ಗೋಕಾಕ : ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಹೆಡ್ ಕಾನ್ಸ್ಟೇಬಲ್ ಅಮಾನತು

ಬೆಳಗಾವಿ : ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ. ಬೆಳಗಾವಿಯಲ್ಲಿ ಪೊಲೀಸರೇ ಹೆಲ್ಮೆಟ್ ಹಾಕುವುದಿಲ್ಲ ಎಂದು ಸಾರ್ವಜನಿಕರಿಂದ ಆರೋಪ ಬಂದಿದ್ದವು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಶಂಕರ ಗುಳೇದ ಅವರು, ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿದ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ … Continued

ಗೋಕಾಕ | ಸಿಲಿಂಡರ್ ಸ್ಫೋಟ; 9 ತಿಂಗಳ ಮಗು ಸೇರಿ ಒಂದೇ ಕುಟುಂಬದ 7 ಮಂದಿಗೆ ಗಂಭೀರ ಗಾಯ

ಬೆಳಗಾವಿ : ರಾತ್ರಿ ವೇಳೆ ಸಿಲಿಂಡರ್ ಸ್ಪೋಟಗೊಂಡು 7 ಜನರಿಗೆ ಗಂಭೀರ ಗಾಯಗಳಾದ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆಯ ಹೆಂಚುಗಳು ಹಾರಿ ಹೋಗಿವೆ. ಮನೆಯಲ್ಲಿರುವ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಈ ಘಟನೆಯಲ್ಲಿ 9 ತಿಂಗಳ ಹಸಗೂಸು ಸೇರಿ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯಗಳಾಗಿವೆ. … Continued

ಗೋಕಾಕ; ದಾಖಲೆಯಿಲ್ಲದ 65 ಲಕ್ಷ ರೂ. ವಶ

ಬೆಳಗಾವಿ : ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಚೆಕ್‌ ಪೋಸ್ಟ್‌ಗಳಲ್ಲಿ ಬಿಗಿ ತಪಾಸಣೆ ನಡೆಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪರಾನಟ್ಟಿ ಚೆಕ್ ಪೋಸ್ಟ್ ನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪರಿಶೀಲನೆ ನಡೆಸಿದಾಗ ದಾಖಲೆ ಇಲ್ಲದ 65 ಲಕ್ಷ ರೂ.ಗಳು ಇರುವುದು ಕಂಡು ಬಂದಿದೆ. ಈ ಸಂಬಂಧ ಚುನಾವಣಾ ಅಧಿಕಾರಿಗಳು ಹಣ ಮತ್ತು ಹಣವನ್ನು … Continued

ರಮೇಶ ಜಾರಕಿಹೊಳಿ ವಿರುದ್ಧ ಗೋಕಾಕದಲ್ಲಿ ಪ್ರತಿಭಟನೆ

ಬೆಳಗಾವಿ: ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ರಾಜ್ಯ ರಾಜಕೀಯದಲ್ಲಿ ಮಂಗಳವಾರ ಸಂಚಲನ ಮೂಡಿಸಿತ್ತು. ಅವರ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಬುಧವಾರ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿ ಗೋಕಾಕ್‌ನಲ್ಲಿ ಪ್ರತಿಭಟನೆ ನಡೆಯಿತು. ಬಸವೇಶ್ವರ ವೃತ್ತದಲ್ಲಿ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ … Continued