ಕೇಂದ್ರ ಬಜೆಟ್ 2022 -ಮೂಲಸೌಕರ್ಯ, ಉದ್ಯೋಗ ಸೃಷ್ಟಿಗೆ ದೊಡ್ಡ ಉತ್ತೇಜನ.. ಬಜೆಟ್‌ ಪ್ರಮುಖಾಂಶಗಳು

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿದ 2022-23ನೇ ಸಾಲಿನ ಕೇಂದ್ರದ ಬಜೆಟ್ಟಿನಲ್ಲಿ ಈ ವರ್ಷ ಭಾರತದ ಆರ್ಥಿಕ ಬೆಳವಣಿಗೆಯು ಎಲ್ಲಾ ದೊಡ್ಡ ಆರ್ಥಿಕತೆಗಳಲ್ಲೇ ಗರಿಷ್ಠವಾಗಿರಲಿದ್ದು, ಶೇ. 9.2ರಷ್ಟು ಇರಲಿದೆ ಎಂದು ನಿರೀಕ್ಷಿಸಿದ್ದಾರೆ. ಒಟ್ಟಾರೆಯಾಗಿ 14 ವಲಯಗಳಿಗೆ ನೀಡಲಾಗುವ ಉತ್ಪಾದನೆ ಆಧಾರಿತ ಪ್ರೋತ್ಸಾಹಧನ ಯೋಜನೆಯಿಂದ 60 ಲಕ್ಷ ಹೊಸ ಉದ್ಯೋಗಳು ಸೃಷ್ಟಿಯಾಗಲಿವೆ ಎಂದು … Continued

ಕೇಂದ್ರ ಬಜೆಟ್-2022: ಯಾವುದು ಅಗ್ಗವಾಗಲಿದೆ, ಯಾವುದು ದುಬಾರಿಯಾಗಲಿದೆ | ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಏಪ್ರಿಲ್ 1 ರಿಂದ ಪ್ರಾರಂಭವಾಗುವ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡಿಸಿದರು. 2022/2023 ರ ಬಜೆಟ್‌ನಲ್ಲಿ ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯು ಕೋವಿಡ್‌ ಸಾಂಕ್ರಾಮಿಕ-ಪ್ರೇರಿತ ಕುಸಿತದಿಂದ ಹೊರಹೊಮ್ಮುವುದರಿಂದ ಸಾರ್ವಜನಿಕ ಹೂಡಿಕೆಯ ಮೂಲಕ ಆರ್ಥಿಕ ಬೆಳವಣಿಗೆಗೆ ಅಡಿಪಾಯ ಹಾಕುತ್ತದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ. ಅಲ್ಲದೆ ಮೂಲಸೌಕರ್ಯವು … Continued

ಬಜೆಟ್‌-2022: ಶೀಘ್ರದಲ್ಲೇ ಇ ಪಾಸ್‌ಪೋರ್ಟ್‌, 5G ಸ್ಪೆಕ್ಟ್ರಮ್ ಹರಾಜು ಪ್ರಕ್ರಿಯೆ ಆರಂಭ

ಹೊಸದಿಲ್ಲಿ: 2022ರ ಬಜೆಟ್‌ನಲ್ಲಿ 5G ಟೆಕ್ನಾಲಜಿ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ. ಮೈಕ್ರೋಚಿಪ್ ಹೊಂದಿರುವ ಇ-ಪಾಸ್‌ಪೋರ್ಟ್‌ಗಳನ್ನು ಶೀಘ್ರದಲ್ಲೇ ನೀಡಲಾಗುತ್ತದೆ ಎಂದು ಅವರು ಪ್ರಕಟಿಸಿದ್ದಾರೆ. ಖಾಸಗಿ ಟೆಲಿಕಾಂ ಕಂಪನಿಗಳು 5G ಮೊಬೈಲ್ ಸೇವೆಗಳನ್ನು ಪ್ರಾರಂಭಿಸಲು ಅಗತ್ಯವಿರುವ ಸ್ಪೆಕ್ಟ್ರಮ್ ಅನ್ನು 2022-23 ರೊಳಗೆ ಹರಾಜು ಮಾಡಲಾಗುವುದು ಎಂದು ಘೋಷಿಸಿದರು. ಆದರೆ, 5G ತಂತ್ರಜ್ಞಾನ … Continued

