ಭಾರತದಲ್ಲಿ ಒಂದೇ ದಿನ 1.15 ಲಕ್ಷಕ್ಕೂ ಹೆಚ್ಚು ಪ್ರಕರಣ ದಾಖಲು..! ವೇಗದಲ್ಲಿ ಹರಡುತ್ತಿರುವ ಕೊರೊನಾ ಎರಡನೇ ಅಲೆ..!!

ನವ ದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,15,736 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೊರೊನಾ ಪ್ರಕರಣ ದೇಶದಲ್ಲಿ ಕಂಡುಬಂದ ದಿನದಿಂದ ಈವರೆಗಿನ ಅತಿ ಹೆಚ್ಚು ಏಕದಿನದ ಸೋಂಕು ಇದಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,28,01,785ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 630 ಜನರು ಕೊರೊನಾ ಸೋಂಕಿಗೆ … Continued

ರಮೇಶ ಜಾರಕಿಹೊಳಿ ಆಸ್ಪತ್ರೆಯಿಂದ ಬಿಡುಗಡೆ, ಮನೆಯಲ್ಲಿಯೇ ಕ್ವಾರಂಟೈನ್‌

ಬೆಳಗಾವಿ : ಸಿಡಿ ಪ್ರಕರಣದಿಂದ ಸುದ್ದಿಯಾಗಿರುವ ಮಾಜಿ ಸಚಿವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬುಧವಾರ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮಾಜಿ ರಮೇಶ್ ಜಾರಕಿಹೊಳಿ ಏಪ್ರಿಲ್ 4ರಂದು ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಬೆಳಗಾವಿಯ ಗೋಕಾಕ್ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಏಪ್ರಿಲ್ 1ರಂದು ಕೊರೋನಾ ಸೋಂಕು ದೃಢಪಟ್ಟಿತ್ತು … Continued

ಭಾರತದಲ್ಲಿ ಮೊದಲ ಬಾರಿಗೆ ಒಂದೇ ದಿನದಲ್ಲಿ 1.07 ಲಕ್ಷ ಹೊಸ ಕೊರೊನಾ ಪ್ರಕರಣ…!!!

ನವ ದೆಹಲಿ: ಮಂಗಳವಾರ ಭಾರತವು ಅತಿಹೆಚ್ಚು ದೈನಂದಿನ ಕೊರೊನಾ ಸೋಂಕು ದಾಖಲಿಸಿದೆ. ಎಲ್ಲ ರಾಜ್ಯಗಳ ಅಂಕಿ-ಅಂಶಗಳನ್ನು ಗಮನಿಸಿ ಭಾರತವು ಮಂಗಳವಾರ 1.07 ಲಕ್ಷ ದೈನಂದಿನ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಮಂಗಳವಾರ ಮುಂದಿನ ನಾಲ್ಕು ವಾರಗಳು “ಬಹಳ ನಿರ್ಣಾಯಕ” ಎಂದು ಕೇಂದ್ರವು ಎಚ್ಚರಿಸಿದೆ ಹಾಗೂ ಕೊವಿಡ್‌ ಸಾಂಕ್ರಾಮಿಕ ರೋಗದ ಎರಡನೇ ತರಂಗ ನಿಯಂತ್ರಿಸಲು ಜನರ ಪಾಲ್ಗೊಳ್ಳುವಿಕೆ ಕೋರಿದೆ. … Continued

ಸಂಸದ ಅನಂತಕುಮಾರ ಹೆಗಡೆಗೆ ಮತ್ತೊಂದು ಜೀವ ಬೆದರಿಕೆ ಕರೆ

ಶಿರಸಿ: ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರ ಕನ್ನಡ ಸಂಸದ, ಬಿಜೆಪಿ ಫೈರ್‌ ಬ್ರ್ಯಾಂಡ್‌  ಅನಂತಕುಮಾರ ಹೆಗಡೆ ಅವರಿಗೆ ಜೀವ ಬೆದರಿಕೆ ಹಾಕಿದವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ಹೊರ ಮಾರುಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಿರಸಿಯ ಕೆಎಚ್‌ಬಿ ಕಾಲೊನಿಯಲ್ಲಿರುವ ಸಂಸದರ ನಿವಾಸದ ಸ್ಥಿರ ದೂರವಾಣಿಗೆ ೯೪೬೪೫೫೪೦೩೯೯ ಈ ಸಂಖ್ಯೆಯಿಂದ ಎಪ್ರಿಲ್‌ ೫ರಂದು ಬೆಳಗ್ಗೆ … Continued

ಕಾರವಾರ ಮೆಡಿಕಲ್‌ ಕಾಲೇಜಿನಲ್ಲಿ 27 ವಿದ್ಯಾರ್ಥಿಗಳಿಗೆ ಕೊರೊನಾ, ಇದರಲ್ಲಿ ಲಸಿಕೆ ಪಡೆದವರು 24..!

ಕಾರವಾರ:ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ 27  ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟ ವರದಿಯಾಗಿದೆ. ಲಸಿಕೆ ಪಡೆದುಕೊಂಡ 24 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಅತೀ ಹೆಚ್ವು ವಿದ್ಯಾರ್ಥಿಗಳಿಗೆ ಕೊರೊನಾ ಹಿನ್ನೆಲೆಯಲ್ಲಿ ಮೆಡಿಕಲ್ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದ್ದು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಹೊರತುಪಡಿಸಿ 450 ಪ್ರಥಮ ,ದ್ವಿತೀಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ … Continued

ಕೇಂದ್ರ ಸಚಿವ ಜೋಶಿ ಮನೆ ಎದುರು ಮಹಿಳೆ ಆತ್ಮಹತ್ಯೆಗೆ ಯತ್ನ..

