ಹಾಸನ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ: ನೆಲ್ಯಾಡಿ ಬಳಿ ಅಪಹರಣಕಾರರ ಬಂಧನ

ಹಾಸನ : ಹಾಸನದ ಬಿಟ್ಟಗೌಡನಹಳ್ಳಿ ಬಳಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಅಪಹರಣಕಾರರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡದ ನೆಲ್ಯಾಡಿ ಬಳಿ ಅಪಹರಣಕಾರರನ್ನು ಪತ್ತೆ ಹಚ್ಚಿದ ಹಾಸನ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಕಿಡ್ನಾಪ್ ಆಗಿದ್ದ ಶಾಲಾ ಶಿಕ್ಷಕಿಯನ್ನು ರಕ್ಷಿಸಿದ್ದಾರೆ. ಪೊಲೀಸರು ಸಂಜೆ ಐದು ಗಂಟೆ ಸುಮಾರಿಗೆ ದಕ್ಷಿಣ ಕನ್ನಡದ ನೆಲ್ಯಾಡಿ ಬಳಿ … Continued

ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು : ಬೆಂಗಳೂರಿನ ಆಸ್ಪತ್ರೆಗೆ ದಾಖಲು

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (Salumarada Timmakka) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಉಸಿರಾಟದ ಸಮಸ್ಯೆಯಾದ ಅವರನ್ನು ಮಂಗಳವಾರ (ಅ.03)) ಹಾಸನದಿಂದ ಕರೆದುಕೊಂಡು ಬಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತಿಮ್ಮಕ್ಕ ಅವರಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ … Continued

ಕಾರು-ಟಿಪ್ಪರ್ ಲಾರಿ ಡಿಕ್ಕಿ : ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಹಾಸನ : ಟಿಪ್ಪರ್ ವಾಹನ ಡಿಕ್ಕಿಯಾಗಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ ದುರ್ಘಟನೆ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಕುಪ್ಪಳ್ಳಿ ಗ್ರಾಮದ ಚೇತನ, ಗುಡ್ಡೇನಹಳ್ಳಿ ಗ್ರಾಮದ ಅಶೋಕ, ತಟ್ಟೆಕೆರೆ ಗ್ರಾಮದ ಪುರುಷೋತ್ತಮ … Continued

ಚಿರತೆ ಸೆರೆ ಹಿಡಿದು ಬೈಕ್​ಗೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ ಯುವಕ..!

ಹಾಸನ : ಹೊಲದಲ್ಲಿ ಕಣ್ಣಿಗೆ ಬಿದ್ದ ಚಿರತೆಯನ್ನು ವ್ಯಕ್ತಿಯೊಬ್ಬರು ಸಾಹಸಪಟ್ಟು ಸೆರೆ ಹಿಡಿದು, ನಂತರ ತನ್ನದೇ ಬೈಕಿನಲ್ಲಿ ಕಟ್ಟಿಕೊಂಡು ಬಂದು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಗಂಡಸಿ ಹೋಬಳಿಯ ಬಾಗೀವಾಳು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಗೀವಾಳು ಗ್ರಾಮದ ವೇಣುಗೋಪಾಲ ಎಂಬವರು ಜಮೀನಿಗೆ ಹೋಗಿದ್ದಾಗ ಅವರಿಗೆ ಚಿರತೆ ಕಾಣಿಸಿಕೊಂಡಿದೆ. ಆಗ ಅವರು … Continued

ಜೆಡಿಎಸ್‌ ನಾಯಕ ಎ. ಟಿ. ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ: ಕಾಂಗ್ರೆಸ್‌ ಸೇರುತ್ತಾರೆಯೇ ?

ಬೆಂಗಳೂರು ; ಶುಕ್ರವಾರ ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ಜೆಡಿಎಸ್‌ ಶಾಸಕ ಎ. ಟಿ. ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆಯ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ಅವರು ಸಲ್ಲಿಕೆ ಮಾಡಿದ್ದು, ಬಳಿಕ ವಿಧಾನಸೌಧದ ಮೆಟ್ಟಿಲಿಗೆ ನಮಸ್ಕಾರ ಮಾಡಿ ತೆರಳಿದರು. ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಲವು ದಿನಗಳಿಂದ ಹಬ್ಬಿತ್ತು. ಅಂತಿಮವಾಗಿ ಇಂದು ಶಾಸಕ … Continued

