ಆಡಿಯೊ ವೈರಲ್‌; ಮೂವರು ಪಿಎಸ್‌ಐಗಳು ಅಮಾನತು…?

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯ (Haliyal Police Station) ಪಿಎಸ್‌ಐಗಳ ಪೋಸ್ಟಿಂಗ್ ಹಾಗೂ ಲಂಚದ ವ್ಯವಹಾರಕ್ಕೆ ಸಂಬಂಧಿಸಿದಂತೆ ಆಡಿಯೊ ವೈರಲ್ ಅದ ಬೆನ್ನಲ್ಲಿಯೇ ಮೂವರು ಪಿಎಸ್‌ಐಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಲಂಚದ ಆಡಿಯೊ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದರಿಂದ ಎಚ್ಚೆತ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಗಂಭೀರ ಆರೋಪ ಎದುರಿಸುತ್ತಿದ್ದ ಮೂರು ಪಿಎಸ್‌ಐಗಳನ್ನು ಅಮಾನತುಗೊಳಿಸಿದ್ದಾರೆ … Continued

ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಯಲ್ಲಾಪುರ, ಹಳಿಯಾಳ, ಜೊಯಿಡಾ ಹಾಗೂ ದಾಂಡೇಲಿ ಈ ನಾಲ್ಕು ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯು ಭಾರಿ ಮಳೆ … Continued

ಉತ್ತರ ಕನ್ನಡ | ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ಮೇಲೆ ಗುಂಡುಹಾರಿಸಿದ ಪೊಲೀಸರು

ಕಾರವಾರ : ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಿನಲ್ಲಿ ಕೋಟಿ ರೂ.ಸಿಕ್ಕಿದ್ದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನೀಲವೇಣಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ಕೆಲದಿನಗಳ ಹಿಂದೆ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಗಿದ್ದ ಕೋಟಿ ರೂ.ಹಣದ ಪ್ರಕರಣಕ್ಕೆ ಸಂಬಂಧಿಸಿದಂತೆ … Continued

ವೀಡಿಯೊ..| ಹಳಿಯಾಳ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಜಗಳ, ನೂಕಾಟ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಜಗಳ ನಡೆದಿದೆ ಎಂದು ವರದಿಯಾಗಿದೆ. ಸಭೆಯಲ್ಲಿ ಮಾಜಿ ಶಾಸಕ ಸುನಿಲ ಹೆಗಡೆ ಬಣ ಹಾಗೂ ಜಿಲ್ಲಾ ಕಾರ್ಯದರ್ಶಿ ಶಿವಾಜಿ ನರಸಾನಿ ಗುಂಪಿಗಳ ಮಧ್ಯೆ ಗಲಾಟೆಯಾಗಿದೆ. ಹಳಿಯಾಳದ ಗಣೇಶ ಕಲ್ಯಾಣ ಮಂಟಪದಲ್ಲಿ ಜಿಲ್ಲಾಧ್ಯಕ್ಷ ಎನ್. ಎಸ್. ಹೆಗಡೆ ಕರ್ಕಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ … Continued