ಭಾರೀ ಮಳೆ: ಗೋಕರ್ಣ ಮಹಾಬಲೇಶ್ವರ ದೇಗುಲಕ್ಕೆ ನುಗ್ಗಿದ ನೀರು; ಆತ್ಮಲಿಂಗ ಜಲಾವೃತ

ಕಾರವಾರ : ಶುಕ್ರವಾರ ಸುರಿದ ಭಾರೀ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಗೋಕರ್ಣದ ಹಲವು ಕಡೆ ನೀರು ತುಂಬಿದ್ದು, ಮಹಾಬಲೇಶ್ವರ ದೇಗುಲದ ಗರ್ಭಗುಡಿಯೂ ಜಲಾವೃತವಾಗಿ ಆತ್ಮಲಿಂಗ ಗಂಟೆಗಳ ಕಾಲ ರಾಡಿ ನೀರಿನಿಂದ ಮುಳುಗುವಂತಾಯಿತು ಎಂದು ವರದಿಯಾಗಿದೆ. ಹೀಗಾಗಿ ಒಂದು ತಾಸಿಗೂ ಹೆಚ್ಚು ಕಾಲ ಭಕ್ತರಿಗೆ ಆತ್ಮಲಿಂಗದ ದರ್ಶನಕ್ಕೆ ಅವಕಾಶವನ್ನು ಸ್ಥಗಿತಗೊಳಿಸಲಾಗಿತ್ತು.ದೇವಸ್ಥಾನದ ಸಿಬ್ಬಂದಿ … Continued

ರಾಜ್ಯದಲ್ಲಿ ಮುಂಗಾರು ಚುರುಕು: ಶನಿವಾರ 7 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ; ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಮುಂಗಾರು ಮಾರುತಗಳು ಇಡೀ ರಾಜ್ಯವನ್ನು ಆವರಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ (ಜೂನ್‌ 8) ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ ಉಡುಪಿ ಮತ್ತು ಉತ್ತರ ಒಳನಾಡಿನ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ … Continued

ಕರ್ನಾಟಕಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಪ್ರವೇಶ : ಈ ಜಿಲ್ಲೆಗಳಲ್ಲಿ ಭಾರೀ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು: ಎಲ್ಲರೂ ನಿರೀಕ್ಷಿಸುತ್ತಿದ್ದ ನೈರುತ್ಯ ಮುಂಗಾರು (southwest monsoon) ಜೂನ್ 2 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಜೂನ್‌ 5-6ರ ಆಗಮಿಸಲಿದೆ ಎಂದು ನಿರೀಕ್ಷಿಸಲಾಗಿದ್ದ ದಿನಾಂಕಗಳಿಗಿಂತ ಮುಂಚಿತವಾಗಿ ಆಗಮಿಸುತ್ತಿದೆ…! ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿರುವಂತೆ ಕೇರಳಕ್ಕೆ ಗುರುವಾರ (ಮೇ 30) ಮಾನ್ಸೂನ್ ಆಗಮನದ ಹಿನ್ನೆಲೆಯಲ್ಲಿ ಈ ಪ್ರಕಟಣೆ ಬಂದಿದೆ. ನೈಋತ್ಯ ಮಾನ್ಸೂನ್ ಗುರುವಾರ (ಮೇ … Continued

ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಿಗೆ 2 ದಿನ ಬಿಸಿ ಗಾಳಿ, ಕೆಲವು ಕಡೆ “ತೀವ್ರ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಪೂರ್ವ ಭಾರತ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ ಭಾರತದ ಈಶಾನ್ಯ ಪ್ರದೇಶದಲ್ಲಿ ಏಪ್ರಿಲ್ 9 ರವರೆಗೆ ತೀವ್ರ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಒಡಿಶಾ, ಪಶ್ಚಿಮ ಬಂಗಾಳ, … Continued

ವೀಡಿಯೊ..| ಬಿರುಗಾಳಿ ಮಳೆ : ಪಶ್ಚಿಮ ಬಂಗಾಳದಲ್ಲಿ ಐದು ಜನರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ಜಲಪೈಗುರಿ: ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾನುವಾರ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಿದ್ದು, ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ಜಲಪೈಗುರಿ ಜಿಲ್ಲೆಯ ರಾಜರ್‌ಹಾಟ್, ಬರ್ನಿಷ್‌, ಬಾಕಲಿ, ಜೋರ್‌ಪಕಡಿ, … Continued

ವೀಡಿಯೊ..| ಭಾರೀ ಮಳೆಯಿಂದಾಗಿ ಕುಸಿದುಬಿದ್ದ ಗುವಾಹತಿ ವಿಮಾನ ನಿಲ್ದಾಣದ ಮೇಲ್ಛಾವಣಿಯ ಭಾಗ : ಮಾರ್ಗ ಬದಲಿಸಿ ಬೇರೆಡೆ ತೆರಳಿದ ವಿಮಾನಗಳು

