ಶಾಕಿಂಗ್‌ ಸುದ್ದಿ ; ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ-ಜೂನ್‌ನಲ್ಲಿ ಕ್ಷೀಣ ; ಶಾಖದ ಅಲೆ ತೀವ್ರ : ಹವಾಮಾನ ಇಲಾಖೆ

ನವದೆಹಲಿ: ದೇಶದ ಬಹುತೇಕ ಭಾಗಗಳು ಭೀಕರ ಬೇಸಿಗೆಯ ಬಿಸಿಲ ಧಗೆಯಿಂದ ತತ್ತರಿಸುತ್ತಿರುವ ಬೆನ್ನಲ್ಲೇ, ಸಾರ್ವಜನಿಕರಿಗೆ ಹಾಗೂ ಕೃಷಿ ವಲಯಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಮತ್ತೊಂದು ಆಘಾತಕಾರಿ ಸುದ್ದಿ ನೀಡಿದೆ. ಹವಾಮಾನ ಇಲಾಖೆಯು ಶುಕ್ರವಾರದ ತನ್ನ ಮುನ್ಸೂಚನೆಯಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯ ನೈಋತ್ಯ ಮುಂಗಾರು ಮಳೆಯ ಪ್ರಮಾಣವನ್ನು ಶೇ. 92 ರಿಂದ ಶೇ. 90ಕ್ಕೆ ಇಳಿಕೆ … Continued

ಕುದಿಯುತ್ತಿದೆ ಭಾರತ : ಜಗತ್ತಿನ ಅತಿ ಹೆಚ್ಚು ತಾಪಮಾನವಿರುವ 100 ನಗರಗಳಲ್ಲಿ ಭಾರತದಲ್ಲೇ ಇವೆ 95 ನಗರಗಳು..!

ನವದೆಹಲಿ: ಪ್ರಸ್ತುತ ಭಾರತದಾದ್ಯಂತ ಹಲವು ಪ್ರದೇಶಗಳಲ್ಲಿ ತೀವ್ರವಾದ ಬಿಸಿಗಾಳಿ (Heatwave) ಆವರಿಸಿದೆ. ರಿಯಲ್-ಟೈಮ್ ಜಾಗತಿಕ ತಾಪಮಾನ ಶ್ರೇಯಾಂಕದ ಪ್ರಕಾರ, ಭಾರತವು ಪ್ರಸ್ತುತ ಜಾಗತಿಕ ತಾಪಮಾನ ಏರಿಕೆಯ ಕೇಂದ್ರಬಿಂದುವಾಗಿದೆ. ವಿಶ್ವದ 100 ಅತ್ಯಂತ ಹೆಚ್ಚು ತಾಪಮಾನ ಇರುವ ನಗರಗಳ ಪಟ್ಟಿಯಲ್ಲಿ ಬರೋಬ್ಬರಿ 95 ನಗರಗಳು ಭಾರತದ್ದೇ ಆಗಿವೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ನಗರ ಮತ್ತು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ; ಕೆಲವಡೆ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತಾಪಮಾನ (Karnataka Weather)  ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂಬರುವ ದಿನಗಳಲ್ಲಿ  ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ … Continued

ಕರ್ನಾಟಕಕ್ಕೆ ಬಿಸಿ ಗಾಳಿಯ ಆತಂಕ : ತಾಪಮಾನ 45 ಡಿಗ್ರಿ ತಲುಪುವ ಸಾಧ್ಯತೆ, ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನದ ಬೇಗೆ ಮಿತಿಮೀರಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನದಲ್ಲಿ ಭಾರೀ ಏರಿಕೆಯಾಗಿದ್ದು, ಜನಜೀವನ ತತ್ತರಿಸಿದೆ. ಮುಂದಿನ ಎರಡು ದಿನಗಳಲ್ಲಿ ಬಿಸಿಗಾಳಿ (Heatwave) ಮತ್ತಷ್ಟು ತೀವ್ರಗೊಳ್ಳಲಿದ್ದು, ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ  ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಕಲ್ಯಾಣ ಕರ್ನಾಟಕದ ಭಾಗಗಳಲ್ಲಿ ಸದ್ಯ ತೀವ್ರ ಸೆಖೆ ಆವರಿಸಿದೆ. ಮುಂಬರುವ … Continued

ಕರ್ನಾಟಕ ಕೆಲವು ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ ; ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಬಿಸಿಗಾಳಿ ಮತ್ತು ಅಧಿಕ ಆರ್ದ್ರತೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ  ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಆರ್ದ್ರತೆ ಸಹ ಹೆಚ್ಚಾಗುವುದರಿಂದ  ಸೆಕೆ ಅನುಭವ ಜಾಸ್ತಿ ಆಗುವ ಸಾಧ್ಯತೆ ಇದೆ. ಅರಬ್ಬಿ … Continued