ಬಜೆಟ್‌ 2022: ಕ್ರಿಪ್ಟೋ ಕರೆನ್ಸಿಗೆ ಭಾರತ ಎಂಟ್ರಿ , ಕ್ರಿಪ್ಟೋ ಆದಾಯಕ್ಕೆ 30% ತೆರಿಗೆ

ನವದೆಹಲಿ: ಭಾರತ ಈಗ ಅಧಿಕೃತವಾಗಿ ಕ್ರಿಪ್ಟೋ ಕರೆನ್ಸಿಗೆ ಎಂಟ್ರಿ ಮಾಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಮ್ಮ ಬಜೆಟ್‌ ಭಾಷಣದಲ್ಲಿ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಡಿಜಿಟಲ್‌ ರುಪಿ ಬಿಡುಗಡೆ ಮಾಡಲಿದೆ ಎಂದು ಪ್ರಕಟಿಸಿದ್ದಾರೆ. ಬ್ಲಾಕ್‌ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಿಕೊಂಡು ಆರ್‌ಬಿಐ 2022-23ನೇ ಹಣಕಾಸು ವರ್ಷದಲ್ಲಿ ಡಿಜಿಟಲ್ ರೂಪಾಯಿಯನ್ನು ನೀಡಲಿದೆ. ಇದರಿಂದ ಆರ್ಥಿಕತೆಗೆ ದೊಡ್ಡ … Continued

ಬಜೆಟ್ 2022: ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ ಯಾವುದೇ ಬದಲಾವಣೆ ಇಲ್ಲ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸುವಾಗ, ವೈಯಕ್ತಿಕ ಆದಾಯ ತೆರಿಗೆ ವರ್ಗಕ್ಕೆ ತೆರಿಗೆ ಸ್ಲ್ಯಾಬ್‌ಗಳಲ್ಲಿ ಯಾವುದೇ ಹೊಸ ಬದಲಾವಣೆಗಳನ್ನು ಘೋಷಿಸಲಿಲ್ಲ. ಪ್ರಸ್ತುತ ಆದಾಯ ತೆರಿಗೆ ಪದ್ಧತಿಯಲ್ಲಿ ಕೆಲವು ಬದಲಾವಣೆಗಳನ್ನು ಪರಿಚಯಿಸಲಾಗುವುದು ಎಂದು ನಿರೀಕ್ಷಿಸಲಾಗಿತ್ತು, ಆದರೆ, ಯಾವುದೇ ಮಹತ್ವದ ಬದಲಾವಣೆಯನ್ನು ಘೋಷಿಸಲಾಗಿಲ್ಲ. ಆದಾಗ್ಯೂ, ತೆರಿಗೆದಾರರು ಈಗ ಎರಡು ವರ್ಷಗಳಲ್ಲಿ I-T ರಿಟರ್ನ್ಸ್ … Continued

ಬಜೆಟ್ 2022: 60 ಲಕ್ಷ ಉದ್ಯೋಗ ಸೃಷ್ಟಿ ಸರ್ಕಾರದ ಮುಂದಿನ ಗುರಿ-ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಬಜೆಟ್ 2022 ಅನ್ನು ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದು ಸರ್ಕಾರದ ಮುಂದಿನ ಗುರಿಯಾಗಿದೆ ಎಂದು ಹೇಳಿದರು. “ಪಿಎಂ ಗತಿ ಶಕ್ತಿಯು ಆರ್ಥಿಕತೆಯನ್ನು ಮುಂದಕ್ಕೆ ಎಳೆಯುತ್ತದೆ ಮತ್ತು ಯುವಕರಿಗೆ ಹೆಚ್ಚಿನ ಉದ್ಯೋಗಗಳು ಮತ್ತು ಅವಕಾಶಗಳಿಗೆ ಕಾರಣವಾಗುತ್ತದೆ” ಎಂದು ಅವರು ಹೇಳಿದರು. ದೇಶದಲ್ಲಿ ಯುವಕರು, ಮಹಿಳೆಯರು ಮತ್ತು … Continued

ಟಾಟಾ ಸ್ಟೀಲ್ ಲಾಂಗ್ ಪ್ರಾಡಕ್ಟ್‌ಗೆ 12,100 ಕೋಟಿ ರೂ.ಗಳಿಗೆ ಎನ್‌ಐಎನ್‌ಎಲ್ ಮಾರಾಟಕ್ಕೆ ಸರ್ಕಾರದ ಅನುಮೋದನೆ

