ʼಗೃಹಲಕ್ಷ್ಮಿʼ ಯೋಜನೆ 1 ವರ್ಷ ನಿಲ್ಲಿಸಿ, ನೀರಾವರಿ ಯೋಜನೆಗೆ ಹಣ ಕೊಡಿ: ಕಾಂಗ್ರೆಸ್‌ ಸರ್ಕಾರಕ್ಕೆ ಸ್ವಪಕ್ಷದ ಶಾಸಕನಿಂದಲೇ ಆಗ್ರಹ !

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಒಂದು ವರ್ಷದ ಮಟ್ಟಿಗೆ ಸ್ಥಗಿತಗೊಳಿಸಿ, ಅದಕ್ಕೆ ಮೀಸಲಾಗಿರುವ ಹಣವನ್ನು ಪ್ರಮುಖ ನೀರಾವರಿ ಯೋಜನೆಗಳಿಗೆ ಬಳಸಬೇಕು ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಟಿಪ್ಪಣ್ಣ ಕಮಕನೂರು ಸಲಹೆ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ, ಕಳಸಾ-ಬಂಡೂರಿ, … Continued

ಇನ್ಮುಂದೆ ಪ್ರತಿ ತಿಂಗಳು ಚಾಮುಂಡೇಶ್ವರಿ ದೇವಿಗೂ ತಲುಪಲಿದೆ ಗೃಹಲಕ್ಷ್ಮೀ ಯೋಜನೆ ಹಣ

ಮೈಸೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದು, ಪ್ರತಿ ತಿಂಗಳು ದೇವಸ್ಥಾನಕ್ಕೆ 2 ಸಾವಿರ ರೂಪಾಯಿ ನೀಡಲು ಸರ್ಕಾರ ನಿರ್ಧರಿಸಿದೆ. ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು. ಈ ವೇಳೆ ನಾಡದೇವತೆ ಚಾಮುಂಡೇಶ್ವರಿಗೆ … Continued

ಗೃಹಲಕ್ಷ್ಮೀ ಯೋಜನೆ ಅರ್ಜಿ ಫಾರಂ ಬಿಡುಗಡೆ ಮಾಡಿಲ್ಲ, ಹರಿದಾಡುತ್ತಿರುವುದು ನಕಲಿ ಅರ್ಜಿ : ಸಚಿವೆ ಹೆಬ್ಬಾಳ್ಕರ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿಗಳು ಹರಿದಾಡುತ್ತಿವೆ. ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ನಕಲಿ … Continued