಡುವ ಶಿಲ್ಪಕಲೆ-ವಿನ್ಯಾಸಗಳು: ಅಯೋಧ್ಯಾ ರಾಮಮಂದಿರವು ಪೂರ್ಣಗೊಂಡ ನಂತರ ಅದು ಹೇಗೆ ಕಾಣುತ್ತದೆ- 3D ವಿಡಿಯೊ ಬಿಡುಗಡೆ| ವೀಕ್ಷಿಸಿ

ಅಯೋಧ್ಯೆ: 2023ರ ವೇಳೆಗೆ ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ಶ್ರೀರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲು ಎಲ್ಲ ಸಿದ್ಧತೆಗಳು ನಡೆಯುತ್ತಿವೆ. ಮುಂದಿನ ವರ್ಷದಿಂದ ಭಕ್ತರು ರಾಮ ಮಂದಿರದ ದರ್ಶನ ಪಡೆಯಬಹುದು ಎಂದು ತಿಳಿಸಲಾಗಿದೆ. ಅಯೋಧ್ಯೆಯ ರಾಮಮಂದಿರದಲ್ಲಿ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ. ರಾಮಜನ್ಮಭೂಮಿಯಲ್ಲಿ ಬಹುನಿರೀಕ್ಷೆಯ ಭವ್ಯವಾದ ರಾಮ ಮಂದಿರ ನಿರ್ಮಾಣ ಪೂರ್ಣಗೊಂಡ ನಂತರ ಹೇಗೆ ಕಾಣುತ್ತದೆ ಎಂದು ತಿಳಿಯಲು ಬಯಸುತ್ತಿರುವ … Continued

ಜಮೀರ್ ಹೇಳಿಕೆಯನ್ನು ಕಾಂಗ್ರೆಸ್‌ ಒಪ್ಪುವುದಿಲ್ಲ, ಅವರು ಕ್ಷಮೆ ಕೇಳಬೇಕು ಕೇಳ್ತೇನೆ:ಡಿಕೆಶಿ

ಬೆಂಗಳೂರು: ಬುರ್ಖಾ ಧರಿಸದ ಕಾರಣಕ್ಕೆ ದೇಶದಲ್ಲಿ ಅತ್ಯಾಚಾರಗಳು ಹೆಚ್ಚಾಗುತ್ತವೆ ಎಂಬ ಜಮೀರ್ ಅಹ್ಮದ್ ಖಾನ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಅವರು ಆ ಮಾತನ್ನು ಹಿಂಪಡೆಯಲು ಹೇಳುತ್ತೇನೆ ಹಾಗೂ ಅವರು ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ಯಾರೂ ಮಾತನಾಡಬಾರದು ಎಂದು ಎಂದು ಸೂಚಿಸಿದ್ದೆ. ಆದರೂ … Continued

ಕನ್ನಡದ ಹಿರಿಯ ನಟ ರಾಜೇಶ್​ ಆರೋಗ್ಯ ಸ್ಥಿತಿ ಗಂಭೀರ; ಖಾಸಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ರಾಜೇಶ್​ ಅವರಿಗೆ 84 ವರ್ಷ ವಯಸ್ಸಾಗಿದೆ. ಹಲವು ದಶಕಗಳಿಂದ ಚಿತ್ರರಂಗದಲ್ಲಿ ಅನುಭವ ಹೊಂದಿರುವ ಅವರು ವಯಸ್ಸಾದ ನಂತರ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ … Continued

ಹಿಜಾಬ್ ಕುರಿತು ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಲಾಗಿದೆ: ಜಮೀರ್ ಅಹಮದ್ ಸ್ಪಷ್ಟನೆ

ಹುಬ್ಬಳ್ಳಿ: ಸೌಂದರ್ಯ ಕಾಣದಿರಲು ಹಾಗೂ ತಮ್ಮ ರಕ್ಷಣೆಗಾಗಿ ಹಿಜಾಬ್‍ ಧರಿಸುತ್ತಾರೆ ಎಂದಿದ್ದೆ. ಈ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಗೊಂದಲ ಸೃಷ್ಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಜಮೀರ ಅಹ್ಮದ್ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಜಾಬ್ ಹಾಕದಿದ್ದರೆ ಅತ್ಯಾಚಾರ ಆಗುತ್ತದೆಯೆಂದು ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಹೇಳಿಕೆ ತಪ್ಪಾಗಿ ಅರ್ಥಯಸಿ ಗೊಂದಲ … Continued

