ಅಕ್ರಮ ವಿದ್ಯುತ್ ಸಂಪರ್ಕ : ಅಚಾತುರ್ಯಕ್ಕೆ ನನ್ನ ವಿಷಾದವಿದೆ, ದಂಡ ಕಟ್ಟುತ್ತೇನೆ; ಕುಮಾರಸ್ವಾಮಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್​ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಸ್ಪಷ್ಟನೆ ನೀಡಿರುವ ಅವರು, ಈ ಅಚಾತುರ್ಯಕ್ಕೆ … Continued

ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ ಯತ್ನ ಪ್ರಕರಣ : ಸದನದಲ್ಲಿ ಕೋಲಾಹಲ, ಸಚಿವ ಚೆಲುವರಾಯಸ್ವಾಮಿ ರಾಜೀನಾಮೆಗೆ ಒತ್ತಾಯ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಆತ್ಮಹತ್ಯೆ ಯತ್ನದ ಪ್ರಕರಣ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅವರ ರಾಜೀನಾಮೆಗೆ ಆಗ್ರಹಿಸಿದರು. ಶೂನ್ಯ ವೇಳೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,‌ ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡದಿಂದ … Continued

ಪೆನ್ ಡ್ರೈವ್ ಹೊರಬಂದರೆ ಸಚಿವರೊಬ್ಬರು ರಾಜೀನಾಮೆ ನೀಡಬೇಕಾಗ್ತದೆ: ಮತ್ತೊಂದು ಬಾಂಬ್‌ ಸಿಡಿಸಿದ ಎಚ್‌ಡಿಕೆ

ಮೈಸೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪದ ನಂತರ ರಾಜ್ಯದಲ್ಲಿ ವರ್ಗಾವಣೆ ದಂಧೆ ಬಗ್ಗೆ ಚರ್ಚೆ ನಡೆಯುತ್ತಿದೆ.. ಈಗ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ. ನಾನು ಪೆನ್ ಡ್ರೈವ್ ನಲ್ಲಿ ಇರುವುದನ್ನು ಬಿಡುಗಡೆ ಮಾಡಿದ್ರೆ ಸಚಿವರೊಬ್ಬರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಸೂಕ್ತ ಸಮಯದಲ್ಲಿ ಪೆನ್ … Continued

ಪಕ್ಷದ ಅಭ್ಯರ್ಥಿಯಿದ್ರೂ ಕಾಂಗ್ರೆಸ್ಸಿಗೆ ಬೆಂಬಲಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ ಜೆಡಿಎಸ್‌ ಮುಖಂಡ ಭೋಜೇಗೌಡ…!

ಚಿಕ್ಕಮಗಳೂರು: ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಪ್ತ ಹಾಗೂ ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎಂಬುದೀಗ ಚರ್ಚೆಗೆ ಗ್ರಾಸವಾಗಿದೆ. ಆ ಮೂಲಕ ತಮ್ಮದೇ ಪಕ್ಷದ ಅಭ್ಯರ್ಥಿಗೆ ಶಾಕ್ ನೀಡಿದ್ದಾರೆ. ಎಸ್.ಎಲ್.ಭೋಜೇಗೌಡರು ಕಾಂಗ್ರೆಸ್ ಬೆಂಬಲಿಸುವಂತೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರು ಕ್ಷೇತ್ರದ … Continued

ತೆಲಂಗಾಣ ಸಿಎಂರಿಂದ ನಾಳೆ ರಾಷ್ಟ್ರೀಯ ಪಕ್ಷ ಘೋಷಣೆ : ಶಾಸಕರ ಜೊತೆ ಹೈದರಾಬಾದ್ ತೆರಳಿದ ಹೆಚ್​ಡಿಕೆ

ಬೆಂಗಳೂರು: ಕೆ.ಚಂದ್ರಶೇಖರ ರಾವ್‌ ಭಾರತ ರಾಷ್ಟ್ರ ಸಮಿತಿ ಪಕ್ಷ ಸ್ಥಾಪನೆ ಮಾಡಲಿರುವ ಹಿನ್ನೆಲೆ 20 ಶಾಸಕರ ಜೊತೆ ವಿಶೇಷ ವಿಮಾನದ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೈದರಾಬಾದ್​ಗೆ ತೆರಳಿದ್ದಾರೆ. ನಾಳೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೂತನ ರಾಷ್ಟ್ರೀಯ ಪಕ್ಷ ಘೋಷಣೆ ಮಾಡಲಿದ್ದಾರೆ. ಆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ. ಪಕ್ಷ ಸ್ಥಾಪನೆ ಬಗ್ಗೆ ಕೆಲ … Continued

