ಭಾರೀ ಮಳೆ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದ ನಂತರ ರಾಜ್ಯದ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 24) ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ, ಧಾರವಾಡ, ಕೊಡಗು ಸೇರಿದಂತೆ ಎಂಟು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 24) ಶಾಲಾ ಕಾಲೇಜುಗಳಿಗೆ ರಜೆ … Continued

ಇಂದು ಧಾರವಾಡ ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ನಾಳೆ ಜುಲೈ 24 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭಾನುವಾರ ಸಂಜೆ ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ … Continued

ಭಾರೀ ಮಳೆ : ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ, ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ ಮುಳುಗಡೆ

ಮಂಗಳೂರು : ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಘಟ್ಟ ಪ್ರದೇಶಗಳಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.‌ ಲಗೇಜ್ ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲವೂ ಮುಳುಗಡೆಯಾಗಿದೆ. ಕುಮಾರಧಾರದ ಉಪನದಿ ದರ್ಪಣತೀರ್ಥ ತುಂಬಿ ಹರಿದು ಮಂಜೇಶ್ವರ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ … Continued

ಭಾರೀ ಮಳೆಯಿಂದಾಗಿ ಅಮರನಾಥ ಮಾರ್ಗ ಮಧ್ಯೆ ಗುಡ್ಡ ಕುಸಿತ : ಸಂಕಷ್ಟದಲ್ಲಿ ಸಿಲುಕಿರುವ 80 ಕನ್ನಡಿಗರ ರಕ್ಷಣೆಗೆ ಸಿಎಂ ಸೂಚನೆ

ಬೆಂಗಳೂರು : ಅಮರನಾಥ ಯಾತ್ರೆಗೆ ತೆರಳುವ ಮಾರ್ಗ ಮಧ್ಯೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ ಸುಮಾರು 80 ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿದ್ದಾರೆ. ತಮ್ಮನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಊರಿಗೆ ತೆರಳಲು ವ್ಯವಸ್ಥೆ ಮಾಡುವಂತೆ ವೀಡಿಯೊ ಮೂಲಕ ಪ್ರಧಾನಿ ಮೋದಿಗೆ ಅವರು ಮನವಿ ಮಾಡಿದ್ದಾರೆ. ಗದಗ ಜಿಲ್ಲೆಯ ವಿವಿಧ ಗ್ರಾಮಗಳು ಸೇರಿದಂತೆ ಕಾರ್ನಟಕದ … Continued

ಭಾರೀ ಮಳೆ..: ಜುಲೈ 6 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ವ್ಯಾಪಕ ಮಳೆಯಾಗುತ್ತಿದ್ದು ಇದಕ್ಕಾಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6 … Continued

ಭಾರೀ ಮಳೆ: ಇಂದು ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ಕರಾವಳಿ ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಬುಧವಾರ ಜುಲೈ 5 ರಂದು ರಜೆ ಘೋಷಿಸಲಾಗಿದೆ. ಬೆಂಗಳೂರಿನ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ  ಜುಲೈ 5 ರಂದು ಬೆಳಿಗ್ಗೆ 8:30 ಗಂಟೆ ವರೆಗೆ ಭಾರಿ ಮಳೆ ಬೀಳುವ ಮಾಹಿತಿ … Continued

ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆ ಐದು ತಾಲೂಕುಗಳ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 4ರ ಮಂಗಳವಾರ ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆ ಸುರಿಯುತ್ತಿರುವುದರಿಂದ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ. ಉಳಿದ ತಾಲೂಕಿನಲ್ಲಿ ಮಳೆ … Continued

ಭಾರೀ ಮಳೆಗೆ ಮನೆಗೋಡೆ ಕುಸಿದು 12 ಜನರ ಸಾವು

ಲಕ್ನೋ: ಭಾರೀ ಮಳೆಯಿಂದ ಹಾನಿಗೊಳಗಾದ ನಂತರ ಲಕ್ನೋದಲ್ಲಿ ಒಂಬತ್ತು ಮತ್ತು ಉನ್ನಾವೊದಲ್ಲಿ ಮೂವರು ಸೇರಿದಂತೆ ಉತ್ತರ ಪ್ರದೇಶದಲ್ಲಿ ಪ್ರತ್ಯೇಕ ಗೋಡೆ ಕುಸಿತದ ಘಟನೆಗಳಲ್ಲಿ 12 ಜನರು ಸಾವಿಗೀಡಾಗಿದ್ದಾರೆ. ಶುಕ್ರವಾರ ಲಕ್ನೋದ ದಿಲ್ಕುಶಾ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ … Continued

ಭಾರೀ ಮಳೆಗೆ ನದಿಗಳಾಗಿ ಮಾರ್ಪಟ್ಟ ಬೆಂಗಳೂರಿನ ರಸ್ತೆಗಳು | ವೀಕ್ಷಿಸಿ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಲವೆಡೆ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರಗಳು ಧರೆಗುರುಳಿದೆ.ರಸ್ತೆಗಳು ನದಿಯಾಗಿ ಮಾರ್ಪಟ್ಟಿವೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಜಲಾವೃತವಾಗಿರುವ ರಸ್ತೆಯಲ್ಲಿ ವಾಹನಗಳು ಸಿಲುಕಿಕೊಂಡಿದ್ದು, ಪಾದಚಾರಿಗಳು ನಡೆಯಲು ಪ್ರಯಾಸಪಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕೆಲವು ಪ್ರದೇಶಗಳಲ್ಲಿ ಸಿಕ್ಕಿಬಿದ್ದ ನಾಗರಿಕರನ್ನು ದೋಣಿಗಳ ಸಹಾಯದಿಂದ ಸ್ಥಳಾಂತರಿಸಲಾಯಿತು. ಇಕೋಸ್ಪೇಸ್ ಟೆಕ್ ಪಾರ್ಕ್‌ನಲ್ಲಿ ಜಲಾವೃತಗೊಂಡ ರಸ್ತೆ ಮತ್ತು ಅದರ ಮೂಲಕ … Continued

ಮಳೆಯಿಂದಾಗಿ ಎರಡು ತಿಂಗಳಲ್ಲಿ 64 ಜನರು ಸಾವು : ಸಚಿವ ಅಶೋಕ್ ಮಾಹಿತಿ

ಮಂಡ್ಯ: ರಾಜ್ಯದಲ್ಲಿ ಕಳೆದೆರಡು ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 64 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 14 ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಂದಾಯ ಸಚಿವ ಆರ್‍. ಅಶೋಕ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಮಳೆ ಅವಾಂತರ ಹಿನ್ನೆಲೆಯಲ್ಲಿ ಕೆ.ಆರ್‍. ಪೇಟೆಗೆ ಭೇಟಿ ನೀಡಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜೂನ್ 1ರಿಂದ ಆಗಸ್ಟ್ 4ರ … Continued