ಕರ್ನಾಟಕದ ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ್, ಗದಗದಲ್ಲಿ ಜಿಯೋ 5ಜಿ ಸೇವೆಗೆ ಚಾಲನೆ

posted in: ರಾಜ್ಯ | 0

ಬೆಂಗಳೂರು: ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ, ಗದಗ-ಬೆಟಗೇರಿ (ಕರ್ನಾಟಕ), ಕಾಕಿನಾಡ, ಕರ್ನೂಲ್ (ಆಂಧ್ರಪ್ರದೇಶ), ಸಿಲ್ಚಾರ್ (ಅಸ್ಸಾಂ), ಮಲಪ್ಪುರಂ ಸೇರಿದಂತೆ 16 ನಗರಗಳಲ್ಲಿ ರಿಲಯನ್ಸ್ ಜಿಯೋ ಮಂಗಳವಾರ (ಜನವರಿ 17ರ ತನ್ನ ಟ್ರೂ 5G ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಇದರಲ್ಲಿ ಪಾಲಕ್ಕಾಡ್, ಕೊಟ್ಟಾಯಂ, ಕಣ್ಣೂರು (ಕೇರಳ), ತಿರುಪ್ಪೂರ್ (ತಮಿಳುನಾಡು), ನಿಜಾಮಾಬಾದ್, ಖಮ್ಮಂ (ತೆಲಂಗಾಣ), ಮತ್ತು ಬರೇಲಿ (ಉತ್ತರ … Continued

ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಕುಸಿದು ಬಿದ್ದಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

posted in: ರಾಜ್ಯ | 0

ಬೆಂಗಳೂರು: ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು, ಶುಕ್ರವಾರ ಖಾಸಗಿ ರೆಸಾರ್ಟ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ನೇತೃತ್ವದಲ್ಲಿ ನಡೆದ ಟಿಕೆಟ್​ ಆಕಾಂಕ್ಷಿಗಳ ಸಭೆಯಲ್ಲಿ ಶ್ರೀಶೈಲಪ್ಪ ಅವರು ಭಾಗಿಯಾಗಿದ್ದರು. ಸಭೆಯ ನಡುವೆಯೇ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. … Continued

ರಾಜ್ಯ ಸಾರಿಗೆ ಸಂಸ್ಥೆ ಟಿಕೆಟ್‌ನಲ್ಲಿ ಜೈ ಮಹಾರಾಷ್ಟ್ರ ಎಂದು ಮೊಹರು..! ಏನಿದರ ಹಕೀಕತ್‌..?

posted in: ರಾಜ್ಯ | 0

ಗದಗ: ಜಿಲ್ಲೆಯಲ್ಲಿ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಜನರು ಟಿಕೆಟ್​ ನೋಡಿ ಶಾಕ್​ ಆಗಿದ್ದಾರೆ. ಡಂಬಳ ಮಾರ್ಗವಾಗಿ ಸಂಚರಿಸುವ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಬಲ್ಲಿ ಪ್ರಯಾಣಿಕರಿಗೆ ಜೈ ಮಹಾರಾಷ್ಟ್ರ ಎಂಬ ಮೊಹರಿನ ಟಿಕೆಟ್ ಹಂಚಲಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್‌ನ ರೋಲ್‌ನಲ್ಲಿ ಮಹಾರಾಷ್ಟ್ರ ರಾಜ್ಯ ಮೊಹರು … Continued

ಪ್ರವಾದಿ ಕುರಿತು ಪ್ರಬಂಧ ಸ್ಪರ್ಧೆ ಆಯೋಜನೆ: ಮುಖ್ಯಾಧ್ಯಾಪಕ ಅಮಾನತು

posted in: ರಾಜ್ಯ | 0

ಗದಗ: ಶಾಲಾ ವಿದ್ಯಾರ್ಥಿಗಳಿಗೆ ಪ್ರವಾದಿ ಮೊಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿದ ಆರೋಪದ ಮೇಲೆ ಗದಗ ಜಿಲ್ಲೆಯ ಶಾಲಾ ಮುಖ್ಯಾಧ್ಯಾಪಕರನ್ನು ಶಿಕ್ಷಣ ಇಲಾಖೆ ಗುರುವಾರ ಅಮಾನತುಗೊಳಿಸಿದೆ. ಅಮಾನತುಗೊಂಡ ಮುಖ್ಯಾಧ್ಯಾಪಕರು ಗದಗ ತಾಲೂಕಿನ ನಾಗಾವಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಅಬ್ದುಲ್ ಮುನಾಫ್ ಬಿಜಾಪುರ ಎಂದು ವರದಿಯಾಗಿದೆ. ಇಲಾಖೆ ಅಥವಾ ಯಾವುದೇ ಸರ್ಕಾರಿ ಸಂಸ್ಥೆಗಳ ನಿರ್ದೇಶನವಿಲ್ಲದೆ ಪ್ರಬಂಧ ಸ್ಪರ್ಧೆ … Continued

