ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಭೇಟಿ: ಆತ್ಮಲಿಂಗಕ್ಕೆ ವಿಶೇಷ ಪೂಜೆ

posted in: ರಾಜ್ಯ | 0

ಅಂಕೋಲಾ:ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶ್ರೀಕ್ಷೇತ್ರ ಗೋಕರ್ಣದ ಮಹಾಬಲೇಶ್ವರ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ ಪುರಾಣ ಪ್ರಸಿದ್ಧ ಆತ್ಮಲಿಂಗದ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ವಿಶೇಷ ಭದ್ರತೆಯಲ್ಲಿ ಮುರ್ಡೇಶ್ವರದಿಂದ ಗೋಕರ್ಣಕ್ಕೆ ಆಗಮಿಸಿದ ರಾಜ್ಯಪಾಲರನ್ನು ದೇವಾಲಯದ ಆಡಳಿತದ ವತಿಯಿಂದ ಗೌರವಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು. ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ಗೋಕರ್ಣದಲ್ಲಿ ಬೆಳಿಗ್ಗೆಯಿಂದಲೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. … Continued