ಗಾಯಗೊಂಡಿದ್ದ ವ್ಯಕ್ತಿ ನೀರು ಕೇಳಿದ್ದರು, ಬಿಪಿನ್ ರಾವತ್ ಎಂದು ನಂತ್ರ ಗೊತ್ತಾಯ್ತು : ಕುನೂರ್‌ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಸಹಾಯಕ್ಕೆ ಬಂದ ಸ್ಥಳೀಯ

ಕುನೂರು: ಕುನೂರ್ ಸಮೀಪ ಬುಧವಾರ (ಡಿಸೆಂಬರ್‌ 8) ಸಂಭವಿಸಿದ ಸೇನಾ ಸಿಬ್ಬಂದಿ ಮುಖ್ಯಸ್ಥ (ಸಿಎಇಎಸ್‌) ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಟೀ ಎಸ್ಟೇಟ್ ಪ್ರದೇಶದಲ್ಲಿ ಈ ಹೆಲಿಕಾಪ್ಟರ್ ಪತನಗೊಂಡಿದ್ದು ಸ್ಥಳೀಯರು ತಮಗೆ ಏಕಾಏಕಿ ಭಾರಿ ಸದ್ದು ಕೇಳಿಸಿದೆ ಹಾಗೂ ದಟ್ಟವಾದ ಹೊಗೆ ಆವರಿಸಿದ್ದು ಕಂಡುಬಂದಿದೆ ಎಂದು ಹೇಳಿದ್ದಾರೆ. … Continued