ಹಾವೇರಿ | ಲೋಕಾಯುಕ್ತ ದಾಳಿ ವೇಳೆ ಲಕ್ಷಗಟ್ಟಲೆ ನಗದು ಹಣ ಗಂಟುಕಟ್ಟಿ ಕಿಟಿಕಿಯಿಂದ ಹೊರಗೆ ಎಸೆದ ಅಧಿಕಾರಿ…!

ಹಾವೇರಿ: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಹೆದರಿದ ಅಧಿಕಾರಿಯೊಬ್ಬರು ನೋಟುಗಳ ಕಟ್ಟುಗಳನ್ನು ಗಂಟುಕಟ್ಟಿ ಹೊರಗೆಸೆದಿರುವ ವಿದ್ಯಮಾನ ಹಾವೇರಿಯಲ್ಲಿ ನಡೆದಿರುವುದು ವರದಿಯಾಗಿದೆ. ಹಾವೇರಿ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಹಿರೇಕೆರೂರು ಉಪವಿಭಾಗದ ಸಹಾಯಕ ಇಂಜಿನಿಯರ್ ಕಾಶಿನಾಥ ಭಜಂತ್ರಿ ಎಂಬವರು ಲೋಕಾಯುಕ್ತ ಅಧಿಕಾರಿಗಳ ದಾಳಿಯ ವೇಳೆ 9 ಲಕ್ಷ … Continued

ಸುಳ್ಳು ಸುದ್ದಿ ಹರಡಿದ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್

ಹಾವೇರಿ: ‘ನಕಲಿ ಸುದ್ದಿ’ ಹಬ್ಬಿಸಿದ ಆರೋಪದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಎರಡು ಕನ್ನಡ ಆನ್‌ಲೈನ್ ನ್ಯೂಸ್ ಪೋರ್ಟಲ್‌ಗಳ ಸಂಪಾದಕರ ಮೇಲೂ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಪಹಣಿಯಲ್ಲಿ ವಕ್ಫ್ (Waqf) ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ … Continued

ಬಿಜೆಪಿ ಅಧ್ಯಕ್ಷ ನಡ್ಡಾ ವಿರುದ್ಧ ಶಿಗ್ಗಾವಿಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ ಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಚುನಾವಣಾ ಪ್ರಚಾರದ ವೇಳೆ ನಡ್ಡಾ ಅವರು “ಬಿಜೆಪಿಗೆ ಮತ ನೀಡಿ … Continued

ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದ ಪ್ರಕರಣ: ಹಾವೇರಿಯಲ್ಲಿ ಆರೋಪಿ ಬಂಧನ

ಹಾವೇರಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿ​ಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ ಎಂಬಾತನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ. ಮುಂಬೈ ಪೊಲೀಸರ ಮಾಹಿತಿ ಮೇರೆಗೆ ಹಾವೇರಿ ಪೊಲೀಸರು ಕಾರ್ಯಚರಣೆ ನಡೆಸಿ ಬಿಕಾರಾಮನನ್ನು ಬಂಧಿಸಿದ್ದು, ಬಳಿಕ ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ರಾಜಸ್ತಾನ ಮೂಲದ ಬಿಕಾರಾಮ, ಒಂದೂವರೆ ತಿಂಗಳ ಹಿಂದೆ ಹಾವೇರಿಗೆ ಬಂದಿದ್ದ … Continued

ಎನ್‌ ಡಬ್ಲ್ಯು ಕೆ ಆರ್‌ ಟಿ ಸಿಯಿಂದ ಜೋಗ ಜಲಪಾತ, ಗೋಕಾಕ ಫಾಲ್ಸ್​, ದಾಂಡೇಲಿಗೆ ವಿಶೇಷ ʼಪ್ಯಾಕೇಜ್‌ ಟೂರ್ʼ

ಹುಬ್ಬಳ್ಳಿ : ಪ್ರಸ್ತುತ ಮಳೆಗಾಲದ ದಿನಗಳು ಪ್ರಾರಂಭವಾಗಿರುವುದರಿಂದ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಸ್ಥಳಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವಿವಿಧ ಘಟಕಗಳಿಂದ ಭಾನುವಾರ ಮತ್ತು ರಜಾ ದಿನಗಳಂದು ವಿಶೇಷ “ಪ್ಯಾಕೇಜ ಟೂರ್” ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ವಿಶೇಷ ಸಾರಿಗೆಗಳಲ್ಲಿ ಮಹಿಳಾ … Continued

