ಜೆಡಿಎಸ್‌ಗೆ ಜಿಟಿಡಿಗೆ ಮತ್ತೆ ಸ್ವಾಗತವಿಲ್ಲ:ಎಚ್‌ಡಿಕೆ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರನ್ನು ಮತ್ತೆ ಜೆಡಿಎಸ್ಗೆ ಕರೆತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಶಾಸಕ ಜಿ.ಟಿ. ದೇವೇಗೌಡರು ನಮ್ಮಿಂದ ದೂರ ಹೋಗಿದ್ದಾರೆ. ಜೆಡಿಎಸ್ ಶಾಸಕ ಸಾರಾ ಮಹೇಶ್ ಕಾರಣಕ್ಕೆ ದೂರವಾಗುತ್ತಿದ್ದೇನೆ ಎಂದು ಹೇಳಿದ್ದರು. ಜಿ.ಟಿ. ದೇವೇಗೌಡರಿಗೆ ಮಹೇಶ್ ಅವರು ಅಂತಹದ್ದೇನು ಮಾಡಿದ್ದಾರೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ನನ್ನ … Continued

ದೇವೇಗೌಡರು ಬೆಳೆಸಿದವರೆಲ್ಲ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ: ಎಚ್‌ಡಿಕೆ

ಮೈಸೂರು: ಅಧಿಕಾರ ಅನುಭವಿಸಿ ನಂತರ ಪಕ್ಷ ಬಿಟ್ಟು ಹೋಗುವುದು ದೇವೇಗೌಡರ ಕುಟುಂಬಕ್ಕೆ ಹೊಸದೇನು ಅಲ್ಲ, ದೇವೇಗೌಡರು ಯಾರ್ಯಾರನ್ನೆಲ್ಲ ಬೆಳೆಸಿದ್ದರೋ ಅವರೇ ಬೆನ್ನಿಗೇ ಚೂರಿ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಬಾಗಿಲು ತೆರೆದುಕೊಂಡೇ ಇದೆ. ಹೀಗಾಗಿ ಹೋಗುವವರು ಹೋಗಬಹುದು, ಬರುವವರು ಬರಬಹುದು. ಪಕ್ಷ ಬಿಡುವವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ … Continued

ರಮೇಶ್ ಜಾರಕಿಹೊಳಿ ಪಾಪ ಅಮಾಯಕರು, ರಾಜಕಾರಣಕ್ಕಾಗಿ ಈ ಮಟ್ಟಕ್ಕೆ ಇಳಿಯಬಾರದು:ಎಚ್‌ಡಿಕೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಪಾಪ ಅಮಾಯಕರಿದ್ದಾರೆ, ರಾಜಕಾರಣಕ್ಕಾಗಿ ಯಾರೂ ಈ ಮಟ್ಟಕ್ಕೆ ಇಳಿಯಬಾರದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 12 ಜನ ಮುಂಬೈಗೆ ಹೋಗಿದ್ದರು. ಮುಂಬೈಗೆ ಹೋಗಿ ಆ ಪುಣ್ಯಾತ್ಮರು ಏನು ಮಾಡಿದ್ದಾರೋ? ರಾಜಕಾರಣಕ್ಕಾಗಿ ಯಾರೂ ಈ ಮಟ್ಟಕ್ಕೆ ಇಳಿಯಬಾರದು. ಇಂಥದನ್ನು ಯಾರೂ ಮಾಡಬಾರದು. 6 ಸಚಿವರು ನ್ಯಾಯಾಲಯಕ್ಕೆ ಹೋಗಿದ್ದಾರೆ. … Continued

ದೂರು ವಾಪಸ್‌, ಸರ್ಕಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬಹುದು: ಎಚ್‌ಡಿಕೆ

ಕೋಲಾರ: ದಿನೇಶ್ ಕಲ್ಹಳ್ಳಿ ಯಾವ ಕಾರಣಕ್ಕಾಗಿ ದೂರು ಹಿಂಪಡೆದಿದ್ದಾರೆ ಎಂಬುದು ತಿಳಿದಿಲ್ಲ. ಮಾಜಿ ಮುಖ್ಯಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಪ್ರಕರಣದ ಬಗ್ಗೆ ಸರ್ಕಾರಕ್ಕೆ ಹೊಣೆಗಾರಿಕೆಯಿದ್ದು, ಸರ್ಕಾರವೇ ಈ ಪ್ರಕರಣದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಬಹುದು. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಸಹ್ಯಕರ ಘಟನೆಗಳು‌ ನಡೆಯುತ್ತಿವೆ. ಸರ್ಕಾರವು ಜನತೆಗೆ ವಿಶ್ವಾಸ ಮೂಡಿಸುವ‌ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ದಿನೇಶ … Continued

ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದ ಮಾಹಿತಿಯಿದೆ: ಎಚ್‌ಡಿಕೆ ಬಾಂಬ್‌…!

ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಾಂಬ್‌ ಸಿಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೂರು ತಿಂಗಳಿಂದ ಈ‌ ಡೀಲ್ ವ್ಯವಹಾರ ನಡೆದಿದೆ. ದೊಡ್ಡ ದೊಡ್ಡವರೇ ಈ ಪ್ರಕರಣದಲ್ಲಿ … Continued

ಸಿಡಿ ಇದ್ದರೆ ಬಿಡುಗಡೆ ಮಾಡ್ಲಿ: ಯೋಗೀಶ್ವರಗೆ ಎಚ್‌ಡಿಕೆ ಸವಾಲು

ರಾಮನಗರ : ಸಚಿವ ಸಿ.ಪಿ‌.ಯೋಗೇಶ್ವರ್ ಮಟ್ಟಕ್ಕೆ ನಾನು ಇಳಿಯಲಾರೆ. ಅವರ ಬಳಿ ಅದೇನೋ ಸಿಡಿ ಇದ್ದರೆ ನಾಳೆಯೇ ಬಿಡುಗಡೆ ಮಾಡಲಿ. ಚನ್ನಪಟ್ಟಣ ಇಲ್ಲ ಎಲ್ಲಾದರೂ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಮಾಡುವುದು ಅವರೊಬ್ಬರಿಗೇ ಅಲ್ಲ, ನನಗೂ ಗೊತ್ತಿದೆ. ಸಚಿವ ಯೋಗೀಶ್ವರ್ ಹೇಳಿರುವಂತ ಆ ಸವಾಲನ್ನ … Continued

ಹಿರೇನಾಗವಲ್ಲಿ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ:ಸರ್ಕಾರಕ್ಕೆ ಎಚ್‌ಡಿಕೆ ತಾಕೀತು

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಸ್ಫೋಟದಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಜಿಲೆಟಿನ್‌ ಸ್ಪೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಆ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಮತ್ತೊಂದು ದುರ್ಘಟನೆ ನಡೆದಿದ್ದು, ಇಲ್ಲಿಯೂ … Continued

ಐಎಂಎ ಹಗರಣದಲ್ಲಿ ನನ್ನ ಪಾತ್ರವಿಲ್ಲ: ಎಚ್‌ಡಿಕೆ ಸ್ಪಷ್ಟನೆ

ಐಎಂಎ ಹಗರಣದಲ್ಲಿ ನನ್ನ ಪಾತ್ರ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಗರಣ ಬೆಳಕಿಗೆ ಬಂದಿತ್ತು. ನಾನು ಸಿಸಿಬಿ ತನಿಖೆಗೆ ಆದೇಶಿಸಿದ್ದೆ. ಆ ವೇಳೆಗೆ ಹಗರಣದ ರೂವಾರಿ ದುಬೈಗೆ ಪರಾರಿಯಾಗಿದ್ದ. ಅಧಿಕಾರಿಗಳು ಅವನನ್ನು ಬಂಧಿಸಿ ತಂದರು. ನಾನೇ ತನಿಖೆಗೆ ಆದೇಶ ನೀಡಿದ ಮೇಲೆ ಹಗರಣದಲ್ಲಿ ನನ್ನ ಪಾತ್ರ ಎಲ್ಲಿರುತ್ತದೆ ಎಂದರು. … Continued

ರಾಮಮಂದಿರ ನಿರ್ಮಾಣಕ್ಕೆ ಹಣ ಕೊಡದವರ ಮನೆಗಳ ಗುರುತು: ಎಚ್​ಡಿಕೆ ಆತಂಕ

ಬೆಂಗಳೂರು: ‘ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ ಮತ್ತು ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಏಕೆ ಹೀಗೆ ಮಾಡುತ್ತಿದ್ದಾರೆ ಎಂದು ಮಾತ್ರ ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುಲಿದೆ’ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ … Continued

ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಕಣಕ್ಕೆ: ಎಚ್‌ಡಿಕೆ

ಬೆಂಗಳೂರು: ಬಸವಕಲ್ಯಾಣ, ಮಸ್ಕಿ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಅವರು ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿ, ಆರ್ಥಿಕ ಸಾಮರ್ಥ್ಯದ ಕೊರತೆಯಿಂದಾಗಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಲಾಗಿತ್ತು. ಆದರೆ ಈಗ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸೆಣೆಸಲಿದ್ದಾರೆ … Continued