ಹಾವೇರಿ ಬಳಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ, 13 ಮಂದಿ ಸಾವು

ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿಂತಿದ್ದ ಲಾರಿಗೆ ಟೆಂಪೊ ಟ್ರಾವೆಲರ್‌ (ಟಿಟಿ) ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳು ಮಹಿಳೆಯರು, ಒಂದು … Continued

ರಾಣೇಬೆನ್ನೂರು: ತಿರುಪತಿಗೆ ಹೊರಟಿದ್ದ ಕಾರು ಅಪಘಾತ: ನಾಲ್ವರು ಸಾವು, 6 ಮಂದಿಗೆ ಗಾಯ

ಹಾವೇರಿ: ತಿರುಪತಿಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22) ಹಾಗೂ ಚೇತನಾ ಪ್ರಭುರಾಜ ಸಮಗಂಡಿ (7) ಸ್ಥಳದಲ್ಲೇ ಮೃತಪಟ್ಟಿದ್ದು, ಪ್ರಮೀಳಾ (28) ಎಂಬವರು ರಾಣೆಬೆನ್ನೂರು … Continued

ವೀಡಿಯೊ…| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

ಹಾವೇರಿ: ಚುನಾವಣಾ ಪ್ರಚಾರಕ್ಕೆಂದು ಹಾವೇರಿ ಜಿಲ್ಲೆಯ ಸವಣೂರಿಗೆ ಆಗಮಿಸಿದ ವೇಳೆ ತಮ್ಮ ಹೆಗಲ ಮೇಲೆ ಕೈಹಾಕಿದ ಸ್ಥಳೀಯ ಕಾಂಗ್ರೆಸ್​ ಮುಖಂಡನಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ (DK Shivakumar) ಕಪಾಳಮೋಕ್ಷ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕಾಂಗ್ರೆಸ್​ ಅಭ್ಯರ್ಥಿ ‌ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಡಿ.ಕೆ.ಶಿವಕುಮಾರ ತಮ್ಮ ಕಾರಿನಿಂದ ಇಳಿದು ಹೊರಬಂದಾಗ … Continued

ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ವಾಹನ ಡಿಕ್ಕಿ ; ಮೂವರು ಸಾವು

ಹಾವೇರಿ: ಕುರಿ ತುಂಬಿದ್ದ ಬೊಲೆರೊ ವಾಹನವೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ ಸುಮಾರು 20 ಕುರಿಗಳು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ಸಂಜೆ ಈ ಅಫಘಾತ ಸಂಭವಿಸಿದ್ದು, ಅಪಘಾತದಲ್ಲಿ ಮೃತಪಟ್ಟವರನ್ನು ರಾಣೆಬೆನ್ನೂರು ತಾಲೂಕಿನ … Continued

ಶಿವಮೊಗ್ಗದಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಎಂದು ಒತ್ತಡ ಬರ್ತಿದೆ ಎಂದ ಈಶ್ವರಪ್ಪ ಈ ಬಗ್ಗೆ ಹೇಳಿದ್ದೇನು..?

ಶಿವಮೊಗ್ಗ : ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ​ಅನ್ನು ಪುತ್ರ ಕಾಂತೇಶ ಅವರಿಗೆ ಕೊಡಿಸಲು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಈಶ್ವರಪ್ಪ ಪ್ರಯತ್ನ ನಡೆಸಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್​ ಹಾವೇರಿ ಕ್ಷೇತ್ರದಲ್ಲಿ ಟಿಕೆಟ್​ ಸಿಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಯಾಕೆಂದರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎಂದು … Continued

ಬ್ಯಾಡಗಿ : ಮೆಣಸಿನಕಾಯಿ ದರ ಕುಸಿತ ; ರೈತರಿಂದ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಹಾವೇರಿ : ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಸೋಮವಾರ ದರ ಕುಸಿತದ ನಂತರ ರೈತರ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಮಾರುಕಟ್ಟೆ ಆಡಳಿತ ಕಚೇರಿಗೆ ಕಲ್ಲುತೂರಿ, ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬ್ಯಾಡಗಿ ಒಣ ಮೆಣಸಿನಕಾಯಿ ಮಾರುಕಟ್ಟೆ ಅಂತಾರಾಷ್ಟ್ರೀಯ ಮಟ್ಟದ ಮಾರುಕಟ್ಟೆಯಾಗಿದೆ. ಪ್ರತಿ ಕ್ವಿಂಟಲ್ ಮೆಣಸಿನಕಾಯಿಗೆ ಕಳೆದ ವಾರ 20 ಸಾವಿರ ರೂ. … Continued

