ಮಹತ್ವದ ನಿರ್ಧಾರ.. ಹಿಂದೂ ಧಾರ್ಮಿಕ ದತ್ತಿ ಇಲಾಖೆ- ದೇಗುಲದ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಕೇಂದ್ರಕ್ಕೆ ನೀಡುವಂತಿಲ್ಲ : ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣವನ್ನು ಅನ್ಯಧರ್ಮದ ಪ್ರಾರ್ಥನಾ ಕೇಂದ್ರಗಳ ಬಳಕೆಗೆ ತಡೆ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ತಸ್ತೀಕ್ ಮತ್ತು ವರ್ಷಾಸನ ಅನುದಾನವನ್ನು ಹಿಂದೂಯೇತರ ಸಂಸ್ಥೆಗಳಿಗೆ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯವ್ಯಯದಲ್ಲಿಯೇ ಪ್ರತಿವರ್ಷ ಬಿಡುಗಡೆ ಮಾಡುತ್ತಿರುವುದಕ್ಕೆ ರಾಜ್ಯ ಮತ್ತು ಧಾರ್ಮಿಕ ಪರಿಷತ್​ನ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ … Continued

ಕೇಂದ್ರದ ಹೊಸ ಕೃಷಿ ಕಾನೂನು ವಿರೋಧಿಸಿ ಸಂಸತ್ತಿಗೆ ರಾಹುಲ್ ಗಾಂಧಿ ಟ್ರ್ಯಾಕ್ಟರ್ ಸವಾರಿ

ನವದೆಹಲಿ: ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸುವ ಸಲುವಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಸಂಸತ್ತಿಗೆ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಬಂದು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು ಮತ್ತು ಈ ಮೂರು ಕೆಟ್ಟ ಕಾನೂನುಗಳನ್ನು ರದ್ದುಗೊಳಿಸುವಂತೆ ಕೇಂದ್ರದ ಬಿಜೆಪಿ ಸರ್ಕಾರವನ್ನು ಆಗ್ರಹಿಸಿದರು. ನಾನು ರೈತರ ಸಂದೇಶವನ್ನು ಹೊತ್ತು ಸಂಸತ್ತಿಗೆ ಬಂದಿದ್ದೇನೆ. ಸರ್ಕಾರ … Continued

ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಯಡಿಯೂರಪ್ಪ ಬಂಪರ್ ಕೊಡುಗೆ :ತುಟ್ಟಿ ಭತ್ಯೆ ಮತ್ತೆ ಹೆಚ್ಚಳ..!

ಬೆಂಗಳೂರು : ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಹಿ ಸುದ್ದಿ ಕೊಟ್ಟಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿರುವ ಸಿಎಂ ಯಡಿಯೂರಪ್ಪ, ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.11.25 ರಿಂದ ಶೇ.21.50ಕ್ಕೆ ಹೆಚ್ಚಿಸಲು ಅನುಮತಿ ನೀಡಿದ್ದರು.ಈಗ ಜುಲೈ 1ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರಿ … Continued

ಕರ್ನಾಟಕದ ಮುಂದಿನ ಸಿಎಂ ಆಯ್ಕೆ: ದೆಹಲಿಯಲ್ಲಿ ಅಮಿತ್​ ಶಾ ತುರ್ತು ಸಭೆ; ರಾಜ್ಯಕ್ಕೆ ನಾಳೆ ಧರ್ಮೇಂದ್ರ ಪ್ರಧಾನ್

ಬೆಂಗಳೂರು: ಬಿ.ಎಸ್.​ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಕೂಡ ಅಂಗೀಕಾರವಾಗಿದೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಕಾರ್ಯನಿರ್ವಹಿಸಲಿದ್ದಾರೆ. ಯಡಿಯೂರಪ್ಪ ಬಳಿಕ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಆಯ್ಕೆ ನಡೆಸಲುದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತಾ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಸಂಸತ್​ ಭವನದಲ್ಲಿ ಅಮಿತ್​ ಶಾ ನೇತೃತ್ವದಲ್ಲಿ … Continued

ರಾಜೀನಾಮೆಗೆ ಬಿಜೆಪಿ ವರಿಷ್ಠರಿಂದ ಯಾವುದೇ ಒತ್ತಡವಿಲ್ಲ, ರಾಜ್ಯಪಾಲನಾಗುವುದಿಲ್ಲ ಎಂದ ಯಡಿಯೂರಪ್ಪ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಸಲ್ಲಿಸಿದರು. ಯಡಿಯೂರಪ್ಪ ಅವರ ರಾಜೀನಾಮೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಕೇವಲ ಎರಡು ವರ್ಷಗಳನ್ನು ಪೂರೈಸಿದ ಸಮಯದಲ್ಲಿ ಬಂದಿದೆ. ಯಡಿಯೂರಪ್ಪಹೇಳಿದ್ದೇನು..?: ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ ನಂತರ ಯಡಿಯೂರಪ್ಪ, “ಹೈಕಮಾಂಡ್‌ನಿಂದ ಯಾವುದೇ … Continued

ಎರಡು ದಿನಗಳೊಳಗೆ ಕರ್ನಾಟಕಕ್ಕೆ ಹೊಸ ಸಿಎಂ ಆಯ್ಕೆ ಸಾಧ್ಯತೆ: ಉತ್ತರ ಕರ್ನಾಟಕಕ್ಕೆ ಮಣೆ ?

