ಇ-ರಿಕ್ಷಾ ಬ್ಯಾಟರಿ ಸ್ಥಗಿತಗೊಳಿಸಬಲ್ಲ ಆ್ಯಪ್‌ಗಳ ತೆರವಿಗೆ ಗೂಗಲ್‌, ಆಪಲ್‌ಗೆ ಕೇಂದ್ರ ಸರ್ಕಾರದ ಸೂಚನೆ

ನವದೆಹಲಿ: ಪ್ರಯಾಣಿಕರ ಸುರಕ್ಷತೆ, ದುರುಪಯೋಗ ಹಾಗೂ ವಿದ್ಯುತ್ ವಾಹನಗಳ (ಇವಿ) ಬ್ಯಾಟರಿ ನಿರ್ವಹಣಾ ವ್ಯವಸ್ಥೆಗಳಿಗೆ (Battery Management System–BMS) ಅನಧಿಕೃತ ಪ್ರವೇಶದ ಬಗ್ಗೆ ವ್ಯಕ್ತವಾಗಿರುವ ಗಂಭೀರ ಆತಂಕದ ಹಿನ್ನೆಲೆಯಲ್ಲಿ, ಇ-ರಿಕ್ಷಾ ಹಾಗೂ ಇತರ ವಿದ್ಯುತ್ ವಾಹನಗಳ ಬ್ಯಾಟರಿಗಳನ್ನು ದೂರದಿಂದಲೇ (ರಿಮೋಟ್ ಮೂಲಕ) ಸ್ಥಗಿತಗೊಳಿಸುವ ಸಾಮರ್ಥ್ಯ ಹೊಂದಿರುವುದಾಗಿ ಆರೋಪಿಸಲಾದ ಏಳು ಮೊಬೈಲ್ ಅಪ್ಲಿಕೇಶನ್‌ಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರ … Continued

ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರವು ಶನಿವಾರ (ಮೇ 23) ಕಾರ್ಮಿಕರ ಕನಿಷ್ಠ ವೇತನವನ್ನು ಶೇಕಡಾ 60 ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಪರಿಷ್ಕೃತ ವ್ಯವಸ್ಥೆಯಡಿ ಬೆಂಗಳೂರಿನ ಕಾರ್ಮಿಕರು ಇನ್ಮುಂದೆ ಮಾಸಿಕ ಕನಿಷ್ಠ 23,376 ರೂಪಾಯಿ ವೇತನ ಪಡೆಯಲಿದ್ದಾರೆ. ಈ ನಿರ್ಧಾರವನ್ನು ಪ್ರಕಟಿಸಿದ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಅವರು, “ಈ ಕ್ರಮವು ಕಾರ್ಮಿಕರ … Continued

ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ

ನವದೆಹಲಿ: ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಉಂಟಾಗಬಹುದಾದ ಇಂಧನ ಬಿಕ್ಕಟ್ಟನ್ನು ಎದುರಿಸಲು ಮತ್ತು ಎಲ್‌ಪಿಜಿ ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬುಕ್ಕಿಂಗ್‌ ಅವಧಿಯನ್ನು ಈಗಿರುವ 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎರಡು ಬುಕ್ಕಿಂಗ್‌ಗಳ ನಡುವಿನ ಅವಧಿಯನ್ನು 21 ದಿನಗಳಿಂದ 25 … Continued

10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸಿ ; ಇ-ಕಾಮರ್ಸ್ ವಿತರಣಾ ಕಂಪನಿಗಳಿಗೆ ಸರ್ಕಾರದ ಸೂಚನೆ

ನವದೆಹಲಿ:  ಇ-ಕಾಮರ್ಸ್ ಪ್ರಮುಖ ವಿತರಣಾ ಕಂಪನಿಗಳು ನೀಡುತ್ತಿದ್ದ ’10 ನಿಮಿಷಗಳಲ್ಲಿ ಡೆಲಿವರಿ’ ಎಂಬ ಪ್ರಚಾರವನ್ನು ಕೈಬಿಡುವಂತೆ ಕೇಂದ್ರ ಸರ್ಕಾರ ಕಂಪನಿಗಳಿಗೆ ಸೂಚಿಸಿದೆ. ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಅವರು ವಿವಿಧ ಇ-ಕಾಮರ್ಸ್ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದು, ಡೆಲಿವರಿ ಪಾಲುದಾರರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ತಾಕೀತು ಮಾಡಿದ್ದಾರೆ.  ಸರ್ಕಾರದ ಸೂಚನೆಯ ಬೆನ್ನಲ್ಲೇ … Continued

ಮೊಬೈಲ್ ತಯಾರಕರಿಗೆ ಸಂಚಾರ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯ ಆದೇಶ ಹಿಂಪಡೆದ ಸರ್ಕಾರ