ಭಾರೀ ಮಳೆಗೆ ಮನೆ ಗೋಡೆ ಕುಸಿತ ; ಅವಳಿ ಮಕ್ಕಳು ಸೇರಿ ಮೂವರು ಸಾವು

ಹಾವೇರಿ: ನಿರಂತರ ಮಳೆ ಹಿನ್ನೆಲೆ ಮನೆಯ ಮೇಲ್ಛಾವಣಿ ಕುಸಿದು ಮೂವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೆಲ ದಿನಗಳಿಂದ ಸುರಿದ ಮಳೆಗೆ ಮನೆ ಸೋರುತ್ತಿದ್ದು, ಶುಕ್ರವಾರ ಬೆಳಗ್ಗೆ ಗೋಡೆ ಕುಸಿದಿದೆ. ಒಂದೇ ಕೋಣೆಯಲ್ಲಿ ಮಲಗಿದ್ದ ಚೆನ್ನಮ್ಮ ಹರಕುಣಿ (30) ಹಾಗೂ ಆಕೆಯ ಅವಳಿ ಹೆಣ್ಣು ಮಕ್ಕಳಾದ … Continued

ಹಾವೇರಿ ಬಳಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ, 13 ಮಂದಿ ಸಾವು

ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಿಂತಿದ್ದ ಲಾರಿಗೆ ಟೆಂಪೊ ಟ್ರಾವೆಲರ್‌ (ಟಿಟಿ) ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳು ಮಹಿಳೆಯರು, ಒಂದು … Continued

ರಾಣೇಬೆನ್ನೂರು: ತಿರುಪತಿಗೆ ಹೊರಟಿದ್ದ ಕಾರು ಅಪಘಾತ: ನಾಲ್ವರು ಸಾವು, 6 ಮಂದಿಗೆ ಗಾಯ

ಹಾವೇರಿ: ತಿರುಪತಿಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಸುರೇಶ ವೀರಪ್ಪ ಜಾಡಿ (45), ಐಶ್ವರ್ಯ ಈರಪ್ಪ ಬಾರ್ಕಿ (22) ಹಾಗೂ ಚೇತನಾ ಪ್ರಭುರಾಜ ಸಮಗಂಡಿ (7) ಸ್ಥಳದಲ್ಲೇ ಮೃತಪಟ್ಟಿದ್ದು, ಪ್ರಮೀಳಾ (28) ಎಂಬವರು ರಾಣೆಬೆನ್ನೂರು … Continued

ವೀಡಿಯೊ…| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

ಹಾವೇರಿ: ಚುನಾವಣಾ ಪ್ರಚಾರಕ್ಕೆಂದು ಹಾವೇರಿ ಜಿಲ್ಲೆಯ ಸವಣೂರಿಗೆ ಆಗಮಿಸಿದ ವೇಳೆ ತಮ್ಮ ಹೆಗಲ ಮೇಲೆ ಕೈಹಾಕಿದ ಸ್ಥಳೀಯ ಕಾಂಗ್ರೆಸ್​ ಮುಖಂಡನಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ (DK Shivakumar) ಕಪಾಳಮೋಕ್ಷ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕಾಂಗ್ರೆಸ್​ ಅಭ್ಯರ್ಥಿ ‌ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಡಿ.ಕೆ.ಶಿವಕುಮಾರ ತಮ್ಮ ಕಾರಿನಿಂದ ಇಳಿದು ಹೊರಬಂದಾಗ … Continued

ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ವಾಹನ ಡಿಕ್ಕಿ ; ಮೂವರು ಸಾವು

ಹಾವೇರಿ: ಕುರಿ ತುಂಬಿದ್ದ ಬೊಲೆರೊ ವಾಹನವೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ ಸುಮಾರು 20 ಕುರಿಗಳು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ಸಂಜೆ ಈ ಅಫಘಾತ ಸಂಭವಿಸಿದ್ದು, ಅಪಘಾತದಲ್ಲಿ ಮೃತಪಟ್ಟವರನ್ನು ರಾಣೆಬೆನ್ನೂರು ತಾಲೂಕಿನ … Continued