ದೇವೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಜೋಶಿ
ಬೆಂಗಳೂರು: ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ದೇವೇಗೌಡರು ಜೋಶಿ ಅವರೊಂದಿಗೆ ಲವಲವಿಕೆಯಿಂದ ಮಾತನಾಡಿದ್ದಾರೆ. ಹಿರಿಯ ರಾಜಕೀಯ ಮುತ್ಸದ್ದಿ ದೇವೇಗೌಡರು ಶೀಘ್ರವೇ ಚೇತರಿಸಿಕೊಂಡು ಉತ್ತಮ ಆರೋಗ್ಯವಂತರಾಗಿರಲಿ ಎಂದು ಜೋಶಿ ಹಾರೈಸಿದರು. … Continued