ರೈಲು ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಸಾವು: ರೈಲ್ವೆ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

posted in: ರಾಜ್ಯ | 0

ಹಾಸನ: ಹಾಸನದಲ್ಲಿ ಇಂದು, ಸೋಮವಾರ ವಿದ್ಯಾರ್ಥಿನಿಯೊಬ್ಬಳು ಹಳಿ ಮೇಲೆ ಜಾರಿಬಿದ್ದು ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾಳೆ. ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವುದರೊಂದಿಗೆ ಈ ಅಪಘಾತವು ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದ ಪ್ರೀತಿ ಪುಟ್ಟಸ್ವಾಮಿ ಎಂಬ 22 ವರ್ಷದ … Continued

ಹಾಸನ: ದೇವಸ್ಥಾನದಲ್ಲಿ ವಿಗ್ರಹಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು; ಆರೋಪಿಗಳ ಬೆರಳಚ್ಚು ಸಂಗ್ರಹಿಸಿದ ಪೊಲೀಸರು

posted in: ರಾಜ್ಯ | 0

ಹಾಸನ: ಸೋಮವಾರ, ಮೇ 30 ರಂದು ಅಪರಿಚಿತ ವ್ಯಕ್ತಿಗಳು ಕರ್ನಾಟಕದ ಹಾಸನದಲ್ಲಿ ಹಿಂದೂ ದೇವತೆಗಳ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಮಲೆಕಲ್ಲು ತಿರುಪತಿ ದೇವಸ್ಥಾನದ ವಸ್ತುಸಂಗ್ರಹಾಲಯದ ವಸ್ತುಪ್ರದರ್ಶನ ಕೇಂದ್ರದಲ್ಲಿ ವಿಗ್ರಹಗಳನ್ನು ಇರಿಸಲಾಗಿತ್ತು. ಪೊಲೀಸರ ಪ್ರಕಾರ, 10 ಕ್ಕೂ ಹೆಚ್ಚು ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ. ಅರಸೀಕೆರೆ ತಾಲೂಕಿನಲ್ಲಿ ಪೊಲೀಸರು ಶ್ವಾನದಳವನ್ನು ನಿಯೋಜಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಪ್ರತಿಷ್ಠಾಪನೆಗೆ ಸಿದ್ಧವಾಗಿದ್ದ … Continued

ಪಿಎಸ್ಐ ನೇಮಕ ಪರೀಕ್ಷೆ ಹಗರಣದಲ್ಲಿ ಬಂಧನಕ್ಕೊಳಗಾದ ಆರೋಪಿಯ ಅಣ್ಣ ಆತ್ಮಹತ್ಯೆ

posted in: ರಾಜ್ಯ | 0

ಹಾಸನ: ಪಿಎಸ್‌ಐ ನೇಮಕ ಪರೀಕ್ಷೆ ಹಗರಣದಲ್ಲಿ ಬಂಧನಕ್ಕೊಳಗಾದ ಆರೋಪಿಯ ಅಣ್ಣ ಇಂದು, ಬುಧವಾರ ಆತ್ಮಹತ್ಯೆಗೆ ಶರಣಾದ ಘಟನೆ ಹೊಳೆನರಸೀಪುರ ತಾಲೂಕಿನ ಗುಂಜೇವು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗುಂಜೇವು ಗ್ರಾಮದ ಮನುಕುಮಾರ ಅವರ ಅಣ್ಣ, ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ ವಾಸು(48) ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದೆ. ಪಿಎಸ್‌ಐ … Continued

ಬಸ್‌-ಕಾರಿನ​ ನಡುವೆ ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ಸಾವು

posted in: ರಾಜ್ಯ | 0

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ಹಾಸನ – ಬೇಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಆಲ್ಟೊ ಕಾರು ನಡುವೆ ಡಿಕ್ಕಿ ಸಂಭವಿಸಿ ಐವರು ಯುವಕರು ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತಪರನ್ನು ವಿದ್ಯಾರ್ಥಿಗಳಾದ ಅಕ್ಮಲ್(18), ಜಿಲಾನಿ(19), ತೋಹಿದ್(18), ಕೈಫ್ (18) ಎಂಬವರು ಸ್ಥಳದಲ್ಲೇ ಮೃತಪಟ್ಟರೆ, ರಿಹಾನ್ (19) ಆಸ್ಪತ್ರೆಗೆ ಸಾಗಿಸುವಾಗ … Continued

ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ

posted in: ರಾಜ್ಯ | 0

ಹಾಸನ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಹೇಮಾವತಿ ನಗರದ ಸತ್ಯಪ್ರಸಾದ, ಪತ್ನಿ ಅನ್ನಪೂರ್ಣ, ಹಾಗೂ ಮಗ ಗೌರವ ಆತ್ಮಹತ್ಯೆಗೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಹಾಸನ ನಗರ ನಿವಾಸಿಯಾದ ಸತ್ಯ ಪ್ರಸಾದ ಬೇಲೂರು ರಸ್ತೆಯಲ್ಲಿ ಪೆಟ್ರೋಲ್ ಬಂಕ್ ಮಾಲೀಕತ್ವ ಹೊಂದಿದ್ದಾರೆ. ಗೌರವ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. … Continued