ಹಾಸನ: ಗುಂಡಿಕ್ಕಿ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ

ಹಾಸನ : ಮೀನು ಹಿಡಿಯಲು ಹೋಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ಸೇರಿದಂತೆ ಮೂವರು ಮೇಲೆ ಗುಂಡಿನ ದಾಳಿ ನಡೆದಿದ್ದು, ಓರ್ವ ಸ್ಥಳದಲ್ಲೇ ಓರ್ವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿ ತಂಬಲಗೇರಿ ಗ್ರಾಮದಲ್ಲಿ ನಿನ್ನೆ. ಸೋಮವಾರ ಮಧ್ಯರಾತ್ರಿ ನಡೆದ ಗುಂಡಿನ ದಾಳಿಯಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸರನ್ನು … Continued

ರೈಲು ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಸಾವು: ರೈಲ್ವೆ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಹಾಸನ: ಹಾಸನದಲ್ಲಿ ಇಂದು, ಸೋಮವಾರ ವಿದ್ಯಾರ್ಥಿನಿಯೊಬ್ಬಳು ಹಳಿ ಮೇಲೆ ಜಾರಿಬಿದ್ದು ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾಳೆ. ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವುದರೊಂದಿಗೆ ಈ ಅಪಘಾತವು ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದ ಪ್ರೀತಿ ಪುಟ್ಟಸ್ವಾಮಿ ಎಂಬ 22 ವರ್ಷದ … Continued

ಹಾಸನ: ದೇವಸ್ಥಾನದಲ್ಲಿ ವಿಗ್ರಹಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು; ಆರೋಪಿಗಳ ಬೆರಳಚ್ಚು ಸಂಗ್ರಹಿಸಿದ ಪೊಲೀಸರು

ಹಾಸನ: ಸೋಮವಾರ, ಮೇ 30 ರಂದು ಅಪರಿಚಿತ ವ್ಯಕ್ತಿಗಳು ಕರ್ನಾಟಕದ ಹಾಸನದಲ್ಲಿ ಹಿಂದೂ ದೇವತೆಗಳ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಮಲೆಕಲ್ಲು ತಿರುಪತಿ ದೇವಸ್ಥಾನದ ವಸ್ತುಸಂಗ್ರಹಾಲಯದ ವಸ್ತುಪ್ರದರ್ಶನ ಕೇಂದ್ರದಲ್ಲಿ ವಿಗ್ರಹಗಳನ್ನು ಇರಿಸಲಾಗಿತ್ತು. ಪೊಲೀಸರ ಪ್ರಕಾರ, 10 ಕ್ಕೂ ಹೆಚ್ಚು ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ. ಅರಸೀಕೆರೆ ತಾಲೂಕಿನಲ್ಲಿ ಪೊಲೀಸರು ಶ್ವಾನದಳವನ್ನು ನಿಯೋಜಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಪ್ರತಿಷ್ಠಾಪನೆಗೆ ಸಿದ್ಧವಾಗಿದ್ದ … Continued

ಪಿಎಸ್ಐ ನೇಮಕ ಪರೀಕ್ಷೆ ಹಗರಣದಲ್ಲಿ ಬಂಧನಕ್ಕೊಳಗಾದ ಆರೋಪಿಯ ಅಣ್ಣ ಆತ್ಮಹತ್ಯೆ

ಹಾಸನ: ಪಿಎಸ್‌ಐ ನೇಮಕ ಪರೀಕ್ಷೆ ಹಗರಣದಲ್ಲಿ ಬಂಧನಕ್ಕೊಳಗಾದ ಆರೋಪಿಯ ಅಣ್ಣ ಇಂದು, ಬುಧವಾರ ಆತ್ಮಹತ್ಯೆಗೆ ಶರಣಾದ ಘಟನೆ ಹೊಳೆನರಸೀಪುರ ತಾಲೂಕಿನ ಗುಂಜೇವು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗುಂಜೇವು ಗ್ರಾಮದ ಮನುಕುಮಾರ ಅವರ ಅಣ್ಣ, ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ ವಾಸು(48) ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದೆ. ಪಿಎಸ್‌ಐ … Continued

ಬಸ್‌-ಕಾರಿನ​ ನಡುವೆ ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ಸಾವು

ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ಹಾಸನ – ಬೇಲೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಆಲ್ಟೊ ಕಾರು ನಡುವೆ ಡಿಕ್ಕಿ ಸಂಭವಿಸಿ ಐವರು ಯುವಕರು ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತಪರನ್ನು ವಿದ್ಯಾರ್ಥಿಗಳಾದ ಅಕ್ಮಲ್(18), ಜಿಲಾನಿ(19), ತೋಹಿದ್(18), ಕೈಫ್ (18) ಎಂಬವರು ಸ್ಥಳದಲ್ಲೇ ಮೃತಪಟ್ಟರೆ, ರಿಹಾನ್ (19) ಆಸ್ಪತ್ರೆಗೆ ಸಾಗಿಸುವಾಗ … Continued