ರೈತರಿಗೆ ಸಿಹಿ ಸುದ್ದಿ.. ರಸಗೊಬ್ಬರ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಬ್ರೇಕ್‌..!

  ನವದೆಹಲಿ: ರಸಗೊಬ್ಬರದ ಬೆಲೆಯನ್ನು ಇಫ್ಕೊ ಕಂಪನಿ ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದ್ದಕ್ಕೆ ರೈತ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಹೀಗಾಗಿ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆಗೆ ಬ್ರೇಕ್‌ ಹಾಕಿದೆ. ಯಾವುದೇ ಕಾರಣಕ್ಕೂ ರಸಗೊಬ್ಬರದ ದರಗಳಲ್ಲಿ ಹೆಚ್ಚಳ ಮಾಡದಂತೆ ಕಂಪನಿಗಳಿಗೆ ನಿರ್ದೇಶನ ನೀಡಿದೆ. ಯೂರಿಯಾ ಅಲ್ಲದ ರಸಗೊಬ್ಬರಗಳ ಎಂ.ಆರ್.ಪಿ.ಯನ್ನು ಹೆಚ್ಚಳ ಮಾಡದಂತೆ ಕೇಂದ್ರ ಸರ್ಕಾರ … Continued

ಧಾರ್ಮಿಕ ಮತಾಂತರ: ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್

ನವ ದೆಹಲಿ: 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮ ಆಯ್ಕೆಮಾಡಿಕೊಳ್ಳಲು ಮುಕ್ತರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೂಢನಂಬಿಕೆ, ಪ್ರಚೋದನೆ, ಮಾಟ-ಮಂತ್ರ, ಆರ್ಥಿಕ ಲಾಭದ ಹೆಸರಿನಲ್ಲಿ ಮತಾಂತರ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಅಶ್ವಿನಿ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, … Continued

ಕೊವಿಡ್ ಲಸಿಕೆ ಬದಲು ಮೂವರು ಮಹಿಳೆಯರಿಗೆ ‌ರೇಬೀಸ್‌ ಲಸಿಕೆ…!!

ಮುಜಫರ್‌ನಗರ: ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೂವರು ಮಹಿಳೆಯರಿಗೆ ಕೋವಿಡ್ -19 ಲಸಿಕೆ ಬದಲು ರೇಬೀಸ್ ವಿರೋಧಿ ಚುಚ್ಚುಮದ್ದನ್ನು ನೀಡಲಾಗಿದೆ ಎಂದು ಅವರ ಕುಟುಂಬಗಳು ಶುಕ್ರವಾರ ಹೇಳಿಕೊಂಡಿವೆ. ಕೊರೊನಾ ವೈರಸ್ ವಿರುದ್ಧ ಲಸಿಕೆ ಪಡೆಯಲು ಸರೋಜ (70), ಅನಾರ್ಕಲಿ (72) ಮತ್ತು ಸತ್ಯವತಿ (60) ಎಂಬ ಮಹಿಳೆಯರು ಗುರುವಾರ ಕಾಂಧ್ಲಾದ ಸರ್ಕಾರಿ ಸಮುದಾಯ … Continued

ಬೆಂಗಳೂರು ಸೇರಿದಂತೆ 8 ನಗರಗಳಿಗೆ ರಾತ್ರಿ ಕರ್ಪ್ಯೂ ಮಾರ್ಗಸೂಚಿ ಪ್ರಕಟ..ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರ ಕೊರೋನಾ ಸೋಂಕಿತ 8 ನಗರಗಳಲ್ಲಿ ರಾತ್ರಿ ಕರ್ಪ್ಯೂವನ್ನು ಏಪ್ರಿಲ್ 10ರಿಂದ ಜಾರಿಗೊಳಿಸಿ ಸರ್ಕಾರ ಆದೇಶಿಸಿದ್ದು, ಈ ಕುರಿತು ಸರ್ಕಾರ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ರಾಜ್ಯದ 8 ನಗರಗಳಲ್ಲಿ ಅನ್ವಯವಾಗುವಂತ ರಾತ್ರಿ ಕರ್ಪ್ಯೂ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದ್ದು, ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ವಿನಾಯಿತಿ … Continued

ಇಫ್ಕೊ ರಸಗೊಬ್ಬರಗಳ ಬೆಲೆಯಲ್ಲಿ ಭಾರೀ ಪ್ರಮಾಣದ ಹೆಚ್ಚಳ..!

ಭಾರತದ ಅತಿದೊಡ್ಡ ರಸಗೊಬ್ಬರ ತಯಾರಕ ಇಫ್ಕೊ ಲಿಮಿಟೆಡ್ (ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋಆಪರೇಟಿವ್ ಲಿಮಿಟೆಡ್) ರಸಗೊಬ್ಬರಗಳ ಬೆಲೆಯಲ್ಲಿ ತೀವ್ರ ಏರಿಕೆಯಾಗಿದೆ. ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) ಬೆಲೆಯಲ್ಲಿ 58.33% ಹೆಚ್ಚಳವಾಗಿದೆ, ಮತ್ತು ಇದಕ್ಕೆ ಅದರ ಸಿಇಒ ಟೀಕೆಗೆ ಗುರಿಯಾಗಿದ್ದಾರೆ. ಇಫ್ಕೊ ಉಲ್ಲೇಖಿಸಿರುವ ಸಿಇಒ ಅವಸ್ಥಿ, ಸಂಕೀರ್ಣ ರಸಗೊಬ್ಬರ ಬೆಲೆಗಳು “ತಾತ್ಕಾಲಿಕ” ಎಂದು ಹೇಳಿದ್ದಾರೆ. ಕಚ್ಚಾ ವಸ್ತುಗಳ ಅಂತಾರಾಷ್ಟ್ರೀಯ … Continued

