ಹದಗೆಟ್ಟ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಆರೋಗ್ಯ ; ಆಸ್ಪತ್ರೆಗೆ ದಾಖಲು

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲಾ ಅಗತ್ಯ ಪರೀಕ್ಷೆಗಳನ್ನು ನಡೆಸುತ್ತಿದ್ದರೂ ವೈದ್ಯರು ಅವರನ್ನು ನಿಗಾದಲ್ಲಿ ಇರಿಸಿದ್ದಾರೆ. 52 ವರ್ಷ ವಯಸ್ಸಿನ ವಿನೋದ ಕಾಂಬ್ಳಿ ಅವರು ಇತ್ತೀಚೆಗೆ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕದಲ್ಲಿ ತಮ್ಮ ಬಾಲ್ಯದ ಗೆಳೆಯ ಮತ್ತು ಭಾರತೀಯ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ … Continued

ರತನ್‌ ಟಾಟಾ ಆರೋಗ್ಯ ಸ್ಥಿತಿ ಗಂಭೀರ : ವರದಿ

ಮುಂಬೈ: ದೇಶದ ಪ್ರಮುಖ ಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್‌ನ ವಿಶ್ರಾಂತ ಅಧ್ಯಕ್ಷ ರತನ್‌ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮುಂಬೈನ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವರದಿಗಳು ಹೇಳಿವೆ. ಮುಂಬೈ : ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ … Continued

ಸಿಪಿಐ(ಎಂ) ಮುಖಂಡ ಸೀತಾರಾಮ ಯೆಚೂರಿ ಸ್ಥಿತಿ ʼಚಿಂತಾನಜಕʼ

ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಮತ್ತು ಪ್ರಸ್ತುತ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ನವದೆಹಲಿಯಲ್ಲಿ ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಪಕ್ಷವು ಮಂಗಳವಾರ ತಿಳಿಸಿದೆ. 72 ವರ್ಷದ ರಾಜಕಾರಣಿ ಯೆಚೂರಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ ಮತ್ತು ತೀವ್ರ ಉಸಿರಾಟದ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ … Continued

ಬೆಳಗಾವಿ | ಚಚಡಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿಭೇದಿ; 41 ಜನ ಆಸ್ಪತ್ರೆಗೆ ದಾಖಲು

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 41 ಜನ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ತೀವ್ರ ಅಸ್ವಸ್ಥಗೊಂಡ ಮೂವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಇತರ ಮೂವರನ್ನು ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ವಾರದಿಂದ ಗ್ರಾಮದ ಜನರಲ್ಲಿ ವಾಂತಿಭೇದಿ ಕಾಣಿಸಿಕೊಂಡಿದೆ. ಇದು ಸೋಮವಾರ ಹತೋಟಿ ಮೀರಿದೆ. ಒಂದೇ … Continued

ಹಿರಿಯ ಪತ್ರಕರ್ತ ಶಶಿಧರ ಭಟ್ಟರಿಗೆ ಅನಾರೋಗ್ಯ : ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿರಿಯ ಪತ್ರಕರ್ತರಾದ ಶಶಿಧರ ಭಟ್ ಅವರು ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದು, ಅವ ಆಸ್ಪತ್ರೆ ಪೂರ್ತಿ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಶಿಧರ್‌ ಭಟ್‌ ಅವರ ಆರೋಗ್ಯ … Continued

ಖಾನಾಪುರ | ಮಹಿಳೆಗೆ ಅನಾರೋಗ್ಯ ; ಧಾರಾಕಾರ ಮಳೆಯಲ್ಲೇ 5 ಕಿಮೀ ದೂರ ಜೋಲಿಯಲ್ಲಿ ಹೊತ್ತು ತಂದ ಗ್ರಾಮಸ್ಥರು…!

ಬೆಳಗಾವಿ: ದಟ್ಟ ಅರಣ್ಯ ಪ್ರದೇಶವಾದ ಖಾನಾಪುರ ತಾಲೂಕಿನ ಆಮಗಾಂವ ಗ್ರಾಮದ ಮಹಿಳೆಯೊಬ್ಬರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಸುರಿಯುತ್ತಿರುವ ಧಾರಾಕಾರ ಮಳೆಯಲ್ಲೇ ಅವರನ್ನು ಜೋಲಿ ಮಾಡಿ ಹೊತ್ತು ತಂದು ಆಸ್ಪತ್ರೆಗೆ ಸೇರಿಸಿರುವ ಘಟನೆ ವರದಿಯಾಗಿದೆ. ಖಾನಾಪುರ ತಾಲೂಕಿನಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಶುಕ್ರವಾರ ಖಾನಾಪುರ ತಾಲೂಕಿನ ಆಮಗಾಂವ ಗ್ರಾಮದ ಹರ್ಷದಾ ಹರಿಶ್ಚಂದ್ರ ಘಾಡಿ (38) ಮಹಿಳೆಗೆ ಇದ್ದಕ್ಕಿದ್ದಂತೆ … Continued

ವಿಚಾರಣೆ ವೇಳೆ ಪವಿತ್ರಾ ಗೌಡ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ಬೆಂಗಳೂರು: ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಚಿತ್ರನಟ ದರ್ಶನ್‌ ಸ್ನೇಹಿತೆ ಹಾಗೂ ಕೊಲೆ ಪ್ರಕರಣ ಮೊದಲ ಆರೋಪಿ ಪವಿತ್ರಾ ಗೌಡ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದು, ಪೊಲೀಸರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರ ಕಸ್ಟಡಿಯಲ್ಲಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಗೆಳತಿ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದು, ಹೀಗಾಗಿ ಇಂದು ಮಂಗಳವಾರ … Continued

ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರನ್ನು ತಕ್ಷಣ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ. ಶಾಮನೂರು ಶಿವಶಂಕರಪ್ಪ ಅವರಿಗೆ ಉಸಿರಾಟ ಹಾಗೂ … Continued

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು

ಶಿವಮೊಗ್ಗ : ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ. ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರನ್ನು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಗೋಡು ತಿಮ್ಮಪ್ಪನವರಿಗೆ ಜ್ವರ ಹಾಗೂ ತೀವ್ರ ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಕುಟುಂಬದವರು … Continued

ಶಸ್ತ್ರಚಿಕಿತ್ಸೆ ನಂತರ ಚೇತರಿಕೆ : ವೀಡಿಯೊ ಹಂಚಿಕೊಂಡ ಸದ್ಗುರು

ನವದೆಹಲಿ: ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 66 ವರ್ಷದ ಅಧ್ಯಾತ್ಮ ಗುರು ಜಗ್ಗಿ ವಾಸುದೇವ (ಸದ್ಗುರು) ಅವರು ಚೇತರಿಸಿಕೊಳ್ಳುತ್ತಿದ್ದಾರೆ. ತಮ್ಮ ಆರೋಗ್ಯದಲ್ಲಿನ ಚೇತರಿಕೆಯ ಬಗ್ಗೆ ಈಶಾ ಫೌಂಡೇಶನ್‌ ಸಂಸ್ಥಾಪಕರಾದ ಸದ್ಗುರು ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ‘ಸದ್ಗುರು ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ’ ಎಂದು ವೀಡಿಯೊಕ್ಕೆ ಕ್ಯಾಪ್ಶನ್‌ ನೀಡಲಾಗಿದ್ದು, ಸದ್ಗುರು ಅವರು … Continued