ಗುವಾಹತಿ : ಭಾರೀ ಮಳೆಯೊಂದಿಗೆ ಹಠಾತ್ ಬಿರುಗಾಳಿಯ ನಂತರ ಭಾನುವಾರ ಅಸ್ಸಾಂನ ಗುವಾಹತಿಯ ಲೋಕಪ್ರಿಯಾ ಗೋಪಿನಾಥ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗಿನ ಚಾವಣಿಯ ಒಂದು ಭಾಗವು ಕುಸಿದು ಬಿದ್ದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲವಾದರೂ, ಸೀಲಿಂಗ್‌ನ ಒಂದು ಭಾಗದ ಕುಸಿತವು ಅದಾನಿ ಗ್ರೂಪ್-ನಿಯಂತ್ರಿತ ವಿಮಾನ ನಿಲ್ದಾಣದ ಅಧಿಕಾರಿಗಳು ವಿಮಾನಗಳ ಕಾರ್ಯಾಚರಣೆಯನ್ನು ಕೆಲಕಾಲ ಸ್ಥಗಿತಗೊಳಿಸಲು … Continued

ತಮಿಳುನಾಡಿನಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನ ಹಲವು ಭಾಗಗಳಲ್ಲಿ, ಮುಖ್ಯವಾಗಿ ಚೆನ್ನೈನಲ್ಲಿ ಭಾನುವಾರ ಭಾರೀ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ಪುದುಚೇರಿ, ನಾಗಪಟ್ಟಿಣಂ, ಕಿಲ್ವೇಲೂರು ತಾಲೂಕು, ವಿಲುಪುರಂ ಮತ್ತು ಕಡಲೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅದೇ ರೀತಿ ಕಲ್ಲಕುರಿಚಿ, ರಾಣಿಪೇಟ್, ವೆಲ್ಲೂರು ಮತ್ತು ತಿರುವಣ್ಣಾಮಲೈ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪುದುಚೇರಿಯಲ್ಲಿ ಕಳೆದ 24 … Continued

ಚಂಡಮಾರುತದ ಪ್ರಭಾವ : ತಮಿಳುನಾಡಿನಲ್ಲಿ ಭಾರೀ ಮಳೆ ; 4 ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ

ಚೆನ್ನೈ: ದಕ್ಷಿಣ ಶ್ರೀಲಂಕಾ ಕರಾವಳಿಯಲ್ಲಿ ಹಿಂದೂ ಮಹಾಸಾಗರ ಮತ್ತು ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿ ಸೇರಿದಂತೆ ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಭಾನುವಾರ ಭಾರೀ ಮಳೆಯಾಗಿದೆ. ಮಳೆಯ ಕಾರಣ ಡಿಸೆಂಬರ್ 18ರ ಸೋಮವಾರ ಕನ್ಯಾಕುಮಾರಿ, ತೂತುಕುಡಿ, ತಿರುನಲ್ವೇಲಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾನುವಾರ ಸುರಿದ ಭಾರಿ … Continued

ವೀಡಿಯೊಗಳು…| ʼಮೈಚಾಂಗ್ʼ ಚಂಡಮಾರುತ : ಭಾರೀ ಮಳೆಗೆ ಚೆನ್ನೈನಲ್ಲಿ ಜನಜೀವನ ಸ್ಥಗಿತ, ತೇಲುವ ಕಾರುಗಳು, ರಸ್ತೆಯಲ್ಲಿ ಮೊಸಳೆ, ಏರ್‌ಪೋರ್ಟ್ ರನ್‌ ವೇಯಲ್ಲಿ ನೀರೋ ನೀರು

ಚೆನ್ನೈ: ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ರಚನೆಯಾಗಿರುವ ʼಮೈಚಾಂಗ್ʼ ಚಂಡಮಾರುತವು ಆಂಧ್ರ ಕರಾವಳಿಯತ್ತ ಸಾಗುತ್ತಿದ್ದು, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ತಮಿಳುನಾಡಿನ ಉತ್ತರ ಕರಾವಳಿಯ ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ನಾಗಪಟ್ಟಿಣಂ, ತಿರುವಳ್ಳೂರು ಮತ್ತು ಕಡಲೂರು ಜಿಲ್ಲೆಗಳನ್ನು ಒಳಗೊಂಡಂತೆ ಭಾರೀ ಮಳೆಯಾಗುತ್ತಿದೆ ಎಂದು ವರದಿಯಾಗಿದೆ. ಹೊಸದಿಲ್ಲಿ: ನಾಳೆ ಭೂಕುಸಿತಕ್ಕೆ ಅಪ್ಪಳಿಸಲಿರುವ ಮೈಚಾಂಗ್ ಚಂಡಮಾರುತವು ಇನ್ನಷ್ಟು ತೀವ್ರತೆ ತರುವ ಭೀತಿಯಿದ್ದು, … Continued

ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ‘ಮೈಚಾಂಗ್’ ಚಂಡಮಾರುತ : ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮೈಚಾಂಗ್’ ಚಂಡಮಾರುತದಿಂದಾಗಿ ಡಿಸೆಂಬರ್ 3 ರಿಂದ ಉತ್ತರ ತಮಿಳುನಾಡು ಕರಾವಳಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಡಿಸೆಂಬರ್ 4ರ ಸಂಜೆ ಆ ಕರಾವಳಿಯ ಸುತ್ತಮುತ್ತಲಿನ ಪ್ರದೇಶಗಳನ್ನು ದಾಟುವ ಸಾಧ್ಯತೆಯಿದೆ. ವಿಶಾಖಪಟ್ಟಣಂ ಸೈಕ್ಲೋನ್ ವಾರ್ನಿಂಗ್ ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕಿ ಸುನಂದಾ ಅವರ … Continued