ಹುಬ್ಬಳ್ಳಿ:ಬಿದ್ದ ಮನೆಯ ಪರಿಹಾರಕ್ಕಾಗಿ ಅಲೆದು ಅಲೆದು ಸುಸ್ತಾದ ಮಹಿಳೆಯೊಬ್ಬರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆ ಎದುರು ಡೆತ್ ನೋಟ್ ಬರೆದಿಟ್ಟು  ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.‌ ಧಾರವಾಡ ತಾಲೂಕಿನ ಗರಗ ಗ್ರಾಮದ ಶ್ರೀದೇವಿ ವೀರಪ್ಪ ಕಮ್ಮಾರ ಎಂಬ ಮಹಿಳೆಯೇ ಆತ್ಮಹತ್ಯೆಗೆ ಯತ್ನಿಸಿದವರು. ಕಳೆದ ಮಳೆಗಾಲದ ಸಮಯದಲ್ಲಿ ಅತಿವೃಷ್ಟಿಯಿಂದ ಮನೆ ಬಿದಿದ್ದು, ಅದರ ಪರಿಹಾರಕ್ಕಾಗಿ ಕಳೆದ … Continued

ಕರ್ನಾಟಕದಲ್ಲಿ ಆರು ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣ..!

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರವೂ ಕೊರೊನಾ ದೈನಂದಿನ ಸೋಂಕಿನಲ್ಲಿ ಭಾರೀ ಹೆಚ್ಚಳವಾಗಿದೆ. ಮಂಗಳವಾರ ಒಂದೇ ದಿನ 6150 ಜನರಿಗೆ ಸೋಂಕು ತಗುಲಿದ ಬಗ್ಗೆ ವರದಿಯಾಗಿದೆ. ಒಂದೇ ದಿನ ಇವತ್ತು ಒಂದೇ ದಿನ 39 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,26,584 ಕ್ಕೆ ಏರಿಕೆಯಾಗಿದೆ. ಒಂದೇ ದಿನ 3487 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,68,762 … Continued

ನಾಳೆ ಸಾರಿಗೆ ನೌಕರರ ಮುಷ್ಕರ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ತಮ್ಮ ಬೇಡಿಕೆಗಳು ಈಡೇರದ ಕಾರಣಕ್ಕೆ ಏ.೭ರಂದು ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ ಬಸ್‌ ಸಂಚಾರಬಹುತೇಕ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಸರ್ಕಾರವು ಮುಷ್ಕರವನ್ನು ಹಿಂಪಡೆಯುವಂತೆ ಸಾರಿಗೆ ನೌಕರರಲ್ಲಿ ಮಾತುಕತೆ ನಡೆಸಿದರೂ ವಿಫಲವಾಗಿದ್ದು, ಹೀಗಾಗಿ ಸರ್ಕಾರವು ಮುಷ್ಕರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಜೊತೆಗೆ ಸದ್ಯದ ಸ್ಥಿತಿಯಲ್ಲಿ ಸಾರಿಗೆ ನೌಕರರಿಗೆ 6ನೇ ವೇತನ … Continued

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ; ಬಸ್‌ ಬಂದಾದರೆ ಸರ್ಕಾರ ಹೇಗೆ ನಿಭಾಯಿಸುತ್ತದೆ..?

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಾರಿಗೆ ನೌಕರರು ಏ.7ರಿಂದ ರಾಜ್ಯಾದ್ಯಂತ ಮುಷ್ಕರ ನಡೆಸಲು ಮುಂದಾಗಿದ್ದು, ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಬಸ್‌ಗಳು ರಾಜ್ಯಾದ್ಯಂತ ಸ್ಥಗಿತಗೊಂಡರೆ ಸರ್ಕಾರ ಇದನ್ನು ಹೇಗೆ ನಿಭಾಯಿಸಲಿದೆ ಎಂಬುದು ಸಹ ಮುಖ್ಯವಾಗುತ್ತದೆ. ಸರ್ಕಾರ ಖಾಸಗಿ ಬಸ್‌ ಆಪರೇಟರಿಗಳಿಗೆ ಮನವಿ ಮಾಡಿದೆ. ಇದೇವೇಳೆ ಸಾರಿಗೆ ಸಂಸ್ಥೆಗಳ ನೌಕರರ ಒಕ್ಕೂಟದ ಪ್ರಮುಖರು … Continued

ಯುದ್ಧ ವಿಮಾನ ರಫೇಲ್ ಡೀಲ್ ನಲ್ಲೂ ಮಧ್ಯವರ್ತಿಗೆ ಕಿಕ್ ಬ್ಯಾಕ್ ಆರೋಪ

ನವ ದೆಹಲಿ: ಭಾರತ-ಫ್ರಾನ್ಸ್ ನಡುವಿನ ರಫೇಲ್ ಯುದ್ಧ ವಿಮಾನ ಒಪ್ಪಂದದ ಕುರಿತು ಮತ್ತೆ ವಿವಾದ ಭುಗಿಲೆದ್ದಿದೆ. ರಫೇಲ್ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸಾಲ್ಟ್ ಏವಿಯೇಷನ್ ಭಾರತೀಯ ಮಧ್ಯವರ್ತಿಗೆ ಒಂದು ಮಿಲಿಯನ್ ಯುರೋ ಲಂಚ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು ಇದು ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಫ್ರಾನ್ಸ್ ಮೂಲದ ‘ಮಿಡಿಯಾ ಪಾರ್ಟ್’ ಎಂಬ … Continued