ಶಸ್ತ್ರಚಿಕಿತ್ಸೆ ನಂತರ ಚೇತರಿಕೆ : ವೀಡಿಯೊ ಹಂಚಿಕೊಂಡ ಸದ್ಗುರು

ನವದೆಹಲಿ: ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 66 ವರ್ಷದ ಅಧ್ಯಾತ್ಮ ಗುರು ಜಗ್ಗಿ ವಾಸುದೇವ (ಸದ್ಗುರು) ಅವರು ಚೇತರಿಸಿಕೊಳ್ಳುತ್ತಿದ್ದಾರೆ. ತಮ್ಮ ಆರೋಗ್ಯದಲ್ಲಿನ ಚೇತರಿಕೆಯ ಬಗ್ಗೆ ಈಶಾ ಫೌಂಡೇಶನ್‌ ಸಂಸ್ಥಾಪಕರಾದ ಸದ್ಗುರು ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ‘ಸದ್ಗುರು ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ’ ಎಂದು ವೀಡಿಯೊಕ್ಕೆ ಕ್ಯಾಪ್ಶನ್‌ ನೀಡಲಾಗಿದ್ದು, ಸದ್ಗುರು ಅವರು … Continued

ಸಂಸದ ರಮೇಶ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು : ಬೆಳಗಾವಿ ಆಸ್ಪತ್ರೆಗೆ ದಾಖಲು

ಬೆಳಗಾವಿ : ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ. ಅವರಿಗೆ ಮೆದುಳಿನ ರಕ್ತ ಸ್ರಾವ ಸಂಭವಿಸಿದೆ ಎಂದು ವರದಿಯಾಗಿದ್ದು, ಅವರನ್ನು ಬೆಳಗಾವಿಯ ಆಸ್ಪತ್ರೆಗೆ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 71 ವರ್ಷದ ರಮೇಶ ಜಿಗಜಿಣಗಿ ಅವರು ಆರು ಬಾರಿ … Continued

ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ : ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಕಳೆದ 4 ದಿನಗಳ ಹಿಂದೆ ಅನಾರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಉಸಿರಾಟ ಸಮಸ್ಯೆ ಕಾಣಿಸಿಕೊಂಡ ನಂತರ ದೇವೇಗೌಡರನ್ನು ಮಣಿಪಾಲ … Continued

ಏಷ್ಯಾದ ಈ ದೇಶಲ್ಲಿ ಮತ್ತೆ ಕೋವಿಡ್‌-19 ಸೋಂಕು ಉಲ್ಬಣ….ಪ್ರತಿದಿನ 2,000 ಪ್ರಕರಣ ದಾಖಲು…!

ಸಿಂಗಾಪುರ : ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಅವರು ಶುಕ್ರವಾರ ದೇಶವು ಮತ್ತೊಂದು ಕೋವಿಡ್‌-19 ಉಲ್ಬಣದ ಅಲೆಯನ್ನು ಅನುಭವಿಸುತ್ತಿದೆ ಎಂದು ಹೇಳಿದ್ದಾರೆ. ಅಂದಾಜು ದೈನಂದಿನ ಪ್ರಕರಣಗಳು ಮೂರು ವಾರಗಳ ಹಿಂದೆ ಸುಮಾರು 1,000 ಇದ್ದಿದ್ದು, ಕಳೆದ ಎರಡು ವಾರಗಳಲ್ಲಿ 2,000 ಕ್ಕೆ ಏರಿದೆ ಎಂದು ಒಂಗ್ ಹೇಳಿದ್ದಾರೆ. ಆದಾಗ್ಯೂ, ಸರ್ಕಾರ ಇದನ್ನು “ಸ್ಥಳೀಯ … Continued

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಅನಾರೋಗ್ಯ, ಮಾ.೩೧ರಂದು ಶಸ್ತ್ರ ಚಿಕಿತ್ಸೆ

ಮುಂಬೈ: ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಆರೋಗ್ಯ ಹದಗೆಟ್ಟಿದೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ. ಅವರ ಪಿತ್ತಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ. ಭಾನುವಾರ ಸಂಜೆಯಿಂದ ಶರದ್ ಪವಾರ್ ಅವರ ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದ್ದು, ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು. ಅವರ ಪಿತ್ತಕೋಶದಲ್ಲಿ ಕಲ್ಲುಗಳು ಇರುವುದನ್ನು ವೈದ್ಯರು ಪತ್ತೆಹಚ್ಚಿದ್ದಾರೆ. ಹೀಗಾಗಿ ಮುಂದಿನ ಅವರ ಎಲ್ಲ … Continued

ಭಾರತದ ಆರೋಗ್ಯ ಪರಿಸರ ವ್ಯವಸ್ಥೆಯನ್ನು ಜಗತ್ತು ಹೊಸ ದೃಷ್ಟಿಕೋನದಿಂದ ನೋಡುತ್ತಿದೆ: ಪ್ರಧಾನಿ ಮೋದಿ

ಭಾರತೀಯ ಆರೋಗ್ಯ ಪರಿಸರ ವ್ಯವಸ್ಥೆಯನ್ನು ಹೊಸ ದೃಷ್ಟಿಕೋನ, ಗೌರವ ಮತ್ತು ಹೊಸ ವಿಶ್ವಾಸಾರ್ಹತೆಯಿಂದ ನೋಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅ ಅವರು ಎಂಜಿಆರ್‌ ವೈದ್ಯಕೀಯ ವಿಶ್ವವಿದ್ಯಾಲಯದ ೩೩ನೇ ಘಟಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಕೊರೊನಾ ರೋಗದ ವಿರುದ್ಧದ ಹೋರಾಟದಲ್ಲಿ ನೆರೆಯ ರಾಷ್ಟ್ರಗಳಿಗೆ ನೆರವು ನೀಡುವಲ್ಲಿ ಭಾರತದ ಪ್ರಯತ್ನ ಶ್ಲಾಘನೀಯವಾಗಿದೆ ಎಂದರು. ಭಾರತವು ಕೇವಲ ಹೊಸ … Continued