ನವದೆಹಲಿ: ನಷ್ಟದಲ್ಲಿರುವ ನೀಲಾಚಲ ಇಸ್ಪಾತ್ ನಿಗಮ್ ಲಿಮಿಟೆಡ್ (ಎನ್‌ಐಎನ್‌ಎಲ್) ಅನ್ನು ಟಾಟಾ ಸ್ಟೀಲ್ ಲಾಂಗ್ ಪ್ರಾಡಕ್ಟ್ಸ್ ಲಿಮಿಟೆಡ್‌ಗೆ 12,100 ಕೋಟಿ ರೂ.ಗಳಿಗೆ ಮಾರಾಟ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಸರ್ಕಾರ ಸೋಮವಾರ ತಿಳಿಸಿದೆ. ಎನ್‌ಐಎನ್‌ಎಲ್ (NINL) ನಾಲ್ಕು ಸಿಪಿಎಸ್‌ಇ (CPSE) ಗಳ ಜಂಟಿ ಉದ್ಯಮವಾಗಿದೆ, ಅವುಗಳೆಂದರೆ MMTC, NMDC, BHEL, MECON ಮತ್ತು ಎರಡು ಒಡಿಶಾ … Continued

ಜೆಡಿಎಸ್‌ನಿಂದ ಎಲ್.ಆರ್ ಶಿವರಾಮೇಗೌಡ ಉಚ್ಚಾಟನೆ

ಬೆಂಗಳೂರು: ಜೆಡಿಎಸ್‌ನಿಂದ ಎಲ್.ಆರ್. ಶಿವರಾಮೇಗೌಡ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದು, ದಿ. ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾರಣಕ್ಕೆ ಎಲ್.ಆರ್. ಶಿವರಾಮೇಗೌಡ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಉಚ್ಚಾಟಿಸಿ ಆದೇಶಿಸಲಾಗಿದೆ. ಮಾಜಿ ಸಂಸದ ಶಿವರಾಮೇಗೌಡ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಎಲ್.ಆರ್ ಶಿವರಾಮೇಗೌಡ … Continued

ಕೋವಿಡ್-19 ನಕಾಶೆಯಲ್ಲಿ ಚೀನಾ-ಪಾಕಿಸ್ತಾನ ಸೇರಿದ ಕಾಶ್ಮೀರ!

ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್-19 ಡ್ಯಾಶ್ ಬೋರ್ಡ್ ನಲ್ಲಿ ಪ್ರಕಟಿಸಿದ ವಿಶ್ವ ನಕಾಶೆಯಲ್ಲಿ ಕಾಶ್ಮೀರವನ್ನು ಚೀನಾ, ಪಾಕಿಸ್ತಾನಕ್ಕೆ ಸೇರಿಸಲಾಗಿದೆ. ಈ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಶಂತನು ಸೇನ್ ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ. ತಪ್ಪು ಮಾಹಿತಿ ನೀಡುವ ನಕಾಶೆ … Continued

ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮುನ್ನ ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭ

ನವದೆಹಲಿ: ಕೇಂದ್ರ ಬಜೆಟ್ ಅಧಿವೇಶನಸೋಮವಾರದಿಂದ ಪ್ರಾರಂಭವಾಗಲಿದೆ ಮತ್ತು ಸಂಪ್ರದಾಯದ ಪ್ರಕಾರ ಇದು ವರ್ಷದ ಮೊದಲ ಅಧಿವೇಶನವಾಗಿದ್ದು, ರಾಷ್ಟ್ರಪತಿಗಳ ಭಾಷಣದೊಂದಿಗೆ ಪ್ರಾರಂಭವಾಗುತ್ತದೆ. ಕೋವಿಡ್ -19 ಸಾಂಕ್ರಾಮಿಕ ಗಮನದಲ್ಲಿಟ್ಟುಕೊಂಡು, ಅಧಿವೇಶನದಲ್ಲಿ ಅನೇಕ ನಿರ್ಬಂಧಗಳು ಇರಲಿವೆ ಮತ್ತು ಮೊದಲ ಎರಡು ದಿನಗಳನ್ನು ಹೊರತುಪಡಿಸಿ, ಲೋಕಸಭೆ ಮತ್ತು ರಾಜ್ಯಸಭೆಯ ಎರಡೂ ಸದನಗಳನ್ನು ಎರಡು ಪಾಳಿಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಉಭಯ ಸದನಗಳಲ್ಲಿ ಎರಡು … Continued