ಹಾನಿಯಾದ ತೂಗು ಸೇತುವೆ ಮೇಲೆ ಭೋರ್ಗರೆವ ನದಿ ದಾಟಲು ಹುಚ್ಚು ಸಾಹಸ ಮಾಡಿದ ವ್ಯಕ್ತಿ : ಮೈ ಜುಂ ಎನ್ನುವ ದೃಶ್ಯದ ವೀಡಿಯೊ ವೈರಲ್‌

ಪ್ರವಾಹದಿಂದ ತತ್ತರಿಸಿದ ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹಾನಿಗೊಳಗಾದ ತೂಗು ಸೇತುವೆಯ ಮೂಲಕ ಭಾರೀ ಪ್ರವಾಹದಿಂದ ಉಕ್ಕಿ ಹರಿಯುತ್ತಿದ್ದ ನದಿಯನ್ನು ದಾಟಿದ್ದಾನೆ. ಈ ತನ ಹಾನಿಗೊಳಗಾದ ತೂಗು ಸೇತುವೆಯ ಮೂಲಕ ಉಕ್ಕೇರಿದ ನದಿಯನ್ನು ದಾಟಿರುವ ವೀಡಿಯೊ ದೃಶ್ಯಾವಳಿ ಹೊರಹೊಮ್ಮಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು X … Continued

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಮುನ್ಸೂಚನೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಬೆಂಗಳೂರು : ರಾಜ್ಯದ ಬಹುತೇಕ ಕಡೆಗಳಲ್ಲಿ ಸುರಿಯುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಅಮಾಹುತಕ್ಕೆ ಕಾರಣವಾಗುದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್​ ಅಲರ್ಟ್ (red alert) ಘೋಷಣೆ ಮಾಡಿದ್ದು, ಕೆಲ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳೀಗೂ ರಜೆ ಘೋಷಿಲಾಗಿದೆ. ಉಡುಪಿ, ದಕ್ಷಿಣ ಕನ್ನಡ, … Continued

ಇಂದು (ಮೇ 29) ಕರ್ನಾಟಕದ 6 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ನೆಚ್ಚರಿಕೆ ; ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಗುರುವಾರ (ಮೇ 29) ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ , ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೈಸೂರು, ಉಡುಪಿ, … Continued

ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ : ಜೂನ್ ನಿಂದ ಸೆಪ್ಟೆಂಬರ್ ಅವಧಿಗೆ ಹವಾಮಾನ ಇಲಾಖೆ ತನ್ನ ಮಾನ್ಸೂನ್ ಮುನ್ಸೂಚನೆಯನ್ನು ಸ್ವಲ್ಪ ಪರಿಷ್ಕರಿಸಿದೆ, ದೀರ್ಘಾವಧಿಯ ಸರಾಸರಿಯ 106 ಪ್ರತಿಶತದಷ್ಟು ಮಳೆಯಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದ್ದು, ಇದು ಹಿಂದಿನ ಅಂದಾಜಿನ 105 ಪ್ರತಿಶತಕ್ಕಿಂತ ಹೆಚ್ಚಾಗಿದೆ. ಈ ಮುನ್ಸೂಚನೆಯಲ್ಲಿ ಪ್ಲಸ್ ಅಥವಾ ಮೈನಸ್ ಶೇಕಡಾ 4 ರಷ್ಟು ಸಂಭವನೀಯ ವ್ಯತ್ಯಾಸವಾಗಬಹುದು ಎಂದು ಹೇಳಿದೆ. … Continued

ಭಾರಿ ಮಳೆ ಮುನ್ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 27, 28 ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಮೇ 27 ಮತ್ತು28ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್‌ಇ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ … Continued

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ : ಕರ್ನಾಟಕದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ ; 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು … Continued

ಭಾರಿ ಮಳೆ ಮುನ್ನೆಚ್ಚರಿಕೆ : ಉತ್ತರ ಕನ್ನಡ ಜಿಲ್ಲೆ ಅಂಗನಾಡಿಗಳಿಗೆ ಮೇ 21 ರಂದು ರಜೆ ಘೋಷಣೆ

ಕಾರವಾರ: ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಇರುವ ಎಲ್ಲ ಅಂಗನವಾಡಿಗಳಿಗೆ ಮೇ 21 ರಂದು ಬುಧವಾರ ರಜೆ ಘೋಷಣೆ ಮಾಡಿದ್ದಾರೆ. ಭಾರತೀಯ ಹವಾಮಾನ ಇಲಾಖೆಯಿ ಮೇ 22ರ ಬೆಳಿಗ್ಗೆ 8:30 ವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸದ್ಯ ಕಿರಿಯ … Continued

ನಾಳೆ (ಮೇ21) ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ; 4 ಜಿಲ್ಲೆಗಳಿಗೆ ರೆಡ್ ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಮೇ 21ರ ಹೊತ್ತಿಗೆ ಕರ್ನಾಟಕ ಕರಾವಳಿಗೆ ಹತ್ತಿರದ ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲೆ ಮೇಲ್ಮಟ್ಟದ ವಾಯುಭಾರ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಮೇ 21 ರಂದು ರಾಜ್ಯ ನಾಲ್ಕು ಜಿಲ್ಲೆಗಳಲ್ಲಿ ಅತ್ಯಂತ ಭಾರಿಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. 6 ಜಿಲ್ಲೆಗಳಿಗೆ … Continued

ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಮೂವರು ಸಾವು

ಬೆಂಗಳೂರು: ಬೆಂಗಳೂರಿನ ಅಪಾರ್ಟ್‌ಮೆಂಟ್ ಸಂಕೀರ್ಣವೊಂದರಲ್ಲಿ ನೀರು ತುಂಬಿದ್ದ ನೆಲಮಾಳಿಗೆಯಲ್ಲಿ ವೃದ್ಧ ಮತ್ತು ಬಾಲಕ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 63 ವರ್ಷದ ಮನಮೋಹನ ಕಾಮತ್ ಅವರು ನೆಲಮಾಳಿಗೆಯಿಂದ ನೀರನ್ನು ಹೊರಹಾಕಲು ಬಾಹ್ಯ ಮೋಟಾರ್ ಬಳಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಈ ವೇಳೆ ವಿದ್ಯುತ್‌ ಪ್ರವಾಹಕ್ಕೆ ಸಿಲುಕಿದ ನೆಲಮಾಳಿಗೆಯೊಳಗೆ ನಿಂತಿದ್ದ ದಿನೇಶ (12) … Continued

ವಾಯುಭಾರ ಕುಸಿತ : ಕರ್ನಾಟಕದಲ್ಲಿ ಮೇ 24ರ ವರೆಗೆ ಭಾರಿ ಮಳೆ ಮುನ್ನೆಚ್ಚರಿಕೆ ; 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ಕರ್ನಾಟಕದಾದ್ಯಂತ ಮೇ 24ರ ವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ. ಕರ್ನಾಟಕದ ಒಳನಾಡಿನಲ್ಲಿ ಟ್ರಫ್ ಇದೆ. ಅರಬ್ಬೀ ಸಮುದ್ರದ ರಾಜ್ಯದ ಕರಾವಳಿಯ ಬಳಿ ಮೇ 22 ರಂದು ವಾಯುಭಾರ ಕುಸಿತ ಆಗಲಿದೆ. ಇದರ ಪ್ರಭಾವದಿಂದ ಮೇ 24ರ ವರೆಗೆ ಕರ್ನಾಟಕದಾದ್ಯಂತ ಉತ್ತಮ ಮಳೆ ಆಗಲಿದೆ … Continued