ಮಾತು ಬಾರದ, ಕಿವಿ ಕೇಳದ ಯುವಕನ ವರಿಸಿದ ಪದವೀಧರ ಯುವತಿ

posted in: ರಾಜ್ಯ | 0

ನರಗುಂದ (ಗದಗ): ಕಂಕಣ ಬಲ ಕೂಡಿಬಂದರೆ ಯಾರೂ ತಡೆಯಲು ಸಾಧ್ಯವಿಲ್ಲ ಎಂಬಂತೆ ಪಟ್ಟಣದಲ್ಲಿ ಸೋಮವಾರ ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ಪದವೀಧರ ಯುವತಿಯೊಬ್ಬರು ವರಿಸಿದ್ದಾರೆ. ನರಗುಂದ ಪಟ್ಟಣದ ದಂಡಾಪುರ ಬಡಾವಣೆಯ ಲಾಲಮಹಮ್ಮದ್, ಆರೀಫಾಭಾನು ದಂಪತಿ ಪುತ್ರ ಮಹಮ್ಮದ್ ಸಾಧಿಕ್ ಹಾಗೂ ಗದುಗಿನ ಗಂಗಿಮಡಿ ಬಡಾವಣೆಯ ಮಲೀಕಸಾಬ್-ಮಮತಾಜ್‌ಬೇಗಂ ಪಲ್ಲೇದ ದಂಪತಿ ಪುತ್ರಿ ಸುಮಯ್ಯಾ ಸುಮಯ್ಯಾ ಭಾನುವಾರ … Continued

ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ದಿಂಗಾಲೇಶ್ವರ ಶ್ರೀಗಳಿಗೆ ಪಟ್ಟ

posted in: ರಾಜ್ಯ | 0

ಗದಗ: ಉತ್ತರ ಕರ್ನಾಟಕದ ಪ್ರಸಿದ್ಧ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮಠ ಗದಗ ಜಿಲ್ಲೆಯ ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ದಿಂಗಾಲೇಶ್ವರ ಶ್ರೀಗಳು ನೇಮಕವಾಗಿದ್ದು, ಇಂದು, ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಉತ್ತರಾಧಿಕಾರಿ ನೇಮಕ ಕಾರ್ಯಕ್ರಮ ನಡೆದಿದೆ. ಶ್ರೀಮಠಕ್ಕೆ ಇಂದು ನೂತನ ಉತ್ತರಾಧಿಕಾರಿಯನ್ನಾಗಿ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸರು ಮಠದ ಶ್ರೀಗಳಾದ ದಿಂಗಾಲೇಶ್ವರ ಸ್ವಾಮೀಜಿಗಳನ್ನು … Continued

ಸಕಲ ಸರ್ಕಾರಿ ಗೌರವಗಳೊಂದಿಗೆ ಗೊಜನೂರ ಯೋಧನ ಅಂತ್ಯಕ್ರಿಯೆ

posted in: ರಾಜ್ಯ | 0

ಗದಗ: ಛತ್ತೀಸಗಡದ ಬಿಎಸ್‌ಎಫ್ ಕ್ಯಾಂಪ್‌ನಲ್ಲಿ ನಕ್ಸಲರ ಗುಂಡಿಗೆ ಮಂಗಳವಾರ ವೀರಮರಣವನ್ನಪ್ಪಿದ್ದ ಯೋಧನ ಪಾರ್ಥಿವ ಶರೀರ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಗ್ರಾಮಕ್ಕೆ ಬುಧವಾರ ತಡರಾತ್ರಿ ಆಗಮಿಸಿತು. ವೀರಯೋಧ ಲಕ್ಷ್ಮಣ ನಿಂಗಪ್ಪ ಗೌರಣ್ಣವರ ಅವರ ಅಂತ್ಯಕ್ಸರಿಯೆಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.       ಯೋಧ ಲಕ್ಷ್ಮಣ ಗೌರಣ್ಣವರ ಕಳೆದ ೧೨ ವರ್ಷಗಳಿಂದ ಬಿ.ಎಸ್.ಎಫ್. ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಂದೆ … Continued

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಸೈಕಲ್ ಜಾಥಾ

posted in: ರಾಜ್ಯ | 0

ಗದಗ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು, ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ನಗರದಲ್ಲಿ ಸೈಕಲ್ ಜಾಥಾ ನಡೆಸಿದರು. ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಗದಗ ಜಿಲ್ಲಾ ಕಾಂಗ್ರೆಸ್, … Continued

ಕೃಷಿ ಚಟುವಟಿಕೆಗೆ ಕೊರೊನಾ ಮಾರ್ಗಸೂಚಿ ಅಡ್ಡಿಯಾಗುವುದು ಬೇಡ

posted in: ರಾಜ್ಯ | 0

ಗದಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಶೇಕಡಾವಾರು ಪ್ರಮಾಣ ಇಳಿಮುಖವಾಗುತ್ತಿದೆ. ಮುಂಗಾರು ಹಂಗಾಮು ಆರಂಭವಾಗಿದ್ದು ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಕೊರೊನಾ ಮಾರ್ಗಸೂಚಿಗಳು ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಸೂಚಿಸಿದರು. ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ … Continued