ರಾಜ್ಯ ಸಾರಿಗೆ ಸಂಸ್ಥೆ ಟಿಕೆಟ್‌ನಲ್ಲಿ ಜೈ ಮಹಾರಾಷ್ಟ್ರ ಎಂದು ಮೊಹರು..! ಏನಿದರ ಹಕೀಕತ್‌..?

ಗದಗ: ಜಿಲ್ಲೆಯಲ್ಲಿ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಜನರು ಟಿಕೆಟ್​ ನೋಡಿ ಶಾಕ್​ ಆಗಿದ್ದಾರೆ. ಡಂಬಳ ಮಾರ್ಗವಾಗಿ ಸಂಚರಿಸುವ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಬಲ್ಲಿ ಪ್ರಯಾಣಿಕರಿಗೆ ಜೈ ಮಹಾರಾಷ್ಟ್ರ ಎಂಬ ಮೊಹರಿನ ಟಿಕೆಟ್ ಹಂಚಲಾಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್‌ನ ರೋಲ್‌ನಲ್ಲಿ ಮಹಾರಾಷ್ಟ್ರ ರಾಜ್ಯ ಮೊಹರು … Continued

ಪ್ರವಾದಿ ಕುರಿತು ಪ್ರಬಂಧ ಸ್ಪರ್ಧೆ ಆಯೋಜನೆ: ಮುಖ್ಯಾಧ್ಯಾಪಕ ಅಮಾನತು

ಗದಗ: ಶಾಲಾ ವಿದ್ಯಾರ್ಥಿಗಳಿಗೆ ಪ್ರವಾದಿ ಮೊಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿದ ಆರೋಪದ ಮೇಲೆ ಗದಗ ಜಿಲ್ಲೆಯ ಶಾಲಾ ಮುಖ್ಯಾಧ್ಯಾಪಕರನ್ನು ಶಿಕ್ಷಣ ಇಲಾಖೆ ಗುರುವಾರ ಅಮಾನತುಗೊಳಿಸಿದೆ. ಅಮಾನತುಗೊಂಡ ಮುಖ್ಯಾಧ್ಯಾಪಕರು ಗದಗ ತಾಲೂಕಿನ ನಾಗಾವಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಅಬ್ದುಲ್ ಮುನಾಫ್ ಬಿಜಾಪುರ ಎಂದು ವರದಿಯಾಗಿದೆ. ಇಲಾಖೆ ಅಥವಾ ಯಾವುದೇ ಸರ್ಕಾರಿ ಸಂಸ್ಥೆಗಳ ನಿರ್ದೇಶನವಿಲ್ಲದೆ ಪ್ರಬಂಧ ಸ್ಪರ್ಧೆ … Continued

ಮಾತು ಬಾರದ, ಕಿವಿ ಕೇಳದ ಯುವಕನ ವರಿಸಿದ ಪದವೀಧರ ಯುವತಿ

ನರಗುಂದ (ಗದಗ): ಕಂಕಣ ಬಲ ಕೂಡಿಬಂದರೆ ಯಾರೂ ತಡೆಯಲು ಸಾಧ್ಯವಿಲ್ಲ ಎಂಬಂತೆ ಪಟ್ಟಣದಲ್ಲಿ ಸೋಮವಾರ ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ಪದವೀಧರ ಯುವತಿಯೊಬ್ಬರು ವರಿಸಿದ್ದಾರೆ. ನರಗುಂದ ಪಟ್ಟಣದ ದಂಡಾಪುರ ಬಡಾವಣೆಯ ಲಾಲಮಹಮ್ಮದ್, ಆರೀಫಾಭಾನು ದಂಪತಿ ಪುತ್ರ ಮಹಮ್ಮದ್ ಸಾಧಿಕ್ ಹಾಗೂ ಗದುಗಿನ ಗಂಗಿಮಡಿ ಬಡಾವಣೆಯ ಮಲೀಕಸಾಬ್-ಮಮತಾಜ್‌ಬೇಗಂ ಪಲ್ಲೇದ ದಂಪತಿ ಪುತ್ರಿ ಸುಮಯ್ಯಾ ಸುಮಯ್ಯಾ ಭಾನುವಾರ … Continued

ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ದಿಂಗಾಲೇಶ್ವರ ಶ್ರೀಗಳಿಗೆ ಪಟ್ಟ

ಗದಗ: ಉತ್ತರ ಕರ್ನಾಟಕದ ಪ್ರಸಿದ್ಧ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮಠ ಗದಗ ಜಿಲ್ಲೆಯ ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿಯಾಗಿ ದಿಂಗಾಲೇಶ್ವರ ಶ್ರೀಗಳು ನೇಮಕವಾಗಿದ್ದು, ಇಂದು, ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಉತ್ತರಾಧಿಕಾರಿ ನೇಮಕ ಕಾರ್ಯಕ್ರಮ ನಡೆದಿದೆ. ಶ್ರೀಮಠಕ್ಕೆ ಇಂದು ನೂತನ ಉತ್ತರಾಧಿಕಾರಿಯನ್ನಾಗಿ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸರು ಮಠದ ಶ್ರೀಗಳಾದ ದಿಂಗಾಲೇಶ್ವರ ಸ್ವಾಮೀಜಿಗಳನ್ನು … Continued

ಸಕಲ ಸರ್ಕಾರಿ ಗೌರವಗಳೊಂದಿಗೆ ಗೊಜನೂರ ಯೋಧನ ಅಂತ್ಯಕ್ರಿಯೆ

posted in: ರಾಜ್ಯ | 0

ಗದಗ: ಛತ್ತೀಸಗಡದ ಬಿಎಸ್‌ಎಫ್ ಕ್ಯಾಂಪ್‌ನಲ್ಲಿ ನಕ್ಸಲರ ಗುಂಡಿಗೆ ಮಂಗಳವಾರ ವೀರಮರಣವನ್ನಪ್ಪಿದ್ದ ಯೋಧನ ಪಾರ್ಥಿವ ಶರೀರ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೊಜನೂರ ಗ್ರಾಮಕ್ಕೆ ಬುಧವಾರ ತಡರಾತ್ರಿ ಆಗಮಿಸಿತು. ವೀರಯೋಧ ಲಕ್ಷ್ಮಣ ನಿಂಗಪ್ಪ ಗೌರಣ್ಣವರ ಅವರ ಅಂತ್ಯಕ್ಸರಿಯೆಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.       ಯೋಧ ಲಕ್ಷ್ಮಣ ಗೌರಣ್ಣವರ ಕಳೆದ ೧೨ ವರ್ಷಗಳಿಂದ ಬಿ.ಎಸ್.ಎಫ್. ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಂದೆ … Continued

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಸೈಕಲ್ ಜಾಥಾ

posted in: ರಾಜ್ಯ | 0

ಗದಗ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು, ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಕಾರ್ಯಕರ್ತರು ನಗರದಲ್ಲಿ ಸೈಕಲ್ ಜಾಥಾ ನಡೆಸಿದರು. ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಗದಗ ಜಿಲ್ಲಾ ಕಾಂಗ್ರೆಸ್, … Continued

ಕೃಷಿ ಚಟುವಟಿಕೆಗೆ ಕೊರೊನಾ ಮಾರ್ಗಸೂಚಿ ಅಡ್ಡಿಯಾಗುವುದು ಬೇಡ

ಗದಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಶೇಕಡಾವಾರು ಪ್ರಮಾಣ ಇಳಿಮುಖವಾಗುತ್ತಿದೆ. ಮುಂಗಾರು ಹಂಗಾಮು ಆರಂಭವಾಗಿದ್ದು ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಕೊರೊನಾ ಮಾರ್ಗಸೂಚಿಗಳು ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಸೂಚಿಸಿದರು. ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ … Continued