ಗೋಕಾಕ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಬೆಳಗಾವಿ: ಜಿಲ್ಲೆಯ ಗೋಕಾಕ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ ರೇಣುಕಾ ಗಣಾಚಾರಿ ಹೆರಿಗೆ ವೇಳೆ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡದ ಯಶಸ್ವಿ ಪ್ರಯತ್ನದಿಂದ ಹೆರಿಗೆ ಸುಗಮವಾಗಿ ನಡೆದಿದ್ದು, ತಾಯಿ ಹಾಗೂ ಮೂವರು ನವಜಾತ ಶಿಶುಗಳು ಆರೋಗ್ಯವಾಗಿದ್ದಾರೆ. ಡಾ. ಶ್ವೇತಾ ನಾಯಿಕ ನೇತೃತ್ವದಲ್ಲಿ … Continued

ಬೆಳಗಾವಿ : ಒಂದೇ ದಿನ ಸಹೋದರರಿಬ್ಬರು ಹೃದಯಾಘಾತದಿಂದ ಸಾವು

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಸಹೋದರರಿಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗೋಕಾಕ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ ನಸುಕಿನ ಜಾವ 4 ಗಂಟೆಗೆ ಹೃದಯಾಘಾತವಾಗಿದೆ. ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ … Continued

ಮಹಾರಾಷ್ಟ್ರದಲ್ಲಿ ಮಳೆ | ಉಕ್ಕಿ ಹರಿದ ಘಟಪ್ರಭಾ ; ಗೋಕಾಕದಲ್ಲಿ ಪ್ರವಾಹ : ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು, ಗೋಕಾಕ ಪಟ್ಟಣದಲ್ಲಿ ಪ್ರವಾಹ ಉಂಟಾಗಿದೆ, ನೂರಕ್ಕೂ ಹೆಚ್ಚು ಕುಟುಂಬಗಳು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿವೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸಪ್ತನದಿಗಳು ತುಂಬಿ ಹರಿಯುತ್ತಿವೆ. ಕೃಷ್ಣೆ ತುಂಬಿ ಹರಿಯುತ್ತಿದೆ. ಘಟಪ್ರಭೆ ಕೂಡ ಅಬ್ಬರಿಸುತ್ತಿದ್ದು, ೬೦ ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಘಟಪ್ರಭಾ ನದಿಗೆ … Continued

ಗೋಕಾಕ | ಮಳೆಗೆ ಮನೆ ಕುಸಿದುಬಿದ್ದು ಮಹಿಳೆ ಸಾವು, ಇಬ್ಬರಿಗೆ ಗಾಯ

ಬೆಳಗಾವಿ : ಭಾರಿ ಮಳೆಯಿಂದಾಗಿ ಮನೆ ಕುಸಿದು ಬಿದ್ದು ಮಹಿಳೆಯೊಬ್ಬರು ಸಮೃತೊಟ್ಟ ಘಟನೆ ಜಿಲ್ಲೆಯ ಗೋಕಾಕದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಗೋಕಾಕದ ಸಂಗಮ ನಗರದ ಫರೀದಾಬಾನು ಶಕೀಲ್ ಅಹ್ಮದ್ ಕನವಾಡ (50) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅವರ ಪುತ್ರ  ಮತ್ತು ಪುತ್ರಿ  ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. … Continued

ಗೋಕಾಕ | ಗೋಡೆ ಕುಸಿದು ಮಗು ಸಾವು ; ಇನ್ನೊಂದು ಮಗುವಿಗೆ ಗಾಯ

ಬೆಳಗಾವಿ: ಜಿಲ್ಲೆಯ ಗೋಕಾಕದ ಮಹಾಲಿಂಗೇಶ್ವರ ಕಾಲೊನಿಯಲ್ಲಿ ಸೋಮವಾರ ನಸುಕಿನಲ್ಲಿ ಮನೆ ಗೋಡೆ ಕುಸಿದು ಮಗುವೊಂದು ಸ್ಥಳದಲ್ಲೇ ಮೃತಪಟ್ಟಿದೆ ಹಾಗೂ ಮತ್ತೊಂದು ಮಗುವಿಗೆ ಗಾಯವಾಗಿದೆ. ಮೃತಪಟ್ಟ ಮಗುವನ್ನು ಕೃತಿಕಾ ನಾಗೇಶ ಪೂಜಾರಿ (3.9 ವರ್ಷ) ಎಂದು ಗುರುತಿಸಲಾಗಿದೆ. ಈ ಮಗುವಿನ ಪಕ್ಕದಲ್ಲೇ ಮಲಗಿದ್ದ, ಈಕೆಯ ಐದು ವರ್ಷದ ಅಕ್ಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ … Continued

