ಕಾರು ಅಪಘಾತದ ಬಳಿಕ ಉತ್ತರಾಧಿಮಠ ಶ್ರೀಗಳಿಗೆ ಚಿಕಿತ್ಸೆ-ಚೇತರಿಕೆ, ಆಸ್ಪತ್ರೆಯಿಂದ ಬಿಡುಗಡೆ-ಭಕ್ತರಿಗೆ ವಿಡಿಯೋ ಸಂದೇಶ

ಹುಬ್ಬಳ್ಳಿ : ಉತ್ತರಾದಿ ಮಠದ ಪೀಠಾಧಿಪತಿ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಪ್ರಯಾಣಿಸುತ್ತಿದ್ದ ಕಾರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ಸಮೀಪದ ಪಿಬಿ ರಸ್ತೆಯಲ್ಲಿ ರಸ್ತೆ ವಿಭಜಕಕ್ಕೆ (ಮೀಡಿಯನ್) ಡಿಕ್ಕಿ ಹೊಡೆದಿದೆ. . ಕಾರು ಅಪಘಾತದ ಬಳಿಕ ಶ್ರೀಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಈಗ ಡಿಸ್ಚಾರ್ಜ್‌ ಚೇತರಿಸಿಕೊಂಡಿದ್ದಾರೆ. ಅವರ ಪರಿವಾರದವರೂ ಆರೋಗ್ಯವಾಗಿದ್ದು, ಸ್ವತಃ ಶ್ರೀಗಳು ವಿಡಿಯೋ ಸಂದೇಶ … Continued

ಕಲ್ಲು ಕ್ವಾರಿ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ.ದಂಡ

ಹಾವೇರಿ: ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸಿದ್ದ ಆರೋಪದಡಿ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜ್ಯದ ಸಕ್ಕರೆ  ಹಾಗೂ ಜವಳಿ ಕಾತೆ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಸುಮಾರು ₹3 ಕೋಟಿ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹುಣಸಿಕಟ್ಟಿ ಬಳಿಯಲ್ಲಿ ಕ್ವಾರಿ ನಡೆಸಲು ರುದ್ರಪ್ಪ ಲಮಾಣಿ ಅವರು … Continued

ಶಿಗ್ಗಾವಿ | ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ ಆರೋಪ; ವ್ಯಕ್ತಿಯ ಬಂಧನ

ಶಿಗ್ಗಾವಿ: ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಆಂಜನೇಯ ದೇವಸ್ಥಾನದ ಆವರಣದಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಶಿಗ್ಗಾವಿ ಪಟ್ಟಣದಲ್ಲಿ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ ಹಾನಗಲ್ ಪಟ್ಟಣದ ನಿವಾಸಿ ಎನ್ನಲಾಗಿರುವ ಮಹಮ್ಮದ್ ಜಾಫರ್ ಖದರಮಂಡಲಗಿ ಎಂಬಾತನ ವಿರುದ್ಧ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು … Continued

ವೀಡಿಯೊ | ಹಾವೇರಿ : ಬಸ್‌ ನಿಲ್ದಾಣದ ಪ್ಲಾಟ್​ಫಾರ್ಮಿಗೆ ನುಗ್ಗಿದ ಬಸ್‌ ; ಮಗು ಸಾವು, ನಾಲ್ವರಿಗೆ ಗಾಯ

ಹಾವೇರಿ: ಹಾವೇರಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾರಿಡಾರ್‌ಗೆ ನುಗ್ಗಿ ಬಸ್ ಡಿಕ್ಕಿ ಹೊಡೆದಿದ್ದರಿಂದ ತೀವ್ರವಾಗಿ ಗಾಯಗೊಂಡ ಎರಡೂ ವರ್ಷದ ಮಗು ಮೃತಪಟ್ಟ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ದುರ್ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾವೇರಿ-ಲಕ್ಷ್ಮೇಶ್ವರ ಬಸ್‌ ಅತಿವೇಗದಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿ, ಪ್ಲಾಟ್‌ ಫಾರ್ಮ್‌ಗೆ ನುಗ್ಗಿ ಮುಂದೆ … Continued

ಶಿಗ್ಗಾಂವಿ ಬಳಿ ಅಪಘಾತ; ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ಸಾವು

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇತ್ತೀಚೆಗಷ್ಟೇ ವಿವಾಹವಾಗಿದ್ದ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಶಿಗ್ಗಾಂವಿ ಸಮೀಪದ ಅಂಬುಜಾ ಫ್ಯಾಕ್ಟರಿ ಬಳಿ ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ದೇವರ ದರ್ಶನ ಮುಗಿಸಿಕೊಂಡು ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಮುಂಜಾನೆ … Continued

ಹಾವೇರಿ | ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ; ಹೋರಿ ತಿವಿದು ಮೂವರು ಸಾವು

ಹಾವೇರಿ: ದೀಪಾವಳಿ ಹಬ್ಬದ ನಿಮಿತ್ತ ಹಾವೇರಿ ಜಿಲ್ಲೆಯ ವಿವಿಧೆಡೆ ಬುಧವಾರ ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಹಾಯ್ದು ಮೂವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹಾವೇರಿಯ ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ ಹೆಸ್ಕಾಂ ನಿವೃತ್ತ ನೌಕರ ಚಂದ್ರಶೇಖರ ಕೋಡಿಹಳ್ಳಿ (75) ಎಂಬವರು ಮನೆಗೆ ಹೊರಟಿದ್ದ ವೇಳೆ … Continued

ಹಾವೇರಿ | ನೀರು ಹಾಯಿಸಲು ಹೋದ ಸಹೋದರರ ಮೇಲೆ ಚಿರತೆ ದಾಳಿ ; ಓರ್ವ ಸಾವು

ಹಾವೇರಿ: ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ್ದು, ಓರ್ವ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ರಟ್ಟಿಹಳ್ಳಿ ತಾಲೂಕು ಕಣವಿಶಿದ್ಗೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಿರತೆ ದಾಳಿಯಿಂದ ಬೀರಪ್ಪ ಹನುಮಂತಪ್ಪ ಬಳಗಾವಿ(30) ಎಂಬವರು ಮೃತಟ್ಟಿದ್ದಾರೆ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಸಹೋದರ ಗಣೇಶ ಬಳಗಾವಿ ಎಂಬವರು ಗಂಭೀರ ಗಾಯಗೊಂಡಿದ್ದಾರೆ. … Continued

ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ | ಆರೋಪಿಗಳಿಗೆ ಜಾಮೀನು; ಹಿಂಬಾಲಕರೊಂದಿಗೆ ರೋಡ್ ಶೋ…!

ಹಾವೇರಿ: 2024ರ ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ್ದು, ಜೈಲಿನಿಂದ ಬಿಡುಗಡೆಗೊಂಡ ಎಲ್ಲಾ ಆರೋಪಿಗಳು ವಿಜಯೋತ್ಸವ ಆಚರಿಸಿದ್ದು, ಹಾವೇರಿಯಿಂದ ಅಕ್ಕಿ ಆಲೂರುವರೆಗೆ ರೋಡ್‌ ಶೋ ನಡೆಸಿರುವ ಘಟನೆ ನಡೆದಿರುವುದು ವರದಿಯಾಗಿದೆ. ಇದರ ನಂತರ ಜಾಮೀನಿನನ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಹಾಗೂ … Continued

ಬಸ್‌ನಲ್ಲಿ ನಮಾಜ್‌ ಮಾಡಿದ ಚಾಲಕ ಅಮಾನತು ; ಕಾರ್ಮಿಕ ದಿನಾಚರಣೆಯಂದೇ ಸಸ್ಪೆಂಡ್‌

ಹುಬ್ಬಳ್ಳಿ : ಮಾರ್ಗ ಮಧ್ಯೆಯೇ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಾಲಕನನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. (ಮೇ 1), ಕಾರ್ಮಿಕರ ದಿನಾಚರಣೆಯಂದೇ ಚಾಲಕ ಅಮಾನತುಗೊಂಡಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರೊಬ್ಬರು ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ ಘಟನೆ ಚರ್ಚೆಗೆ ಗ್ರಾಸವಾಗಿತ್ತು. ಹಾನಗಲ್ (Hangal) … Continued

ಭೂಸ್ವಾಧೀನ ಪರಿಹಾರ ನೀಡದ ಆಡಳಿತ ; ಹಾವೇರಿ ಜಿಲ್ಲಾಧಿಕಾರಿ ಕಾರು ಜಪ್ತಿ

ಹಾವೇರಿ: ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ನಂತರ ಹಾವೇರಿ ಜಿಲ್ಲಾಧಿಕಾರಿಗಳ ಕಾರನ್ನೇ ಜಪ್ತಿ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ರುದ್ರಪ್ಪ ಬಸಪ್ಪ ಗುತ್ತಲ ಎಂಬವರ ಜಮೀನನ್ನು 1970ರಲ್ಲಿ ಸರ್ಕಾರದಿಂದ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲಾಧಿಕಾರಿಗಳು 2 ಎಕರೆ 29 ಗುಂಟೆ ಜಮೀನು ಭೂಸ್ವಾಧೀನಪಡಿಸಿಕೊಂಡು ಬಳಿಕ ಸಣ್ಣ ನೀರಾವರಿ ಇಲಾಖೆಗೆ … Continued