ಜನತಾ ಜಲಧಾರೆ: ಬೃಹತ್‌ ಸಮಾವೇಶದಲ್ಲಿ ಜೆಡಿಎಸ್‌ನಿಂದ ಚುನಾವಣಾ ಕಹಳೆ

ನೆಲಮಂಗಲ (ಬೆಂಗಳೂರು): ಮುಂದಿನ ಜೂನ್‌, ಜುಲೈ ತಿಂಗಳಿನಲ್ಲಿ ಮತ್ತೊಂದು ಸುತ್ತಿನ ರಥ ಯಾತ್ರೆ ಮಾಡುತ್ತೇನೆ. ಮೂರು ತಿಂಗಳ ಕಾಲ ಹಳ್ಳಿ ಹಳ್ಳಿಗಳಿಗೆ ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಜನತಾ ಜಲಧಾರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ನಾಡಿನ ಜನತೆಯ ಹಿತವನ್ನು ದೃಷ್ಟಿಯಲ್ಲಿ ಪಂಚರತ್ನ ಯೋಜನೆಗಳನ್ನು ರೂಪಿಸಿ ಜನತೆಯ ಮುಂದೆ … Continued

ಮೇ 13ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಜಲಧಾರೆ ಸಮಾರೋಪ ಸಮಾರಂಭ, 4 ಲಕ್ಷ ಜನ ಸೇರುವ ನಿರೀಕ್ಷೆ: ಎಚ್‌ಡಿಕೆ

ಬೆಂಗಳೂರು: ಜೆಡಿಎಸ್ ‘ಜನತಾ ಜಲ ಧಾರೆ’ ಸಮಾರೋಪ ಸಮಾರಂಭ ಮೇ 13 ರಂದು ನಡೆಯಲಿದ್ದು, 4 ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆಗಳ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ರಾಜ್ಯದ ಪ್ರಮುಖ ನದಿಗಳ ನೀರನ್ನು ಸಂಗ್ರಹಿಸಿ ಆರಂಭ … Continued

ಯಡಿಯೂರಪ್ಪ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ: ಕುಮಾರಸ್ವಾಮಿ

ಮೈಸೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ. ಯಡಿಯೂರಪ್ಪ ಮಾತ್ರ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಹಿರಂಗವಾಗಿಯೇ ನಮಗೆ ಯಾರ ಬೆಂಬಲ ಬೇಡ ಎಂದು ಹೇಳಿದೆ. ಬೆಂಬಲ ಬೇಡ ಎಂದವರಿಗೆ ನಾವೇ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ. … Continued

ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ, ಬಾಯಿಬಿಟ್ರೆ ಅದು ಬೇರೆಯಾಗುತ್ತೆ: ಯತ್ನಾಳ್

ವಿಜಯಪುರ: ಉಪಚುನಾವಣೆ ಪ್ರಚಾರ ಸಮರ ತಾರಕಕ್ಕೇರಿದ್ದು, ಬಿಜೆಪಿಯಿಂದ ಕಾಂಗ್ರೆಸ್​ ವರಿಷ್ಠ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಮುಂದುವರಿರುವ ಬೆನ್ನಿಗೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಹುಲ್​ ಗಾಂಧಿಯದ್ದು ಹುಚ್ಚರ ಕಂಪನಿ ಎಂದು ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಹಾಗೂ ಆಲಮೇಲದಲ್ಲಿ ಪ್ರಚಾರದ ವೇಳೆ ಮಾತನಾಡಿದ ಅವರು, ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ. ಬಾಯಿಬಿಟ್ಟರೆ … Continued

ಕಲಬುರಗಿ ಪಾಲಿಕೆ ಅಧಿಕಾರಕ್ಕೆ ಬಿಜೆಪಿ-ಕಾಂಗ್ರೆಸ್‌ ಕಸರತ್ತು: ಎಚ್‌ಡಿಕೆ ಜೊತೆ ಬೊಮ್ಮಾಯಿ, ದೇವೇಗೌಡರ ಜೊತೆ ಖರ್ಗೆ ಮಾತುಕತೆ- ಆದ್ರೆ ಗುಟ್ಟುಬಿಟ್ಟುಕೊಡದ ಜೆಡಿಎಸ್‌

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆ ಒಟ್ಟು 55 ಸದಸ್ಯರ ಬಲ ಹೊಂದಿದ್ದು, ಆದರೆ ಪಾಲಿಕೆ ಚುನಾವಣಾ ಫಲಿತಾಂಶದಲ್ಲಿ ಹಾಂಗ್ರೆಸ್‌ ಹಾಗೂ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಹೀಗಾಗಿ ಕೇಔಲ ನಾಲ್ಕು ಸ್ಥಾನಗಳನ್ನು ಗೆದ್ದಿದ್ದರೂ ಜೆಡಿಎಸ್‌ಗೆ ಈಗ ಎಲ್ಲಿಲ್ಲದ ಮಹತ್ವ ಬಂದಿದೆ. ಕಾಂಗ್ರೆಸ್ 27 ವಾರ್ಡ್‌ಗಳಲ್ಲಿ, ಬಿಜೆಪಿ 23 ಮತ್ತು ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಗೆದ್ದರೆ ಒಂದು … Continued