ಕರ್ನಾಟಕದ ಉತ್ತರ ಒಳನಾಡಿನಲ್ಲಿ 3 ದಿನ ಬಿಸಿಗಾಳಿ ಸಾಧ್ಯತೆ ; ದಕ್ಷಿಣ ಒಳನಾಡಿನ ಕೆಲಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನಲ್ಲಿ ಮಾರ್ಚ್‌ 18ರಿಂದ 22ರ ವರೆಗೆ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪೈಕಿ ಮಾರ್ಚ್‌ 18 ಮತ್ತು 19ರಂದು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು ಬಾಗಲಕೋಟ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇರುವ … Continued

ಕರ್ನಾಟಕದಲ್ಲೇ ಅತಿ ಹೆಚ್ಚು 42.9°C ಉಷ್ಣಾಂಶ ಉತ್ತರ ಕನ್ನಡದಲ್ಲಿ ದಾಖಲು…! ಕರಾವಳಿಯ 27 ಕಡೆ 38°Cಗಿಂತ ಹೆಚ್ಚು ತಾಪಮಾನ…!!

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗ ತಾಪಮಾನ ಹೆಚ್ಚಳದಿಂದ ಬಿಸಿ ಕೆಂಡವಾಗಿ ಮಾರ್ಪಟ್ಟಿದೆ. ಕರಾವಳಿ ಭಾಗದ ಅನೇಕ ಪ್ರದೇಶಗಳಲ್ಲಿ ತಾಪಮಾನ ಬುಧವಾರ ತಾಪಮಾನ 1.6°C ನಿಂದ 3.0°Cರಷ್ಟು ಹೆಚ್ಚಳವಾಗಿದೆ. ಬುಧವಾರ (ಮಾರ್ಚ್ 12) ಬೆಳಿಗ್ಗೆ 8:30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಾವಂತವಾಡ ಹೋಬಳಿಯಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಅಂದರೆ ಗರಿಷ್ಠ 42.9 … Continued

ಕರ್ನಾಟಕದ ಕರಾವಳಿ ಕೆಂಡ : 17 ಕಡೆ 39 ಡಿಗ್ರಿಗಿಂತ ಹೆಚ್ಚಿನ ಉಷ್ಣಾಂಶ ದಾಖಲು ; ಉತ್ತರ ಕನ್ನಡದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ

ಬೆಂಗಳೂರು : ಕರಾವಳಿ ಕರ್ನಾಟಕದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಮಾರ್ಚ್‌ 2 ಮತ್ತು 3ರಂದು ಸಹ ಬಿಸಿಗಾಳಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಸಾವಂತವಾಡಿ ಹೋಬಳಿಯಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಅಂದರೆ 41.1 ಡಿಗ್ರಿ ಸೆಲ್ಸಿಯಸ್‌  ಉಷ್ಣಾಂಶ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 17 ಕಡೆ 39 ಡಿಗ್ರಿಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ. … Continued

ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ : ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಉಷ್ಣ ಅಲೆ (ಬಿಸಿ ಗಾಳಿ) ಮುನ್ನೆಚ್ಚರಿಕೆ ನೀಡಿದ್ದು, ಜನರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಶಿಯಸ್‌ ದಾಟಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ. ಬುಧವಾರ (ಫೆ 26) ಅಪರಾಹ್ನ ಬಿಡುಗಡೆ … Continued

ವೀಡಿಯೊ: ತಾಪಮಾನ ಹೆಚ್ಚಳದಿಂದ ವಿದ್ಯಾರ್ಥಿಗಳು ಪಾರಾಗಲು ಕ್ಲಾಸ್‌ ರೂಮ್‌ ಅನ್ನೇ ಈಜುಕೊಳವಾಗಿ ಪರಿವರ್ತಿಸಿದ ಶಾಲೆ…!

ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಜನರು ವಿಪರೀತ ತಾಪಮಾನದಿಂದಾಗಿ ತತ್ತರಿಸಿದ್ದಾರೆ. ತಾಪಮಾನ ಹೆಚ್ಚಳದಿಂದ ಶಾಲಾ ವಿದ್ಯಾರ್ಥಿಗಳಿಗೂ ತೊಂದರೆಯಾಗಿದೆ. ಉತ್ತರ ಪ್ರದೇಶದ ಕನೌಜ್‌ನ ಶಾಲೆಯೊಂದು ಬಿಸಿಲಿನ ತಾಪಮಾನ ಎದುರಿಸಲು ಶಾಲಾ ಕೊಠಡಿಯನ್ನೇ ಈಜುಕೊಳವನ್ನಾಗಿ ಪರಿವರ್ತಿಸಿದೆ. ಶಾಖದ ಅಲೆಯಿಂದಾಗಿ ತಾಪಮಾನ ದಾಖಲೆ ಮಟ್ಟದಲ್ಲಿ ಏರಿದ್ದರಿಂದ ಅನೇಕ ಮಕ್ಕಳು ಮನೆಯಲ್ಲೇ ಇರುವ ಪರಿಸ್ಥಿತಿ ತಲೆದೋರಿದೆ. ಹೀಗಾಗಿ ಶಾಲೆ ಮಕ್ಕಳು ಶಾಲೆಗೆ … Continued