ಉತ್ತರಾಖಂಡ ಚುನಾವಣೆಗೂ ಮುನ್ನ ಜನರಲ್ ಬಿಪಿನ್ ರಾವತ್ ಸಹೋದರ ಬಿಜೆಪಿ ಸೇರ್ಪಡೆ

ನವದೆಹಲಿ: ಕಳೆದ ತಿಂಗಳು ನಿಧನರಾದ ಭಾರತದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಸಹೋದರ ಕರ್ನಲ್ ವಿಜಯ್ ರಾವತ್ ಅವರು ಇಂದು, ಬುಧವಾರ ಉತ್ತರಾಖಂಡದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. “ನನ್ನ ತಂದೆ (ಜನರಲ್ ಲಕ್ಷ್ಮಣ್ ಸಿಂಗ್ ರಾವತ್) ಸೇನೆಯಿಂದ ನಿವೃತ್ತಿಯಾದ ನಂತರ ಬಿಜೆಪಿಯಲ್ಲಿದ್ದರು. … Continued