ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ ಪ್ರಮಾಣ ವಚನ, 13 ಸಚಿವರಿಂದಲೂ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ (DK Shivakumar) ಲೋಕಭವನದಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರಚಂ ದ್‌ಗೆಹ್ಲೋಟ್‌ ಅವರು ನೂತನ ಮುಖ್ಯಮಂತ್ರಿಗೆ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷದ ನಾಯಕ ರಾಹುಲ್‌ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ ವರಿಷ್ಠರು,  ಪಕ್ಷದ ಶಾಸಕರು,ಕುಟುಂಬಸ್ಥರು,  ಸೇರಿ ನೂರಾರು ಮಂದಿ … Continued

ರಾಜ್ಯಪಾಲರಿಗೆ ಮನವರಿಕೆಯಾಗದ ಟಿವಿಕೆ ಸಂಖ್ಯಾ ಬಲ ; ಅಧಿಕಾರಕ್ಕಾಗಿ ತಮಿಳುನಾಡಿನಲ್ಲಿ ಮುಂದುವರಿದ ಕಸರತ್ತು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜಕಾರಣದಲ್ಲಿ ಅನಿರೀಕ್ಷಿತ ತಿರುವುಗಳು ಕಂಡುಬರುತ್ತಿವೆ. ಚಿತ್ರರಂಗದಿಂದ ರಾಜಕೀಯಕ್ಕೆ ಪದಾರ್ಪಣೆ ಮಾಡಿ ಮೊದಲ ಚುನಾವಣೆಯಲ್ಲೇ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)ಪಕ್ಷವು ಸರಳ ಬಹುಮತದ ಸಮೀಪ ಬಂದಿದ್ದರೂ ಸರ್ಕಾರ ರಚಿಸಲು ಅಗತ್ಯವಿರುವ ಮ್ಯಾಜಿಕ್ ನಂಬರ್ ತಲುಪಲು ಹೆಣಗಾಡುತ್ತಿದೆ. ಏಪ್ರಿಲ್ … Continued

ಸರ್ಕಾರ ನೀಡಿದ ಭಾಷಣ ಓದದೆ ಎರಡೇ ಸಾಲಿನ ಭಾಷಣ ಓದಿ ಸದನದಿಂದ ತೆರಳಿದ ರಾಜ್ಯಪಾಲರು

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನದ ಆರಂಭದಲ್ಲೇ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ಸ್ಫೋಟಗೊಂಡಿದೆ. ಗುರುವಾರ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು, ಕೇವಲ ಎರಡೇ ಸಾಲುಗಳನ್ನು ಓದಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಸರ್ಕಾರ ಸಿದ್ಧಪಡಿಸಿದ್ದ ಭಾಷಣದ ಪ್ರತಿಯಲ್ಲಿ ಉಲ್ಲೇಖಿಸಲಾಗಿದ್ದ … Continued

ರಮೇಶಬಾಬು, ಜಕ್ಕಪ್ಪನವರ ಸೇರಿ ವಿಧಾನ ಪರಿಷತ್ತಿಗೆ ನಾಲ್ವರ ನೇಮಕ ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸುಮಾರು ಆರೇಳು ತಿಂಗಳಿಂದ ಖಾಲಿಯಿದ್ದ ನಾಲ್ಕು ವಿಧಾನ ಪರಿಷತ್‌ ಸ್ಥಾನಗಳಿಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು ಸೇರಿದಂತೆ ನಾಲ್ವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು, ಕರ್ನಾಟಕ … Continued

ರಾಜ್ಯ ಸರ್ಕಾರಕ್ಕೆ ಮುಜುಗರ ; ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ಗವರ್ನರ್

ಬೆಂಗಳೂರು : ವಿಪಕ್ಷಗಳ ವಿರೋಧದ ನಡೆಯು ಸದನದಲ್ಲಿ ಅಂಗೀಕಾರವಾಗಿದ್ದ ಗ್ರೇಟರ್ ಬೆಂಗಳೂರು ವಿಧೇಯಕವನ್ನು ರಾಜ್ಯಪಾಲರು ಸಹಿ ಹಾಕದೆ ವಾಪಸ್ ಕಳುಹಿಸಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ವಿಪಕ್ಷಗಳ ವಿರೋಧದ ನಡುವೆಯೂ ಅನಮೋದನೆ ಸಿಕ್ಕಿತ್ತು. ಆದರೆ, ಇದೀಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ಕೆಲವೊಂದು ಸ್ಪಷ್ಟನೆ ಕೇಳಿ … Continued

ಮುಡಾ ಹಗರಣದಲ್ಲಿ ಮೊದಲ ತಲೆದಂಡ ; ಮುಡಾದ ಹಿಂದಿನ ಆಯುಕ್ತ ಸಸ್ಪೆಂಡ್‌…

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಮುಡಾ ಹಗರಣದಲ್ಲಿ (Muda Scam) ಮೊದಲ ತಲೆದಂಡವಾಗಿದೆ. ರಾಜ್ಯಪಾಲರ ಆದೇಶಾನುಸಾರ ಹಿಂದಿನ ಆಯುಕ್ತ ಜಿಟಿ ದಿನೇಶಕುಮಾರ (GT Dinesh Kumar) ಅವರನ್ನು ಸರ್ಕಾರ ಅಮಾನತು ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್​ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರಾದ … Continued

ಸಹಕಾರಿ ಕಾಯ್ದೆ ತಿದ್ದುಪಡಿ ವಿಧೇಯಕ ಹಿಂಪಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉತ್ತರ ಕನ್ನಡದ ಸಹಕಾರಿಗಳ ನಿಯೋಗದಿಂದ ರಾಜ್ಯಪಾಲರಿಗೆ ಮನವಿ

ಯಲ್ಲಾಪುರ: ರಾಜ್ಯ ಸರಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ನೂತನ ಸಹಕಾರಿ ಕಾಯ್ದೆಯ ತಿದ್ದುಪಡಿ ವಿಧೇಯಕ ವಿರೋಧಿಸಿ ಕೃಷಿ, ಕೃಷಿಕ ಹಾಗೂ ಕೃಷಿಪತ್ತು ಸಂಘಗಳ ಶ್ರೇಯೋಭಿವೃದ್ಧಿ ಟ್ರಸ್ಟ್ ಶಿರಸಿ ಇದರ ಅಡಿಯಲ್ಲಿ ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಹಕಾರಿಗಳ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಗುರುವಾರ ಭೇಟಿ … Continued

ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ … Continued

ತನ್ನ ಆದೇಶ ಧಿಕ್ಕರಿಸಿದ ತಮಿಳುನಾಡು ರಾಜ್ಯಪಾಲರ ವಿರುದ್ಧ ಸುಪ್ರೀಂ ಕೋರ್ಟ್‌ ಕೆಂಡಾಮಂಡಲ

ನವದೆಹಲಿ : ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮುಖಂಡ ಕೆ ಪೊನ್ಮುಡಿ ಅವರಿಗೆ ಕ್ರಿಮಿನಲ್ ಪ್ರಕರಣವೊಂದರಲ್ಲಿ ವಿಧಿಸಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ ನಂತರವೂ ಅವರನ್ನು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರ ನಡವಳಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಗರಂ ಆಗಿದೆ. … Continued