ಕ್ಷುಲ್ಲಕ ಜಗಳಕ್ಕೆ ಪೊಲೀಸನಿಂದ ಗುಂಡಿನ ದಾಳಿ: ಫುಡ್ ಡೆಲಿವರಿ ಬಾಯ್ ಎದೆ ಸೀಳಿದ ಬುಲೆಟ್, ಮತ್ತೊಬ್ಬನಿಗೆ ಗಂಭೀರ ಗಾಯ

ನವದೆಹಲಿ: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ದೆಹಲಿ ಪೊಲೀಸ್ ಪೇದೆಯೊಬ್ಬ ಫುಡ್ ಡೆಲಿವರಿ ಏಜೆಂಟ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಭಾನುವಾರ ದ್ವಾರಕಾದಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೃತನ ಸ್ನೇಹಿತನಿಗೂ ಗಂಭೀರ ಗಾಯಗಳಾಗಿವೆ. ದ್ವಾರಕಾದ ಜಾಫರ್ಪುರ ಕಲನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ದಿನಗೂಲಿ ಕಾರ್ಮಿಕರಾದ ರೂಪೇಶ … Continued

ಬೆಂಗಳೂರು | ಟೆಕ್ಕಿ ನಂತರ ಹೆಂಡತಿ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಕಾನ್‌ಸ್ಟೆಬಲ್…! ಡೆತ್​ನೋಟ್​ನಲ್ಲಿ ಕಿರುಕುಳದ ಆರೋಪ

ಬೆಂಗಳೂರು : ನಗರದ ಪೊಲೀಸ್ ಪೇದೆಯೊಬ್ಬರು ಪತ್ನಿ ಮತ್ತು ಮಾವನ ಕಿರುಕುಳದ ಹಿನ್ನೆಲೆಯಲ್ಲಿ ಸಮವಸ್ತ್ರದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಬೆಂಗಳೂರಿನ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದ 34 ವರ್ಷದ ಎಚ್‌ಸಿ ತಿಪ್ಪಣ್ಣ ಎಂದು ಪೊಲೀಸರು ಗುರುತಿಸಿದ್ದಾರೆ. ಇವರು ವಿಜಯಪುರ ಜಿಲ್ಲೆಯ ಸಿಂದಗಿ ಸಮೀಪದ ಹಂದಿಗನೂರು ಗ್ರಾಮದವರು. ಬೆಂಗಳೂರಿನಲ್ಲಿ … Continued

ಗೋಕಾಕ : ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಹೆಡ್ ಕಾನ್ಸ್ಟೇಬಲ್ ಅಮಾನತು

ಬೆಳಗಾವಿ : ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ. ಬೆಳಗಾವಿಯಲ್ಲಿ ಪೊಲೀಸರೇ ಹೆಲ್ಮೆಟ್ ಹಾಕುವುದಿಲ್ಲ ಎಂದು ಸಾರ್ವಜನಿಕರಿಂದ ಆರೋಪ ಬಂದಿದ್ದವು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಶಂಕರ ಗುಳೇದ ಅವರು, ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿದ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ … Continued