ಜೆಡಿಎಸ್-ಬಿಜೆಪಿ ಮೈತ್ರಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ-ಕುಮಾರಸ್ವಾಮಿ

ನವದೆಹಲಿ: ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮ ಪುತ್ರರಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಎಚ್‌.ಡಿ.ರೇವಣ್ಣ ಅವರ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್‌ ಭವನದ ಪ್ರಧಾನಿಗಳ ಕಾರ್ಯಾಲಯದಲ್ಲಿ ಗುರುವಾರ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಸಿ.ಎನ್.ಬಾಲಕೃಷ್ಣ ಇದ್ದರು. ಕರ್ನಾಟಕದ ರಾಜಕೀಯ … Continued

ಜಾತಿ ಗಣತಿ ವರದಿಗೆ ಡಿಸಿಎಂ ಶಿವಕುಮಾರ ವಿರೋಧ; ವರದಿ ತಿರಸ್ಕರಿಸಬೇಕೆಂದು ಸಿಎಂಗೆ ಒತ್ತಾಯಿಸುವ ಮನವಿಗೆ ಸಹಿ : ಸ್ವೀಕರಿಸುವ ನಿರ್ಧಾರ ಅಚಲ ಎಂದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದ ಒಕ್ಕಲಿಗ ಸಮುದಾಯದ ರಾಜಕೀಯ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ತಮ್ಮ ಮೊದಲ ಅಧಿಕಾರಾವಧಿಯಲ್ಲಿ ನಡೆಸಿದ 2015 ರ ಜಾತಿ ಸಮೀಕ್ಷೆಯ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿದ್ದಾರೆ. ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿಲ್ಲ ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಒಕ್ಕಲಿಗ ನಾಯಕರು ಸಹಿ ಹಾಕಿರುವ ಪತ್ರದಲ್ಲಿ ಹೇಳಲಾಗಿದೆ. … Continued

ಪ್ರಧಾನಿ ನರೇಂದ್ರ ಮೋದಿ ಮಾತು ಕೇಳಿದ್ದರೆ 5 ವರ್ಷ ನಾನೇ ಸಿಎಂ ಆಗಿರುತ್ತಿದ್ದೆ : ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್​​ ಅನ್ನು ಪದೇ ಪದೇ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸುವ ಮುನ್ನ ಒಂದು ವಿಚಾರ ತಿಳಿದುಕೊಳ್ಳಿ. ಪ್ರಧಾನಿ ನರೇಂದ್ರ ಮೋದಿ ಅವರ ಮಾತನ್ನು ನಾನು ಅಂದು ಕೇಳಿದ್ದರೆ ನಾನು ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ … Continued

ಸೋಮವಾರ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

ರಾಮನಗರ : ಸೋಮವಾರ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದ ಕೇತಗಾನಹಳ್ಳಿಯಲ್ಲಿ ಇಂದು, ಸೋಮವಾರ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ಜೆಡಿಎಸ್ ಮುಳುಗಿಸಲು ಕಾಂಗ್ರೆಸ್‌ನವರು ನಮ್ಮ ಶಾಸಕರನ್ನ ಕರೆದುಕೊಂಡು ಹೋದರು. ಇದೀಗ ಕಾಂಗ್ರೆಸ್‌ನಿಂದಲೇ ಜೆಡಿಎಸ್‌ಗೆ ಬರುತ್ತಿದ್ದಾರೆ. ರಘು ಆಚಾರ್ ನಮ್ಮ ಜೊತೆ ಮಾತನಾಡಿದ್ದಾರೆ. ಜೆಡಿಎಸ್ … Continued

ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವವಿದೆ, ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಹಣ ನೀಡಿದ್ದೇನೆ: ಗೋಕರ್ಣದಲ್ಲಿ ಅರ್ಚಕರ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಎಚ್‌ಡಿಕೆ

ಗೋಕರ್ಣ: ನಾನು ಬ್ರಾಹ್ಮಣ ಸಮುದಾಯದ ವಿರೋಧಿಯಲ್ಲ,ನಾನು ಅಂತಹ ಹೇಳಿಕೆ ನೀಡಿಲ್ಲ ಎಂದು ಮಾಜಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ಬ್ರಾಹ್ಮಣ ಸಮುದಾಯದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆಯಿಂದ ವಿವಾದ ಭಿಗಿಲೆದ್ದಿದ್ದು, ಇಂದು, ಬುಧವಾರ ಉತ್ತರಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಹಂತದ ಪಂಚರತ್ನ ರಥಯಾತ್ರೆ ಪ್ರಾರಂಭಿಸುವ ಮುನ್ನ ಗೋಕರ್ಣದಲ್ಲಿರುವ … Continued

ಜೆಡಿಎಸ್‌ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದ್ರೆ ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ನೀಡಲು ಚಿಂತನೆ: ಕುಮಾರಸ್ವಾಮಿ

ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡುವ ಮುಕ್ತ ಅವಕಾಶ ಪಕ್ಷದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ತಾಲೂಕಿನ ಕ್ಯಾಲನೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಕುಮಾರಸ್ವಾಮಿ ದೆಹಲಿಗೆ ಹೋದರೆ ತಾವೇ ಮುಖ್ಯಮಂತ್ರಿ ಆಗಬಹುದೆಂದು ಸಿ.ಎಂ.ಇಬ್ರಾಹಿಂ ಕೂಡ ಹೇಳಿದ್ದಾರೆ. ಈ ರೀತಿ ಚರ್ಚೆ ಮಾಡಲು ಅವಕಾಶ … Continued

ಇಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ನಮ್ಮ ಪಕ್ಷದ ಜ್ಯೋತಿಷಿ ರೇವಣ್ಣಬೇಡ ಅಂದ್ರು : ಕುಮಾರಸ್ವಾಮಿ

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆ ಗೆ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂದಾಗಿದ್ದರೂ ಪಟ್ಟಿ ಬಿಡುಗಡೆಗೆ ಕುಮಾರಸ್ವಾಮಿ ಸಹೋದರ ಹಾಗೂ ಮಾಜಿ ಸಚಿವ ಎಚ್​.ಡಿ.ರೇವಣ್ಣ ಈಗ ಬೇಡ ಎಂದು ಹೇಳಿದ್ದರಿಂದ ಪಟ್ಟಿ ಬಿಡುಗಡೆ ಮುಂದಕ್ಕೆ ಹೋಗಿದೆ. ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ, ಅವರ ಮಾತಿನಂತೆ ಇಂದು ಜೆಡಿಎಸ್​ … Continued