ಭಾರತದಲ್ಲಿ ಶುಕ್ರವಾರ 1.31 ಲಕ್ಷ ದಾಟಿದ ದೈನಂದಿನ ಕೊರೊನಾ ಸೋಂಕು..ಇದು ಈವರೆಗಿನ ಸಾರ್ವಕಾಲಿಕ ಗರಿಷ್ಠ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಸತತವಾಗಿ ಮೂರನೇ ದಿನವೂ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 1,31,830 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು ದಯನಂದಿನ ಸೋಂಕಿನಲ್ಲಿ ಈ ಹಿಂದಿನ ಎಲ್ಲ ದಾಖಲೆಗಳನ್ನೂ ಮುರಿದಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ … Continued

ಕೊರೊನಾ ಸಾಂಕ್ರಾಮಿಕದ ಮಧ್ಯೆ ಆಫೀಸ್‌ ಲೀಸ್‌ ಜನವರಿ-ಮಾರ್ಚ್‌ನಲ್ಲಿ ಶೇ.36 ಕುಸಿತ: ವರದಿ

ಕೊವಿಡ್‌-19 ಸಾಂಕ್ರಾಮಿಕ ರೋಗದಿಂದಾಗಿ ಕಡಿಮೆ ಬೇಡಿಕೆಯ ಮೇರೆಗೆ ಈ ವರ್ಷದ ಜನವರಿ-ಮಾರ್ಚ್ ಅವಧಿಯಲ್ಲಿ ಏಳು ಪ್ರಮುಖ ನಗರಗಳಲ್ಲಿ ಕಚೇರಿ ಜಾಗದ ನಿವ್ವಳ ಲೀಸ್‌ (ಗುತ್ತಿಗೆ) ಶೇಕಡಾ 36 ರಷ್ಟುಕುಸಿತವಾಗಿದ್ದು, 5.5 ದಶಲಕ್ಷ ಚದರ ಅಡಿಗಳಿಗೆ ತಲುಪಿದೆ ಎಂದು ಆಸ್ತಿ ಸಲಹೆಗಾರ ಜೆಎಲ್ಎಲ್ ಇಂಡಿಯಾ ತಿಳಿಸಿದೆ. ಆದಾಗ್ಯೂ, ಕಚೇರಿ ಬಾಡಿಗೆ ಸ್ಥಿರವಾಗಿದೆ ಎಂದು ಹೇಳಿದೆ. ಏಳು ಪ್ರಮುಖ … Continued

ಸರ್ಕಾರದ ಮಹತ್ವದ ಆದೇಶ: ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ‘ನೈಟ್ ಕರ್ಪ್ಯೂ’ ಜಾರಿ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಹೆಚ್ಚಳವಿರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಒಂಭತ್ತು ಜಿಲ್ಲೆಗಳಲ್ಲಿ ಏಪ್ರಿಲ್‌10ರಿಂದ 10 ದಿನ ‘ನೈಟ್ ಕರ್ಪ್ಯೂ’ ಜಾರಿಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕು ಆರ್ಭಟಿಸುತ್ತಿರುವ ಎಂಟು ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆ ವರೆಗೆ ನೈಟ್ ಕರ್ಪ್ಯೂ … Continued

ಮುಷ್ಕರಕ್ಕೆ ಬೆಂಬಲಿಸಿ ಕೆಲಸಕ್ಕೆ ಗೈರು; ತರಬೇತಿ ನಿರತ 96 ನೌಕರರಿಗೆ ಬಿಎಂಟಿಸಿ ಗೇಟ್‌ ಪಾಸ್..!

ಬೆಂಗಳೂರು: ಬಿಎಂಟಿಸಿಯು ನೌಕರರಿಗೆ ಬಿಗ್‌ ಶಾಕ್‌ ನೀಡಿದ್ದು, ತರಬೇತಿ ನಿರತ 96 ಸಾರಿಗೆ ನೌಕರರನ್ನ ವಜಾ ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ. ಈ ಕುರಿತು ಮಾಹಿತಿ ನೀಡಿರುವ ಬಿಎಂಟಿಸಿ, ‘ಸಾರಿಗೆ ನೌಕರರ ಮುಷ್ಕರ ಬೆಂಬಲಿಸಿ ಕೆಲಸಕ್ಕೆ ಗೈರಾಗಿದ್ದ ತರಬೇತಿ ನೌಕರರನ್ನ ಮಾತ್ರ ವಜಾ ಮಾಡಲಾಗಿದೆ. ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿ ನೋಟಿಸ್ ನೀಡಿತ್ತು. ಆದರೆ ನೋಟಿಸ್ … Continued

ಕರ್ನಾಟಕದಲ್ಲಿ ಗುರುವಾರ 6570 ಜನರಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಗುರುವಾರ 6570 ಜನರಿಗೆ ಕೊರೋನಾ ಸೋಂಕು ದಾಖಲಾಗಿದೆ.. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು 36 ಸೋಂಕಿತರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 12,767 ಕ್ಕೆ ಏರಿಕೆಯಾಗಿದೆ. ಇಂದು 2393 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,73,949 ಜನ ಬಿಡುಗಡೆ ಆಗಿದ್ದಾರೆ. 53 395 ಸಕ್ರಿಯ ಪ್ರಕರಣಗಳಿದ್ದು, 357 ಜನ … Continued