ತನ್ನ ಸಹ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವೀಡಿಯೊ ‘ಸೋರಿಕೆ’ ಮಾಡಿದ ಆರೋಪ: ವಿವಿ ಕ್ಯಾಂಪಸ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ, ವಿದ್ಯಾರ್ಥಿನಿ ಬಂಧನ

ಚಂಡೀಗಡ: ಪಂಜಾಬ್‌  ರಾಜ್ಯದ ಖಾಸಗಿ ವಿಶ್ವವಿದ್ಯಾನಿಲಯದ ಇತರ ವಿದ್ಯಾರ್ಥಿಗಳ ಆಕ್ಷೇಪಾರ್ಹ ವೀಡಿಯೊಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಮೊಹಾಲಿಯ ಮಹಿಳಾ ವಿದ್ಯಾರ್ಥಿನಿಯನ್ನು ಚಂಡೀಗಡ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಘಟನೆಯ ವಿರುದ್ಧ ಶನಿವಾರ ತಡರಾತ್ರಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ತೆರಳಿ ಪ್ರತಿಭಟನೆ ನಡೆಸಿದರು. ವರದಿಯ ಪ್ರಕಾರ, ಒಬ್ಬ ವಿದ್ಯಾರ್ಥಿನಿ ಕುಸಿದುಬಿದ್ದ ನಂತರ ಆಸ್ಪತ್ರೆಗೆ ಸಾಗಿಸಲಾಯಿತು. … Continued