ವೀಡಿಯೊ..| ಅನುದಾನ ಸಿಗದ್ದಕ್ಕೆ ಗ್ಯಾರಂಟಿ ಯೋಜನೆ’ ಕೈ ಬಿಡಬೇಕು ಎಂದ ಕಾಂಗ್ರೆಸ್‌ ಶಾಸಕ ; ಡಿ.ಕೆ. ಶಿವಕುಮಾರ ಗರಂ

ಹೊಸಪೇಟೆ / ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಾಗಿ ಕ್ಷೇತ್ರಕ್ಕೆ ಬರುತ್ತಿದ್ದ ಅನುದಾನ ಕಡಿತವಾಗಿದ್ದು, ಒಂದೆರಡು ಗ್ಯಾರಂಟಿ ಯೋಜನೆಗಳನ್ನು ಕೈ ಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡುವುದಾಗಿ ಕಾಂಗ್ರೆಸ್ ಗವಿಯಪ್ಪ ಹೇಳಿರುವುದು ಈಗ ವೈರಲ್ ಆಗುತ್ತಿದೆ. ಹೊಸಪೇಟೆಯ ಇಪ್ಪಿತೇರಿ ಮಾಗಾಣಿಯಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೊಸಪೇಟೆ ಕಾಂಗ್ರೆಸ್ ಶಾಸಕ ಹೆಚ್.ಆರ್.ಗವಿಯಪ್ಪ, ಗ್ಯಾರಂಟಿ ಸ್ಕೀಂಗಳಿಂದಾಗಿ … Continued

ಜನರಿಗೆ ಕಾಂಗ್ರೆಸ್ಸಿನ ಗ್ಯಾರಂಟಿ ಇಷ್ಟವಾಗಿಲ್ಲ, ಸಾಮೂಹಿಕವಾಗಿ ಎಲ್ಲರಿಗೂ ʼಗ್ಯಾರಂಟಿʼ ಕೊಡುವುದನ್ನು ನಿಲ್ಲಿಸವುದೇ ಒಳಿತು : ಕಾಂಗ್ರೆಸ್‌ ಮುಖಂಡ

ಮೈಸೂರು: ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಜನರು ಅದನ್ನು ಮತದಾನದ ಮೂಲಕ ತೋರಿಸಿದ್ದಾರೆ. ಹೀಗಾಗಿ ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ (Guarantee Scheme) ಜಾರಿ ಮಾಡಿದ್ದನ್ನು ನಿಲ್ಲಿಸುವುದು ಒಳ್ಳಯದು. ಹೀಗಾಗಿ ಈ ಯೋಜನೆಯ ಬಗ್ಗೆ ಮುಖ್ಯಮಂತ್ರಿಗಳು ಮರುಪರಿಶೀಲನೆ ಮಾಡುವುದು ಒಳ್ಳೆಯದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ … Continued

ಗ್ಯಾರಂಟಿ ಯೋಜನೆ ಜಾರಿ : ಈ ವರ್ಷ ಅಭಿವೃದ್ಧಿಗೆ ಹಣ ನೀಡಲು ಸಾಧ್ಯವಿಲ್ಲ ಎಂದ ಡಿಸಿಎಂ ಡಿ.ಕೆ. ಶಿವಕುಮಾರ

ಬೆಂಗಳೂರು: ಐದು ಗ್ಯಾರಂಟಿಯಿಂದ ಉಂಟಾಗುವ ಆರ್ಥಿಕ ಅಡಚಣೆಯಿಂದಾಗಿ ಈ ವರ್ಷ ಅಭಿವೃದ್ಧಿಗೆ ಹಣ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ಸವಾಲುಗಳನ್ನು ಎದುರಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಬುಧವಾರ ಹೇಳಿದ್ದಾರೆ. ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಜಾರಿಯಾಗದಿರುವ ಬಗ್ಗೆ ಹಲವು ಶಾಸಕರು ಆರೋಪಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯ … Continued