ಹಾನಗಲ್ಲ ನೈತಿಕ‌ ಪೊಲೀಸ್ ಗಿರಿ ಪ್ರಕರಣ : ಹಲ್ಲೆ ಆರೋಪಿಗಳ ವಿರುದ್ಧ ಗ್ಯಾಂಗ್ ರೇಪ್ ಪ್ರಕರಣ ದಾಖಲು

ಹಾವೇರಿ : ನೈತಿಕ‌ ಪೊಲೀಸ್ ಗಿರಿ ಪ್ರಕರಣದಲ್ಲಿ ಜಿಲ್ಲೆಯ ಹಾನಗಲ್ ನಲ್ಲಿ ಹೊಟೇಲ್ ವಾಸ್ತವ್ಯದ ವೇಳೆ ಹೋಟೆಲ್ ಕೋಣೆಗೆ ನುಗ್ಗಿ ಅಂತರ್‌ಧರ್ಮೀಯ ಜೋಡಿ ಮೇಲೆ ಹಲ್ಲೆ ನಡೆಸಿದ ಏಳು ಮಂದಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ ನಂತರ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಮಹಿಳೆಯ ಹಸ್ತಕ್ಷೇಪದಿಂದ ಸರ್ಕಾರಕ್ಕೆ ಇಕ್ಕಟ್ಟು : ದೇವರಗುಡ್ಡದ ಐತಿಹಾಸಿಕ ಕಾರ್ಣಿಕ ಭವಿಷ್ಯ

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ಮಾಲತೇಶ ದೇವರ ಕಾರ್ಣಿಕ ನುಡಿಯಲಾಗಿದೆ. ವರ್ಷದ ಭವಿಷ್ಯವಾಣಿ ಎಂದೇ ಪ್ರಸಿದ್ಧಿ ಪಡೆದಿರುವ ಮಾಲತೇಶ ದೇವರ ಕಾರ್ಣಿಕದಲ್ಲಿ ಕಾರಣಿಕ ನುಡಿಯುವ ಗೊರವಯ್ಯ ಸ್ವಾಮಿ ಈ ಬಾರಿ`ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’ ಎಂದು ದೈವವಾಣಿ ನುಡಿದಿದ್ದಾರೆ. ಬಿಲ್ಲನ್ನೇರಿದ ಗೊರವಪ್ಪ ನಾಗಪ್ಪ ಉರ್ಮಿ ಅವರು ಸೋಮವಾರ ಈ ಬಾರಿಯ ಕಾರ್ಣಿಕ … Continued

ಹಾವೇರಿ: ಪಟಾಕಿ ಗೋದಾಮಿನಲ್ಲಿ ಬೆಂಕಿ ಅನಾಹುತ ; ಮೂವರ ಸಜೀವ ದಹನ

ಹಾವೇರಿ: ಹಾವೇರಿ ಹೊರವಲಯದ ಸಾತೇನಹಳ್ಳಿ ಸಮೀಪದ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಮೂವರು ಸಜೀವವಾಗಿ ದಹನವಾಗಿದ್ದಾರೆ ಎಂದು ವರದಿಯಾಗಿದೆ. ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಭಾರಿ ಪ್ರಮಾಣದ ಸ್ಪೋಟ ಹಾಗೂ ಬೆಂಕಿ ಜ್ವಾಲೆಯಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ದ್ಯಾಮಪ್ಪ ಓಲೇಕಾರ, ರಮೇಶ ಬಾರ್ಕಿ, ಶಿವಲಿಂಗ ಅಕ್ಕಿ ಎಂದು ಗುರುತಿಸಲಾಗಿದೆ. ಇನ್ನೂ ಹಲವರಿಗೆ ಗಾಯಗಳಾಗಿವೆ … Continued

ಸೈಬರ್​ ವಂಚಕರು ಕಳುಹಿಸಿದ ಲಿಂಕ್​ ಕ್ಲಿಕ್​ ಮಾಡಿ ಹಣ ಕಳಕೊಂಡ ವಿವಿ ಕುಲಪತಿ

ಹಾವೇರಿ : ಶಿಗ್ಗಾವಿ ತಾಲೂಕಿನ ಗೊಟಗೋಡಿ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ. ಭಾಸ್ಕರ ಅವರಿಗೆ ಸೈಬರ್ ವಂಚಕರು 60 ಸಾವಿರ ರೂ. ಪಂಗನಾಮ ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದ ಕುರಿತು ಅವರೇ ಶಿಗ್ಗಾವಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಧ್ಯಾಹ್ನದ ಸಮಯದಲ್ಲಿ ಧಾರವಾಡ ಎಸ್‌ಬಿಐ ಬ್ಯಾಂಕ್‌ನ ನವೀಕುಮಾರ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನನಗೆ ಫೋನ್ ಮಾಡಿದ್ದ. … Continued