ಹಾನಗಲ್ಲ ನೈತಿಕ‌ ಪೊಲೀಸ್ ಗಿರಿ ಪ್ರಕರಣ : ಹಲ್ಲೆ ಆರೋಪಿಗಳ ವಿರುದ್ಧ ಗ್ಯಾಂಗ್ ರೇಪ್ ಪ್ರಕರಣ ದಾಖಲು

ಹಾವೇರಿ : ನೈತಿಕ‌ ಪೊಲೀಸ್ ಗಿರಿ ಪ್ರಕರಣದಲ್ಲಿ ಜಿಲ್ಲೆಯ ಹಾನಗಲ್ ನಲ್ಲಿ ಹೊಟೇಲ್ ವಾಸ್ತವ್ಯದ ವೇಳೆ ಹೋಟೆಲ್ ಕೋಣೆಗೆ ನುಗ್ಗಿ ಅಂತರ್‌ಧರ್ಮೀಯ ಜೋಡಿ ಮೇಲೆ ಹಲ್ಲೆ ನಡೆಸಿದ ಏಳು ಮಂದಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ ನಂತರ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಅತ್ತಿಗೆ, ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲಗೈದ ಮೈದುನ

ಹಾವೇರಿ: ತನ್ನ ಅತ್ತಿಗೆ ಮತ್ತು ಇಬ್ಬರು ಮಕ್ಕಳನ್ನು ಮೈದುನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕು ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ನಿವಾಸಿಗಳಾದ ಗೀತಾ ಮರಿಗೌಡ (35), ಇವರ ಮಕ್ಕಳಾದ ಅಕುಲ್(10) ಮತ್ತು ಅಂಕಿತಾ (7) ಕೊಲೆಯಾದವರು ಎಂದು ಗುರುತಿಸಲಾಗಿದೆ. ಆರೋಪಿ ಮೈದುನ ಕುಮಾರ ಗೌಡ ಮರಿಗೌಡ (32) ಪರಾರಿಯಾಗಿದ್ದಾನೆ. … Continued

ಉಪಚುನಾವಣೆ: ಹಾನಗಲ್‍ನಲ್ಲಿ 80%, ಸಿಂದಗಿಯಲ್ಲಿ70% ಮತದಾನ

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಶನಿವಾರ ಮುಗಿದಿದ್ದು, ಬಹುತೇಕ ಶಾಂತಿಯುತವಾಗಿ ನಡೆದಿದೆ. ಹಾನಗಲ್‍ನಲ್ಲಿ ಶೇಕಡಾ 80 ರಷ್ಟು ಮತ್ತು ಸಿಂದಗಿಯಲ್ಲಿ ಶೇಕಡಾ 70 ರಷ್ಟು ಮತದಾನವಾಗಿದೆ. ಹಾನಗಲ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾನಗಲ್‌ನಲ್ಲಿ ಬಿಜೆಪಿಯಿಂದ ಶಿವರಾಜ ಸಜ್ಜನ, ಕಾಂಗ್ರೆಸ್‌ನಿಂದ ಶ್ರೀನಿವಾಸ್ ಮಾನೆ, ಜೆಡಿಎಸ್‌ನಿಂದ ರಿಯಾಜ್ ಶೇಖ್ ಸ್ಪರ್ಧಿಸಿದ್ದಾರೆ. ಸಿಂದಗಿಯಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರ, ಕಾಂಗ್ರೆಸ್ಸಿನಿಂದ ಅಶೊಕ್ … Continued

ಹಾನಗಲ್‌, ಸಿಂಧಗಿ ಉಪಚುನಾವಣೆ: ಪ್ರಚಾರಕ್ಕೆ ಘಟಾನುಘಟಿ ನಾಯಕರ ಎಂಟ್ರಿ…ರಂಗೇರುತ್ತಿದೆ ಕಣ

ಬೆಂಗಳೂರು: ಪ್ರತಿಷ್ಠೆಯ ಕಣವಾಗಿರುವ ಸಿಂಧಗಿ ಹಾಗೂ ಹಾನಗಲ್ ಉಪಚುನಾವಣೆ ಕಾವೇರುತ್ತಿದ್ದು, ಪ್ರಚಾರದ ಕಣಕ್ಕೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಘಟಾನುಘಟಿ ನಾಯಕರು ಧುಮುಕಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಉಪಚುನಾವಣೆ ಪ್ರತಿಷ್ಠೆಯಾಗಿದ್ದರೆ ಕಾಂಗ್ರೆಸ್ಸಿಗೆ ಇದು ಮುಂದಿನ ಚುನಾವಣೆಗೆ ಸವಾಲಾಗಿದೆ. ಹಾಗೂ ಜೆಡಿಎಸ್‍ಗೆ ಉತ್ತರ ಕರ್ನಾಟಕದಲ್ಲಿ ಅಸ್ತಿತ್ವದ ಪ್ರಶ್ನೆಯಾಗಿದೆ. ಹೀಗಾಗಿಯೇ ಮೂರೂ ಪಕ್ಷಗಳು ಘಟನಾನುಘಟಿ ನಾಯಕರು ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. … Continued

ಉಪಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ಹಾನಗಲ್ ಗೆ ಅಚ್ಚರಿಯ ಆಯ್ಕೆ

ಬೆಂಗಳೂರು: ರಾಜ್ಯದಲ್ಲಿ ಅ.30ರಂದು ನಡೆಯಲಿರುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಶಿವರಾಜ್ ಸಜ್ಜನರ್ ಅವರನ್ನು ಕಣಕ್ಕೆ ಇಳಿಸಿದ್ದು, ಅಚ್ಚರಿಯ ನಿರ್ಧಾರ ತೆಗೆದುಕೊಂಡಿದೆ. ಸಿಂದಗಿ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ರಮೇಶ್ ಭೂಸನೂರು ಅವರಿಗೆ ಟಿಕೆಟ್‌ ಘೋಷಿಸಿದೆ. ಸಿ.ಎಂ.ಉದಾಸಿ ಅವರ ನಿಧನದಿಂದ … Continued

ಹಾನಗಲ್, ಸಿಂದಗಿ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಸಮರಕ್ಕೆ ಮುಹೂರ್ತ ನಿಗದಿಯಾಗಿದೆ. ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಕೇಂದ್ರ ಚುನಾವಣಾ ಆಯೋಗ ಇಂದು ವಿವಿಧ ರಾಜ್ಯಗಳಲ್ಲಿ ತೆರವಾಗಿರುವ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಿಸಿದ್ದು, ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಿಗೂ ದಿನಾಂಕವನ್ನು ನಿಗದಿಪಡಿಸಿದೆ. ಈ … Continued