ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ…!

ಮುಂಬೈ: ಮುಂಬೈನಲ್ಲಿ ಕಸದ ರಾಶಿಗಳ ಮೇಲೆ ಬಿದ್ದಿದ್ದ ವೃದ್ಧ ಮಹಿಳೆಯೊಬ್ಬರ ದಯನೀಯ ಸ್ಥಿತಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯನ್ನು ಅವರ ಮೊಮ್ಮಗ ಕಸ ಎಸೆಯುವ ಜಾಗದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿ, ಮಹಿಳೆಯ ಕುಟುಂಬಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಮುಂಬೈ ಪೊಲೀಸರು ನಗರದ ಆರೆ ಕಾಲೋನಿಯ ರಸ್ತೆಯಲ್ಲಿರುವ … Continued

ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗನ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಜ್ಜ…!

ಸಿಧಿ : ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಪತ್ನಿಯನ್ನು ಕೊಂದ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗನ ಅಂತ್ಯಕ್ರಿಯೆ ವೇಳೆ ಚಿತೆಗೆ ಹಾರಿ ಅಜ್ಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಹ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಹೋಲಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಭಯರಾಜಯಾದವ್ (34) ಎಂದು ಗುರುತಿಸಲಾದ … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಲಾಲಬಹದ್ದೂರ ಶಾಸ್ತ್ರೀ ಮೊಮ್ಮಗ..

ನವದೆಹಲಿ: ಮಾಜಿ ಪ್ರಧಾನಿ ಲಾಲಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಮತ್ತೊಂದು ದೊಡ್ಡ ಹೊಡೆತವಾಗಿ, ಶಾಸ್ತ್ರಿ ಇಂದು, ಬುಧವಾರ ಮುಂಜಾನೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ ತೊರೆದ ಕೆಲವು ಗಂಟೆಗಳ ನಂತರ ಅವರು ಭಾರತೀಯ ಜನತಾ … Continued

ಸಾವರ್ಕರ ಅಧ್ಯಾಯ ತೆಗೆದುಹಾಕುವ ಕರ್ನಾಟಕ ಸರ್ಕಾರ ನಿರ್ಧಾರವು ವ್ಯತಿರಿಕ್ತ ಪರಿಣಾಮ ಬೀರುತ್ತದೆ: ಸಾವರ್ಕರ ಮೊಮ್ಮಗ

ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ ಅವರ ಮೊಮ್ಮಗ ರಂಜಿತ್ ಸಾವರ್ಕರ ಅವರು ಶುಕ್ರವಾರ (ಜೂನ್ 16) ಪ್ರತಿಕ್ರಿಯಿಸಿದ್ದು, ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಶಾಲಾ ಪಠ್ಯಪುಸ್ತಕಗಳಿಂದ ತನ್ನ ಅಜ್ಜನ ಅಧ್ಯಾಯವನ್ನು ತೆಗೆದುಹಾಕುವ ನಿರ್ಧಾರವು ಅನಿರೀಕ್ಷಿತ ಫಲಿತಾಂಶಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಗೋವಾದಲ್ಲಿ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ ಮಾತನಾಡಿದ ರಂಜಿತ್ ಸಾವರ್ಕರ ಅವರು, ಅಧ್ಯಾಯವನ್ನು ಅಳಿಸುವ ಮೂಲಕ ವಿದ್ಯಾರ್ಥಿಗಳು … Continued