ಕುಂಭಮೇಳಕ್ಕೆ​ ತೆರಳುತ್ತಿದ್ದ ​ ವಾಹನ ಅಪಘಾತ: ಗೋಕಾಕದ 6 ಮಂದಿ ಸಾವು

ಬೆಳಗಾವಿ :ಪ್ರಯಾಗರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ(Gokak)ದ ಆರು ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಜಬಲಪುರ ಪೆಹರಾ‌ ಟೋಲ್ ನಾಕಾ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಗೋಕಾಕ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ … Continued

ಒಮನ್ ನಲ್ಲಿ‌ ಕಾರು ಅಪಘಾತ: ಗೋಕಾಕ ಮೂಲದ ನಾಲ್ವರು ಸಾವು

ಬೆಳಗಾವಿ: ಒಮನ್‌ನಲ್ಲಿ ಸಂಭವಿಸಿದ ಕಾರು ಹಾಗೂ ಲಾರಿ ಮಧ್ಯೆ ನಡೆದ ಭೀಕರ ವಾಹನ ಅಪಘಾತದಲ್ಲಿ ಗೋಕಾಕ ಮೂಲದ ನಾಲ್ವರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಒಮಾನಿನ ಸಲಾಲಾ ನಗರದಿಂದ ಮುಸ್ಕತ್‌ಗೆ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಕಾರ್ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ. ಮೊದಲು ಇವರೆಲ್ಲ ಕೇರಳದವರು ಎಂಬ ತಪ್ಪು ಮಾಹಿತಿ‌ ರವಾನೆಯಾಗಿತ್ತು. ಗೋಕಾಕ … Continued

ಶ್ರೀರಾಮ ಸೇನೆ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಶನಿವಾರ ತಡರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಗೋಕಾಕ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರವಿ ಪೂಜಾರಿ ಅವರ ದೇಹದ ನಾಲ್ಕೈದು ಕಡೆ ಚಾಕುವಿನಿಂದ ಇರಿಯಲಾಗಿದೆ. ಒಟ್ಟು ನಾಲ್ವರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದ್ದು, ರವಿ ಅವರನ್ನು … Continued

ಮನೆಗೆ ನೀರು ನುಗ್ಗಿದ ಸುದ್ದಿ ಕೇಳಿ ವ್ಯಕ್ತಿ ಹೃದಯಘಾತದಿಂದ ಸಾವು

ಬೆಳಗಾವಿ: ಜಿಲ್ಲೆಯ ಗೋಕಾಕ ನಗರದ ಉಪ್ಪಾರಗಲ್ಲಿಯಲ್ಲಿ ದಶರಥ ಬಂಡಿ(80)ಎಂಬವರು ತಮ್ಮ ಮನೆಗೆ ಮಳೆ ನೀರು ನುಗ್ಗಿರುವ ವಿಷಯ ತಿಳಿದು ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಹೊತ್ತು ಮನೆಗೆ ಮಳೆ ನೀರು ಬಂದಿರುವ ವಿಷಯ ತಿಳಿದ ಅವರು ಹೃದಯಘಾತದಿಂದ ಮೃತಪಟ್ಟಿದ್ದಾರೆ. ಘಟಪ್ರಭಾ ನದಿಯಿಂದ ಪ್ರವಾಹ ಬಂದು ಎಲ್ಲರೂ ಮನೆ ಖಾಲಿ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳುತ್ತಿದ್ದಂತೆ ಅವರಿಗೆ ಹೃದಯಾಘಾತವಾಗಿ … Continued

ಬೆಳಗಾವಿ : ರಮೇಶ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ದಾಳಿ

ಬೆಳಗಾವಿ : ಜಿಲ್ಲೆಯ ಗೋಕಾಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಅಪೆಕ್ಸ್ ಬ್ಯಾಂಕ್ ನಲ್ಲಿ ಸಾಲ ಪಡೆದು ಪರುಪಾವತಿ ಮಾಡದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ಇರುವ ಸೌಭಾಗ್ಯಲಕ್ಷ್ಮೀ ಶುಗರ್‌ ಲಿಮಿಟೆಡ್‌ ಕಾರ್ಖಾನೆ … Continued