ರಾಜ್ಯದಲ್ಲಿ ಆನ್‌ಲೈನ್ ಜೂಜು ನಿಷೇಧ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಆನ್‌ಲೈನ್‌ ಜೂಜಾಟ ನಿಷೇಧಿಸುವ ಸಂಬಂಧ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಪೊಲೀಸ್‌ (ತಿದ್ದುಪಡಿ) ಕಾಯಿದೆ-2021 ಅನ್ನು ಹೈಕೋರ್ಟ್‌ ರದ್ದು ಪಡಿಸಿದೆ. ಸರ್ಕಾರದ ಕ್ರಮ ಸಂವಿಧಾನ ಬದ್ಧವಾಗಿಲ್ಲ. ಆನ್​ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಸರ್ಕಾರ ಸಂವಿಧಾನ ಬದ್ಧವಾದ ಶಾಸನ ರೂಪಿಸಲು ಸ್ವತಂತ್ರವಿದೆ. ಆದರೆ ಈಗಿನ ಆದೇಶ ಕಾನೂನುಬಾಹಿರ ಎಂದು ಹೈಕೋರ್ಟ್ ತಿಳಿಸಿದೆ. … Continued

ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡುವ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಸರ್ಕಾರ: ಮೂಲಗಳು

ನವದೆಹಲಿ: ಖಾಸಗಿತನ ಮತ್ತು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಿರುವ ಚೀನಾದ 54 ಆ್ಯಪ್‌ಗಳನ್ನು ನಿಷೇಧಿಸಲು ಕೇಂದ್ರ ಸರಕಾರ ಹೊಸ ಸೂಚನೆಗಳನ್ನು ನೀಡಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ವರದಿಯ ಪ್ರಕಾರ, ಹೆಚ್ಚಿನ ಸಂಖ್ಯೆಯ ಈ ಮೊಬೈಲ್ ಅಪ್ಲಿಕೇಶನ್‌ಗಳು ಟೆನ್ಸೆಂಟ್, ಅಲಿಬಾಬಾ ಮತ್ತು ನೆಟ್‌ಈಸ್‌ನಂತಹ ಟೆಕ್ ದೈತ್ಯರಿಗೆ ಸೇರಿವೆ. ಈ ಅಪ್ಲಿಕೇಶನ್‌ಗಳಲ್ಲಿ ಕೆಲವು ಬ್ಯೂಟಿ ಕ್ಯಾಮೆರಾ: ಸ್ವೀಟ್ … Continued

ಶೀಘ್ರವೇ ದೆಹಲಿಯಲ್ಲಿ ಪ್ರತಿಪಕ್ಷಗಳ ಸಿಎಂಗಳ ಸಭೆ ಎಂದ ಎಂಕೆ ಸ್ಟಾಲಿನ್; ಉದ್ಧವ್ ಠಾಕ್ರೆ, ಮಮತಾ ಬ್ಯಾನರ್ಜಿ ಭೇಟಿ ಮಾಡಲಿರುವ ಕೆಸಿಆರ್

ನವದೆಹಲಿ: ಮಮತಾ ಬ್ಯಾನರ್ಜಿ ಅವರ ಉಪಕ್ರಮದ ಭಾಗವಾಗಿ ಶೀಘ್ರದಲ್ಲೇ ದೆಹಲಿಯಲ್ಲಿ ಪ್ರತಿಪಕ್ಷಗಳ ಮುಖ್ಯಮಂತ್ರಿಗಳ ಸಮಾವೇಶ ನಡೆಯಲಿದೆ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಭಾನುವಾರ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ” ಮಮತಾ ಬ್ಯಾನರ್ಜಿ ಅವರು ಅಧಿಕೃತ ನನಗೆ ದೂರವಾಣಿ ಕರೆ ಮಾಡಿ ಸಾಂವಿಧಾನಿಕ ಅತಿಕ್ರಮಣ ಮತ್ತು ಬಿಜೆಪಿಯೇತರ ರಾಜ್ಯಗಳ ರಾಜ್ಯಪಾಲರು ಅಧಿಕಾರದ ದುರುಪಯೋಗದ ಬಗ್ಗೆ ತಮ್ಮ ಕಳವಳ … Continued