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡುವುದಾಗಿ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಹೀಗಾಗಿ ಈಗ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಪ್ರಶ್ನೆ ಮುಂಚೂಣಿಗೆ ಬಂದಿದೆ. ಜುಲೈ 26ರಂದು ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ 2ನೇ ವರ್ಷದ ಸಂಭ್ರಮಾಚರಣೆಯೊಂದಿಗೆ ವಿದಾಯ ಭಾಷಣದ ಮಾಡಿದ ಯಡಿಯೂರಪ್ಪ ಅವರ ಬದಲಿಗೆ ಬಿಜೆಪಿ ಹೈಕಮಾಂಡ್ ಅಚ್ಚರಿಯ ಹೆಸರನ್ನು ಪ್ರಕಟಿಸುವ ಸಾಧ್ಯತೆಯೂ ಇದೆ … Continued

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಭಾನುವಾರ ನಡೆದ ಬಿಜೆಪಿ ಸರ್ಕಾರದ ಎರಡು ವರ್ಷ ಪೂರ್ಣಗೊಳಿಸಿದ ಸಾಧನಾ ಸಮಾವೇಶದಲ್ಲಿ ತಮ್ಮ ರಾಜೀನಾಮೆ ನಿರ್ಧಾರ ಪ್ರಕಟಿಸಿದ ನಂತರ  ರಾಜಭವನಕ್ಕೆ ತೆರಳಿ ರಾಜ್ಯಪಾಲ  ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ   ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಮಧಯಾಹ್ನ ಊಟದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲ … Continued

ಅಭಿನಯ ಶಾರದೆ ಕನ್ನಡದ ಹಿರಿಯ ನಟಿ ಜಯಂತಿ ನಿಧನ

ಬೆಂಗಳೂರು: ಅಭಿನಯ ಶಾರದೆ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಯಂತಿ ಸೋಮವಾರ ನಿಧನರಾಗಿದ್ದಾರೆ..ಅವರಿಗೆ 76 ವರ್ಷ ವಯಸ್ಸಾಗಿತ್ತು. ಸೋಮವಾರ ಬೆಳಗಿನ ಜಾವ  ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಬದುಕಿಗೆ ವಿದಾಯ ಹೇಳಿದ್ದಾರೆ. ಕನ್ನಡ ಸೇರಿದಂತೆ ದಕ್ಷಿಣ … Continued

28% ಭಾರತೀಯರಿಂದ ಆಗಸ್ಟ್-ಸೆಪ್ಟೆಂಬರಿನಲ್ಲಿ ಪ್ರಯಾಣಿಸಲು ಯೋಜನೆ, ಮೂರನೇ ಕೋವಿಡ್‌-19 ಅಲೆ ಅಪಾಯವೂ ಹೆಚ್ಚಲಿದೆ: ವರದಿ

ದೇಶದ ಕೆಲವು ಪ್ರಮುಖ ಹಬ್ಬಗಳ ಸಮಯವಾದ ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಶೇಕಡಾ 28 ರಷ್ಟು ಭಾರತೀಯರು ಪ್ರಯಾಣಿಸಲು ಯೋಜಿಸುತ್ತಿರುವುದರಿಂದ, ಸಾಂಕ್ರಾಮಿಕ ರೋಗದ ಮೂರನೇ ಅಲೆಯ ಅಪಾಯವು ಹೆಚ್ಚಾಗಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಒಂದು ಹೇಳಿಕೆಯಲ್ಲಿ, ಆನ್‌ಲೈನ್ ಪ್ಲಾಟ್‌ಫಾರ್ಮ್ ಲೋಕಲ್ ಸರ್ಕಲ್ಸ್ ಏಪ್ರಿಲ್ 12 ರಂದು ನಡೆಸಿದ ತನ್ನ ಸಮೀಕ್ಷೆಯು ಪ್ರಯಾಣದ ನಿರ್ಬಂಧಗಳನ್ನು ವಿಧಿಸಲು ಸರ್ಕಾರಗಳಿಗೆ ಸೂಚಿಸುವ ತಕ್ಷಣದ ಎರಡನೇ … Continued

ಲೋಕಸಭೆ ಸದಸ್ಯರ ಬಲವ 1,000 ಕ್ಕೆ ಹೆಚ್ಚಿಸಲು ಬಿಜೆಪಿ ಯೋಜಿಸಿದೆ, ಸಾರ್ವಜನಿಕ ಸಮಾಲೋಚನೆ ಆಗಬೇಕು-ಮನೀಶ್ ತಿವಾರಿ

ನವದೆಹಲಿ: 2024 ಕ್ಕಿಂತ ಮೊದಲು ಲೋಕಸಭೆಯ ಸದಸ್ಯರ ಬಲವನ್ನು 1,000 ಅಥವಾ ಅದಕ್ಕಿಂತ ಹೆಚ್ಚಿಗೆ ಮಾಡಲು ಬಿಜೆಪಿ ಯೋಜಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಹೇಳಿದ್ದಾರೆ ಮತ್ತು ಗಂಭೀರ ಸಾರ್ವಜನಿಕ ಸಮಾಲೋಚನೆಗೆ ಅವರು ಕರೆ ನೀಡಿದ್ದಾರೆ. ಸಂಸತ್ತಿನ ಕೆಳಮನೆ ಸ್ಥಾನಗಳ ಸಂಖ್ಯೆ ಹೆಚ್ಚಿಸುವ ಪ್ರಸ್ತಾಪವಿದೆ ಎಂದು ಬಿಜೆಪಿಯಲ್ಲಿ ತಮ್ಮ ಸಂಸದೀಯ ಸಹೋದ್ಯೋಗಿಗಳಿಂದ ವಿಶ್ವಾಸಾರ್ಹ ಮಾಹಿತಿ … Continued