ಶಿರಸಿ : ಮಳೆ ಅಬ್ಬರಕ್ಕೆ ಹಲವೆಡೆ ಹೊಳೆಯಂತಾದ ರಸ್ತೆಗಳು, ಬಡಾವಣೆಗಳು ಜಲಾವೃತ

ಶಿರಸಿ; ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಶಿರಸಿ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳ ಮೇಲೆ ನೀರು ನಿಂತಿರುವುದರಿಂದ ವಾಹನ ಸಂಚಾರ ನಿಧಾನಗೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿರುವ ಕಾರಣ ನಿವಾಸಿಗಳು … Continued

ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಸಾಧ್ಯತೆ !

ನವದೆಹಲಿ: ದೇಶದ ನೈಋತ್ಯ ಮುಂಗಾರು ಆಗಸ್ಟ್ ಮೊದಲಾರ್ಧದಲ್ಲಿ ಮತ್ತಷ್ಟು ಬಲಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಕಳೆದ ಕೆಲವು ವಾರಗಳಿಂದ ದೇಶದ ಹಲವು ಭಾಗಗಳಲ್ಲಿ ಮಳೆ ಕೊರತೆ ಕಂಡುಬಂದಿದ್ದರೂ, ಮುಂಗಾರು ಮತ್ತೆ ಚುರುಕುಗೊಂಡಿರುವುದರಿಂದ ಪರಿಸ್ಥಿತಿ ವೇಗವಾಗಿ ಸುಧಾರಿಸುತ್ತಿದೆ. ಇದರ ಪರಿಣಾಮವಾಗಿ ದಕ್ಷಿಣ ಭಾರತ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ … Continued

ವಿಡಿಯೊ…| ಭಾರಿ ಮಳೆ : ಪಾತಾಳಗಂಗಾ ನದಿಗೆ ಕೊಚ್ಚಿಹೋದ 3 ಸಾವಿರದಷ್ಟು ಅಡುಗೆ ಅನಿಲ (LPG) ಸಿಲಿಂಡರ್‌ಗಳು….!

ಮುಂಬೈ : ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹದ ಪರಿಣಾಮ, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL)ನ ಎಲ್‌ಪಿಜಿ ಬಾಟಲಿಂಗ್ ಘಟಕದಿಂದ ಸಾವಿರಾರು ಅಡುಗೆ ಅನಿಲ (LPG) ಸಿಲಿಂಡರ್‌ಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ವರದಿಯಾಗಿದೆ. ಪಾತಾಳಗಂಗಾ ನದಿಯಲ್ಲಿ ಸಿಲಿಂಡರ್‌ಗಳು ತೇಲುತ್ತಾ ಸಾಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯ … Continued

ಭಾರಿ ಮಳೆ ಮುನ್ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆ ಶಾಲೆ-ಪಿಯು ಕಾಲೇಜುಗಳಿಗೆ ಜುಲೈ 8ಕ್ಕೆ ರಜೆ ಘೋಷಣೆ

ಮಂಗಳೂರು : ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಬುಧವಾರ (ಜುಲೈ 8) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ ಎಚ್.ವಿ. … Continued

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ಬುಧವಾರ (ಜುಲೈ ೮) ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 10ರ ವರೆಗೆ ಅತಿ ಭಾರಿ ಗಾಳಿಮಳೆಯಾಗುವ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ(IMD)ಯು ಕರ್ನಾಟಕದ ಹಲವು ಭಾಗಗಳಿಗೆ ಹೊಸದಾಗಿ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆ, ಗುಡುಗು-ಮಿಂಚು, ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆ ನೀಡಿರುವ … Continued

ಜುಲೈ 2ಕ್ಕೆ ಕರ್ನಾಟಕದ ಹಲವೆಡೆ ಅತಿ ಭಾರಿ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹವಾಮಾನ ಇಲಾಖೆಯು ಜುಲೈ 2 ಕ್ಕೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಅಲ್ಲದೆ, 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಹವಾಮಾನ ಕೇಂದ್ರ ಬಿಡುಗಡೆ ಮಾಡಿರುವ ಮುನ್ಸೂಚನೆ ವರದಿಯ ಪ್ರಕಾರ, ರಾಜ್ಯದ ಕರಾವಳಿ … Continued

ಭಾರಿ ಮಳೆ ; ಜುಲೈ 2ರಂದು ದ.ಕ. ಜಿಲ್ಲೆಯ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪಿಯು ಕಾಲೇಜುಗಳಿಗೆ ಗುರುವಾರ(ಜುಲೈ 2) ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ ಎಂಬ … Continued

ಕರ್ನಾಟಕದಾದ್ಯಂತ 3-4 ದಿನ ಭಾರೀ ಮಳೆ ಮುನ್ಸೂಚನೆ ; ಕರಾವಳಿ, ಮಲೆನಾಡಿನ ಕೆಲಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ತೀವ್ರಗೊಂಡ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುನ್ಸೂಚನೆ ನೀಡಿದೆ. ಇತ್ತೀಚಿನ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅದರಲ್ಲೂ ವಿಶೇಷವಾಗಿ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ … Continued

ಬೆಂಗಳೂರಿನಲ್ಲಿ ಘೋರ ದುರಂತ: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ಸಾವು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬುಧವಾರ ಸಂಜೆ ಆರ್ಭಟಿಸಿದ ಭೀಮರೂಪಿ ಮಳೆ ಭೀಕರ ದುರಂತಕ್ಕೆ ಕಾರಣವಾಗಿದೆ. ನಗರದ ಹೃದಯಭಾಗದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಮಳೆಗಾಗಿ ಆಶ್ರಯ ಪಡೆದಿದ್ದ ಆರು ವರ್ಷದ ಮಗು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಸಂಜೆ ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಮತ್ತು … Continued