ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಹಾಸನ : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಹಾಸನ ಬಿಜೆಪಿ ಮುಖಂಡ ಹಾಗೂ ವಕೀಲ ಡಿ. ದೇವರಾಜೇಗೌಡ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ನ್ಯಾಯಾಲಯವು ಶನಿವಾರ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಆರೋಪಿ ದೇವರಾಜೇಗೌಡ ಅವರನ್ನು ಶನಿವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಎಸ್‌. … Continued

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

ಬೆಂಗಳೂರು: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಏಪ್ರಿಲ್ 1 ರಂದು ಹಾಸನದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗೌಡ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ಇತ್ತೀಚೆಗೆ ಅವರು ಪ್ರಜ್ವಲ್ ರೇವಣ್ಣ ಅವರ … Continued

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ…!?

ಹಾಸನ : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಆಗುತ್ತಿದೆ. ಪ್ರಜ್ವಲ್​​ ರೇವಣ್ಣ ಅವರ ಅಶ್ಲೀಲ ವಿಡಿಯೋ ನೀಡಿದ್ದು ನಾನೇ ಎಂದು ಹೇಳಿದ್ದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್​ ಇದೀಗ ನಾಪತ್ತೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಸನದ ಪೆನ್‌ಡ್ರೈವ್‌ ಪ್ರಕರಣ ದೇಶದಾದ್ಯಂತ ಸುದ್ದಿಯಾಗುತ್ತಿದ್ದಂತೆ ಎರಡು … Continued

ಲೋಕಸಭೆ ಚುನಾವಣೆ : ಮೂರು ಕ್ಷೇತ್ರಗಳಿಗೆ ಜೆಡಿಎಸ್‌ ಅಭ್ಯರ್ಥಿಗಳು ಅಂತಿಮ

ಹಾಸನ/ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಅಂತಿಮ ಮಾಡಿದೆ. ತಮಗೆ ನೀಡಿರುವ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರೆಂದು ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರು ಹಾಸನದಲ್ಲಿ ಪ್ರಕಟಿಸಿದ್ದಾರೆ. ಹಾಸನದಿಂದ ಪ್ರಜ್ವಲ ರೇವಣ್ಣ, ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೋಲಾರದಿಂದ … Continued

ಯಗಾದಿ ನಂತರ ಉತ್ತಮ ಮಳೆ-ಬೆಳೆ : ಎಲ್ಲರಿಗೂ ಒಳ್ಳೆಯ ಸುದ್ದಿ ನೀಡಿದ ಕೋಡಿಮಠದ ಶ್ರೀಗಳು

ಕೋಲಾರ: ಈ ವರ್ಷ ಯುಗಾದಿ ಕಳೆದ ನಂತರ ಜಾಗತಿಕವಾಗಿ ಹಾಗೂ ದೇಶದಲ್ಲಿ ಹಲವಾರು ರೀತಿಯ ಬದಲಾವಣೆಗಳಾಗಲಿವೆ. ಮಳೆ ಬೆಳೆ ಉತ್ತಮ ರೀತಿಯಲ್ಲಿ ಆಗುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕೋಲಾರದ ಜಿಲ್ಲೆ‌ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಯುಗಾದಿಯ ನಂತರದಲ್ಲಿ ನಿಸರ್ಗದ ಅನೇಕ ವಲಯಗಳಲ್ಲಿ ಬದಲಾವಣೆಯಾಗಲಿದೆ. ಮೋಡಗಳು ಕವಿಯುತ್ತವೆ, … Continued

ಹಾಸನ: ಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು

ಹಾಸನ: ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ನಿಗೂಢವಾಗಿ ಮೃತಪಟ್ಟ ಘಟನೆ ಹಾಸನ ನಗರದ ದಾಸರಕೊಪ್ಪಲಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶಿವಮ್ಮ (36) ಹಾಗೂ ಮಕ್ಕಳಾದ ಸಿಂಚು (7) ಹಾಗೂ ಪವನ (10) ಎಂದು ಗುರುತಿಸಲಾಗಿದೆ. ಶಿವಮ್ಮ ಅವರ ಪತಿ ತೀರ್ಥ ಅವರು ಬೇರೆ ತುಮಕೂರಿನ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಕುಟುಂಬ ಒಂದು … Continued

ದಸರಾ ಆನೆ ಅರ್ಜುನ ಸಾವಿನ ಸಮಗ್ರ ತನಿಖೆಗೆ ತಜ್ಞರ ಸಮಿತಿ ರಚನೆ

ಹಾಸನ: ಯಸಳೂರು ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಎಂಟು ವರ್ಷಗಳ ಕಾಲ ಮೈಸೂರಿನ ವಿಶ್ವವಿಖ್ಯಾತ ದಸರಾದಲ್ಲಿ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಸಾವಿಗೀಡಾದ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಐವರು ಸದಸ್ಯರ ತಜ್ಞರ ಸಮಿತಿ ರಚಿಸಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಭಾನುವಾರ ದಬ್ಬಳ್ಳಿ ಕಟ್ಟೆ ಅರಣ್ಯಕ್ಕೆ … Continued

ಮೈಸೂರು, ಹಾಸನದಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕ್ರಮ : ಈಶ್ವರ ಖಂಡ್ರೆ

ಬೆಳಗಾವಿ: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಕಾಡಾನೆ ಜೊತೆ ಕಾದಾಡಿ ಮಡಿದ ಕ್ಯಾಪ್ಟನ್, ಅರ್ಜುನ ಆನೆಯ ಸ್ಮಾರಕವನ್ನು ಹಾಸನ ಮತ್ತು ಮೈಸೂರು ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರ್ಜುನನ ಸಾವಿನ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅವರು, ಮೈಸೂರಿನ ದಸರಾ ಜಂಬೂಸವಾರಿಯಲ್ಲಿ 8 ಬಾರಿ … Continued

ಅಂಬಾರಿ ಹೊತ್ತಿದ್ದ ಆನೆ ಅರ್ಜುನನಿಗೆ ಭಾವಪೂರ್ಣ ವಿದಾಯ

ಹಾಸನ: ಸೋಮವಾರ ಮೃತಪಟ್ಟಿದ್ದ 8 ಬಾರಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿಯ ದಸರಾ ಅಂಬಾರಿ ಹೊತ್ತಿದ್ದ ದಸರಾ ಆನೆ ಅರ್ಜುನನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾವಪೂರ್ಣ ವಿದಾಯ ಹೇಳಲಾಗಿದೆ. ಅರ್ಜುನ ಹಾಸನ ಜಿಲ್ಲೆಯ ಸಕಲೇಶಪುರದ ದಬ್ಬಳ್ಳಿ ಕಟ್ಟೆ ಗ್ರಾಮದ ಬಳಿಯೇ ಅರ್ಜುನನ ಅಂತ್ಯಸಂಸ್ಕಾರ ನಡೆದಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅರ್ಜುನನ ಅಂತ್ಯಕ್ರಿಯೆ ನಡೆಯಿತು. ಹಾಸನ ಜಿಲ್ಲಾಡಳಿತದಿಂದ ಸರ್ಕಾರಿ … Continued

ಸೆರೆ ಕಾರ್ಯಾಚರಣೆ ವೇಳೆ ಕಾಡಾನೆ ಜೊತೆ ಕಾದಾಟದಲ್ಲಿ 8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು

ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ ಸಾವಿಗೀಡಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆಯಲ್ಲಿ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ವೇಳೆ ಅರ್ಜುನನ ಮೇಲೆ ಒಂಟಿಸಲಗ … Continued