ವೀಡಿಯೊ…| ಹಾಸನ : ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಅಟ್ಟಿಸಿಕೊಂಡು ಬಂದ ಕೋಪಗೊಂಡ ಕಾಡಾನೆ ; ಸ್ವಲ್ಪದರಲ್ಲೇ ಪಾರು…

ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಇಬ್ಬರು ಅರಣ್ಯಾಧಿಕಾರಿಗಳನ್ನು ಕಾಡು ಆನೆಯೊಂದು ಅಟ್ಟಿಸಿಕೊಂಡು ಹೋದ ಆಘಾತಕಾರಿ ಘಟನೆ ನಡೆದಿದ್ದು, ಇಬ್ಬರು ಅರಣ್ಯಾಧಿಕಾರಿಗಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಆನೆ ತನ್ನತ್ತ ಧಾವಿಸಿ ಬರುತ್ತಿದ್ದರೂ ಕ್ಯಾಮರಾಮನ್ ಪ್ರಾಣಕ್ಕೂ ಲೆಕ್ಕ ಕೊಡದೆ ಧೈರ್ಯವಾಗಿ ನಿಂತು ಘಟನೆಯನ್ನು ಚಿತ್ರೀಕರಿಸಿದ್ದಾರೆ. ಹಾಸನದ ಬೇಲೂರು ತಾಲೂಕಿನ ಗ್ರಾಮದಲ್ಲಿ ಕಾಡು ಆನೆಯೊಂದು ದಾರಿ ತಪ್ಪಿ ಕೃಷಿ ಭೂಮಿಗೆ ನುಗ್ಗಿದೆ. ಅರಣ್ಯ … Continued

ಹಾಸನ : ಕಾಡಾನೆ ದಾಳಿಗೆ ವೃದ್ಧ ಸಾವು; ಕೊಂದ ನಂತರ ಶವ ಮುಚ್ಚಿಟ್ಟು ಹೋದ ಆನೆ…!

ಹಾಸನ: ಕಾಡಾನೆಯೊಂದು (Elephant) ವೃದ್ಧನ ಮೇಲೆ ಏಕಾಏಕಿ ದಾಳಿ ನಡೆಸಿ ಕೊಂದು, ಶವದ ಮೇಲೆ ಕಾಫಿ ಗಿಡ ಮುಚ್ಚಿದ ಘಟನೆ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾಡಾನೆ ದಾಳಿಗೆ ಬಲಿಯಾದ ವೃದ್ಧರನ್ನು ಪುಟ್ಟಯ್ಯ (78) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ … Continued

ಅಧಿಕಾರ ವಹಿಸಿಕೊಳ್ಳಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು

ಬೆಂಗಳೂರು: ಇತ್ತೀಚೆಗಷ್ಟೇ ತರಬೇತಿ ಮುಗಿಸಿದ್ದ ಕರ್ನಾಟಕದ ಯುವ ಐಪಿಎಸ್ ಅಧಿಕಾರಿಯೊಬ್ಬರು ಭಾನುವಾರ ಹಾಸನ ಜಿಲ್ಲೆಯಲ್ಲಿ ಮೊದಲ ಪೋಸ್ಟಿಂಗ್‌ಗೆ ತೆರಳುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ 9:30ರ … Continued

ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ ಸಿದ್ದರಾಮಯ್ಯ

ಹಾಸನ : ಹಾಸನದ ಅಧಿದೇವತೆಯಾದ ಹಾಸನಾಂಬೆಯ ದರ್ಶನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ. ತಾಯಿ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಅರ್ಚನೆ ಮಾಡಿಸಿದ್ದಾರೆ ಎಂದು ವರದಿಯಾಗಿದೆ. ಹಾಸನಾಂಬೆ ದೇವಿ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ ಪೂಜೆ ಮಾಡುವುದು ವಾಡಿಕೆಯಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡ್ಗಮಾಲಾ ಸ್ತೋತ್ರದ ಮೂಲಕ ದೇವಿಯನ್ನು ಅರ್ಚಿಸಿದ್ದು ವಿಶೇಷವಾಗಿತ್ತು. ಖಡ್ಗಮಾಲಾ ಸ್ತೋತ್ರ ಶಕ್ತಿ ದೇವಿಯ ಅತ್ಯಂತ … Continued

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ; ಆಸ್ಪತ್ರೆಗೆ ದಾಖಲು

ಹಾಸನ: ದೇವಸ್ಥಾನಕ್ಕೆ ಹೋದಾಗ ಕಾಲು ಜಾರಿ ಬಿದ್ದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದ ಹೊಳೆನರಸೀಪುರ ಶಾಸಕ ಎಚ್‌.ಡಿ.ರೇವಣ್ಣ ಅವರು ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ತೆರಳಿದ್ದರು. ಹರದನಹಳ್ಳಿಯಲ್ಲಿ ಪೂಜೆಯ ಬಳಿಕ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ … Continued

ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಬುಧವಾರ ಜಾಮೀನು ನಿರಾಕರಿಸಿದೆ. ಪ್ರಜ್ವಲ್‌ ರೇವಣ್ಣರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಮಂಗಳವಾರ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಬುಧವಾರ ಪ್ರಕಟಿಸಿದ್ದಾರೆ. ಪ್ರಜ್ವಲ್‌ … Continued

ಸೂರಜ್ ರೇವಣ್ಣ ವಿರುದ್ಧ 2ನೇ ಪ್ರಕರಣ ದಾಖಲು

ಹಾಸನ: ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, 2ನೇ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸೂರಜ್ ರೇವಣ್ಣ ವಿರುದ್ಧ ಎರಡನೇ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಸೂರಜ್ ರೇವಣ್ಣ ಅವರ ಆಪ್ತ ನೀಡಿದ ದೂರಿನ ಮೇರೆಗೆ ಪ್ರಕರಣ … Continued

ಯುವಕನಿಗೆ ಲೈಂಗಿಕ ಕಿರುಕುಳ ಪ್ರಕರಣ : ಸೂರಜ್‌ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ

ಬೆಂಗಳೂರು : ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಶಾಸಕ ಎಚ್‌.ಡಿ. ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಕೋರ್ಟ್‌ 8 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಪ್ರಕರಣವನ್ನು ಭಾನುವಾರ ಸಿಐಡಿಗೆ ವಹಿಸಿಸಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. … Continued

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಜೆಡಿಎಸ್ ಕಾರ್ಯಕರ್ತನೆನ್ನಲಾದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣದಲ್ಲಿ ವಿಧಾನ ಪರಿಷತ್‌ ಸದಸ್ಯ ಡಾ. ಸೂರಜ್‌ ರೇವಣ್ಣ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಭಾನುವಾರ ಬೆಳಿಗ್ಗೆ ಹಾಸನದಲ್ಲಿ ಬಂಧಿತರಾದ ಶಾಸಕ ರೇವಣ್ಣ ಅವರ ಪುತ್ರ ಸೂರಜ್‌ ರೇವಣ್ಣ ಅವರನ್ನು ಸಂಜೆ … Continued

ಸೂರಜ್​ ರೇವಣ್ಣ ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು : ಜೆಡಿಎಸ್‌ ಕಾರ್ಯಕರ್ತನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದಲ್ಲಿರುವ ಜೆಡಿಎಸ್​ ವಿಧಾನ ಪರಿಷತ್ ಸದಸ್ಯ ಹಾಗೂ ಶಾಸಕ ರೇವಣ್ಣ ಎಚ್‌.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ ರೇವಣ್ಣ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಭಾನುವಾರ (ಜೂನ್‌ 23) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸೂರಜ್‌ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ … Continued