ನವದೆಹಲಿ:ಮೊಬೈಲ್ ತಯಾರಕರಿಗೆ ‘ಸಂಚಾರ ಸಾಥಿ’ (Sanchar Saathi) ಆ್ಯಪ್ ಅನ್ನು ಕಡ್ಡಾಯವಾಗಿ ಮೊದಲೇ ಅಳವಡಿಸುವ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ ಹಿಂಪಡೆದಿದೆ. ಬುಧವಾರ ಲೋಕಸಭೆಯಲ್ಲಿ ನಡೆದ ಚರ್ಚೆಯ ವೇಳೆ, ಕೇಂದ್ರ ಸಂವಹನ ಮತ್ತು ಈಶಾನ್ಯ ಪ್ರಾಂತ್ಯಗಳ ಅಭಿವೃದ್ಧಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಸಾರ್ವಜನಿಕರ ಸಲಹೆ ಮತ್ತು ಪ್ರತಿಕ್ರಿಯೆಗಳ ಆಧಾರದ ಮೇಲೆ ಪ್ಲಾಟ್‌ಫಾರ್ಮ್‌ನ ನಿಯಮಗಳನ್ನು ತಿದ್ದುಪಡಿ … Continued

ರಾಜ್ಯೋತ್ಸವ ಪ್ರಶಸ್ತಿ : ಆನ್‌ ಲೈನ್‌ ಅರ್ಜಿ ಪ್ರಕ್ರಿಯೆ ಕೈಬಿಟ್ಟ ಸರ್ಕಾರ

ಬೆಂಗಳೂರು: ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೈಬಿಟ್ಟಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರಾದ 70 ಮಂದಿಯನ್ನು ಇಲಾಖೆಯ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಆಯ್ಕೆ ಮಾಡಲಿವೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಆದರೆ, ಈಗಾಗಲೇ ಇಲಾಖೆಗೆ ಬಂದಿರುವ ಸ್ವಯಂ … Continued

ಮಸೂದೆಗಳನ್ನು ತಡೆಹಿಡಿಯಲು ರಾಜ್ಯಪಾಲರಿಗೆ ವಿಟೋ ಅಧಿಕಾರವಿಲ್ಲ : ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್‌ ತರಾಟೆ

ಬೆಂಗಳೂರು : ರಾಜ್ಯ ಶಾಸಕಾಂಗ ಕಳುಹಿಸುವ ಮಸೂದೆಗಳನ್ನು ತಡೆಹಿಡಿದು ಕೂಡ್ರಲು ಇರುವುದಕ್ಕೆ ರಾಜ್ಯಪಾಲರಿಗೆ ಯಾವುದೇ ರೀತಿಯ ವಿಟೋ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ತಮಿಳುನಾಡು ಶಾಸಕಾಂಗವು ಮಂಡಿಸಿದ 10 ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ ಆರ್.ಎನ್. ರವಿ ಅವರ ನಿರ್ಧಾರಗಳು ಕಾನೂನುಬಾಹಿರ ಎಂದು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಆರ್.ಮಹಾದೇವನ್ ಅವರ ಪೀಠ ಹೇಳಿತು. … Continued

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ; ಕಾಲಮಿತಿಯಲ್ಲಿ 34,863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಇಲಾಖೆಗಳಲ್ಲಿನ 34,863 ಖಾಲಿ ಹುದ್ದೆಗಳನ್ನು (Government Jobs) ಕಾಲಮಿತಿಯೊಳಗೆ ಭರ್ತಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ … Continued

ಕಾರ್ಮಿಕರ ಕನಿಷ್ಠ ವೇತನ ದರ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಅಸಂಘಟಿತ ನೌಕರರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವೇರಿಯಬಲ್ ಡಿಯರ್ನೆಸ್ ಭತ್ಯೆ (ವಿಡಿಎ)ಯನ್ನು ಪರಿಷ್ಕರಣೆ ಮಾಡುವ ಮೂಲಕ ಕನಿಷ್ಠ ವೇತನ ದರ ಹೆಚ್ಚಿಸಿದೆ. ಇದು ಕಾರ್ಮಿಕರು ಹೆಚ್ಚುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕಟ್ಟಡ ನಿರ್ಮಾಣ, ಲೋಡಿಂಗ್ ಮತ್ತು ಅನ್‌ಲೋಡಿಂಗ್, … Continued

ಅನುದಾನಿತ ಶಿಕ್ಷಣ ಸಂಸ್ಥೆ ಸಿಬ್ಬಂದಿಗೂ 7ನೇ ವೇತನ ಸೌಲಭ್ಯ ವಿಸ್ತರಣೆ

ಬೆಂಗಳೂರು : 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೂ ರಾಜ್ಯ ವೇತನ ಸೌಲಭ್ಯಗಳನ್ನು ವಿಸ್ತರಿಸಲಾಗಿದೆ. ಸರ್ಕಾರದ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಆದೇಶಿಸಿದ್ದು, ಅನ್ವಯಿಸುವ ಬದಲಾವಣೆಯೊಂದಿಗೆ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು … Continued