ಆಪರೇಷನ್ ಸಿಂಧೂರದಲ್ಲಿ ಹುತಾತ್ಮರಾದ 6 ಯೋಧರ ಹೆಸರು ಪ್ರಕಟಿಸಿದ ಕೇಂದ್ರ ಸರ್ಕಾರ

ನವದೆಹಲಿ: ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲು 2025ರ ಮೇ ತಿಂಗಳಲ್ಲಿ ಭಾರತೀಯ ಸೇನೆ ನಡೆಸಿದ್ದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ವೇಳೆ ಹುತಾತ್ಮರಾದ ಆರು ಭಾರತೀಯ ಯೋಧರ ಹೆಸರುಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಮೊದಲ ಬಾರಿಗೆ ಅಧಿಕೃತವಾಗಿ ಪ್ರಕಟಿಸಿದೆ. ಈ ಆರು ಯೋಧರ ಪೈಕಿ ಐವರು ಭಾರತೀಯ ಸೇನೆಗೆ ಹಾಗೂ … Continued

ಭಾರತೀಯ ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ ಸೇಥ್ ನೇಮಕ

ನವದೆಹಲಿ: ಭಾರತೀಯ ಭೂಸೇನೆಯ (ಇಂಡಿಯನ್ ಆರ್ಮಿ) ನೂತನ ಮುಖ್ಯಸ್ಥರಾಗಿ (ಚೀಫ್ ಆಫ್ ದಿ ಆರ್ಮಿ ಸ್ಟಾಫ್) ಲೆಫ್ಟಿನೆಂಟ್ ಜನರಲ್ ಧೀರಜ ಸೇಥ್ ಅವರು ನೇಮಕಗೊಂಡಿದ್ದಾರೆ. ಪ್ರಸ್ತುತ ಭೂಸೇನಾ ಮುಖ್ಯಸ್ಥರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಅವರು ಜೂನ್ 30 ರಂದು ನಿವೃತ್ತರಾಗಲಿದ್ದು, ಅದೇ ದಿನದಿಂದ ಜಾರಿಗೆ ಬರುವಂತೆ ಧೀರಜ ಸೇಥ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಭೂಸೇನೆಯ … Continued

ವಕ್ಫ್ ತಿದ್ದುಪಡಿ ಕಾಯಿದೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯಿದೆ- 2025ಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ, ನ್ಯಾಯಮೂರ್ತಿಗಳಾದ ಆಗಸ್ಟೀನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ಮಧ್ಯಂತರ ಪರಿಹಾರದ ಕುರಿತು ತನ್ನ ಆದೇಶ ಕಾಯ್ದಿರಿಸುವ ಮೊದಲು ಮೂರು ದಿನಗಳ ಕಾಲ ಎಲ್ಲ ಪಕ್ಷಕಾರರ … Continued